ಹುಲಿಗಳ ಸಾವು, 4 ಅಧಿಕಾರಿಗಳ ಅಮಾನತಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಶಿಫಾರಸು
Tigers Death: ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಪಾವತಿ ಮಾಡಲು ಏಪ್ರಿಲ್ ತಿಂಗಳಾಂತ್ಯಕ್ಕೇ ಹಣ ಬಿಡುಗಡೆಯಾಗಿದ್ದರೂ, ಜೂನ್ ತಿಂಗಳವರೆಗೆ ವೇತನ ಪಾವತಿಸದಿರುವುದು ಡಿಸಿಎಫ್ ಚಕ್ರಪಾಣಿ ಅವರ ಮೂಲಭೂತ ಕರ್ತವ್ಯ ಲೋಪವಾಗಿದ್ದು, ಇದು ಗಸ್ತು ಕಾರ್ಯಕ್ಕೆ ಹಿನ್ನಡೆ ಉಂಟು ಮಾಡಿದೆ. ಈ ಸಂಬಂಧ ಡಿಸಿಎಫ್ ಚಕ್ರಪಾಣಿ ಅಮಾನತಿಗೆ ಶಿಫಾರಸು ಮಾಡಿ, ಇಲಾಖಾ ವಿಚಾರಣೆ ಮಾಡಲು ಶಿಫಾರಸು ಮಾಡಿದ್ದಾರೆ.