ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ; ಹಲವೆಡೆ ಟ್ರಾಫಿಕ್ ಜಾಮ್
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29° ಸೆ. ಮತ್ತು 20° ಸೆ. ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.