ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Shidlaghatta News: ಆರು ತಿಂಗಳಾದರೂ ಕಾಮಗಾರಿ ಆರಂಭವಿಲ್ಲ, ನೆಹರೂ ಕ್ರೀಡಾಂಗಣಕ್ಕೆ ಮತ್ತೆ ನಿರ್ಲಕ್ಷ್ಯದ ಕಳಂಕ

ನೆಹರೂ ಕ್ರೀಡಾಂಗಣಕ್ಕೆ ಕೋಟಿ ಅನುದಾನ; ಅಭಿವೃದ್ಧಿ ಮಾತ್ರ ಕಾಗದದಲ್ಲೇ?

ಕ್ರೀಡಾಂಗಣದಲ್ಲಿರುವ ಶೌಚಾಲಯಗಳು ಸಂಪೂರ್ಣ ಹಾಳಾಗಿದ್ದು, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಕಾಂಪೌಂಡ್ ಗೋಡೆ ಹಲವೆಡೆ ಕುಸಿದಿದ್ದು, ಸ್ವಚ್ಛತೆಯ ಕೊರತೆಯಿಂದ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕ್ರೀಡಾಪಟುಗಳು ಪ್ರತಿದಿನ ಅಭ್ಯಾಸ ನಡೆಸುವುದು ಕಷ್ಟಕರವಾಗಿದೆ

MLA S R Srinivas: ಕ್ಯಾನ್ಸರ್ ಪೀಡಿತ ಯೋಗಿತಾಳಿಗೆ ಚಿಕಿತ್ಸೆಗೆ ನೆರವಾದ ತಾಲ್ಲೂಕು ಕಚೇರಿ ಮತ್ತು ತಾಲ್ಲೂಕು ಪಂಚಾಯಿತಿ ಸಿಬ್ಬಂದಿ

ಕ್ಯಾನ್ಸರ್ ಪೀಡಿತ ಯೋಗಿತಾಳಿಗೆ ಚಿಕಿತ್ಸೆಗೆ ನೆರವಾದ ಪಂಚಾಯಿತಿ ಸಿಬ್ಬಂದಿ

ಪಟ್ಟಣದ ಸಮೀಪದ ಜಿ.ಹರಿವೇಸಂದ್ರ ಗ್ರಾಮದ ಮಂಜುನಾಥ್ ನೇತ್ರಾವತಿ ದಂಪತಿಯ ಮಗಳು ಯೋಗಿತಾ ಹತ್ತು ವರ್ಷ ವಯಸ್ಸಿನಲ್ಲೇ ಮೆದುಳು ಕ್ಯಾನ್ಸರ್ ಪೀಡಿತರಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಆಧಾರ್ ಕಾರ್ಡ್ ನಲ್ಲಿ ತಾಂತ್ರಿಕ ದೋಷ ಹಿನ್ನಲೆ ಕುಟುಂಬ ಅಲೆದಾಡಿ ಬೇಸತ್ತಿತ್ತು. ಈ ಮಾಹಿತಿ ತಿಳಿದ ಮಾಧ್ಯಮ ಕೂಡಲೇ ಮಗುವಿನ ನೆರವಿಗೆ ಜಿಲ್ಲಾಡಳಿತವನ್ನು ಎಚ್ಚರಿಸಿತು.

ಬೆಂಗಳೂರಿನ 2ನೇ ವಿಮಾನ ನಿಲ್ದಾಣದ ಬಗ್ಗೆ ಮಹತ್ವದ ಅಪ್‌ಡೇಟ್‌ ಪ್ರಕಟಿಸಿದ ಕೇಂದ್ರ ಸರ್ಕಾರ; ಲೋಕಸಭೆಯಲ್ಲಿ ಹೇಳಿದ್ದೇನು?

ಬೆಂಗಳೂರಿನ 2ನೇ ವಿಮಾನ ನಿಲ್ದಾಣ: ಕೇಂದ್ರ ಸರ್ಕಾರ ಹೇಳಿದ್ದೇನು?

Bengaluru's Second Airport: ರಾಜ್ಯ ಸರ್ಕಾರದಿಂದ ಬೆಂಗಳೂರಿನ 2ನೇ ವಿಮಾನ ನಿಲ್ದಾಣದ ಪ್ರಸ್ತಾವನೆ ಇದುವರೆಗೂ ಸಲ್ಲಿಕೆಯಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಲೋಕಸಭೆಯಲ್ಲಿ ಸಂಸದ ಪಿ.ಸಿ. ಮೋಹನ್ ಕೇಳಿದ ಪ್ರಶ್ನೆಗೆ ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೊಲ್​​​ ಉತ್ತರ ನೀಡಿದ್ದಾರೆ.

Shidlaghatta News: ಜನರ ವಿಶ್ವಾಸ ಗಳಿಸಿದವರಿಗೇ ಗೆಲುವು, ಮತದಾರರೇ ಅಂತಿಮ ತೀರ್ಪು ನೀಡುತ್ತಾರೆ: ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ

ಜನರ ವಿಶ್ವಾಸ ಗಳಿಸಿದವರಿಗೇ ಗೆಲುವು, ಮತದಾರರೇ ಅಂತಿಮ ತೀರ್ಪು ನೀಡುತ್ತಾರೆ

ನಗರದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಎಸ್‌ಐಆರ್ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು,ರಾಜಕೀಯದಲ್ಲಿ ಪ್ರಚಾರಕ್ಕಿಂತ ಜನರ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳೇ ಮುಖ್ಯವಾಗಿದ್ದು, ಕಳೆದ ಅವಧಿಯಲ್ಲಿ ಯಾರು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಿದ್ದಾರೆ ಎಂಬುದನ್ನು ಮತದಾರರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು

MLA KH Puttaswamy Gowda: ಮಾದಕ ವಸ್ತುಗಳಿಗೆ ಗುಡ್‌ಬೈ ಹೇಳಿ: ವಿದ್ಯಾರ್ಥಿಗಳಿಗೆ ಶಾಸಕ ಪುಟ್ಟಸ್ವಾಮಿಗೌಡ ಕಿವಿಮಾತು

ಮಾದಕ ವಸ್ತುಗಳಿಗೆ ಗುಡ್‌ಬೈ ಹೇಳಿ: ವಿದ್ಯಾರ್ಥಿಗಳಿಗೆ ಕಿವಿಮಾತು

ಇಂದಿನ ಯುವಕರು ಸಹವಾಸದೋಷ, ಸ್ನೇಹಿತರ ಒತ್ತಡ ಹಾಗೂ ಕುತೂಹಲದಿಂದ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಒಮ್ಮೆ ವ್ಯಸನಕ್ಕೆ ಒಳಗಾದರೆ ಅದರಿಂದ ಹೊರಬರುವುದು ಕಷ್ಟ. ಪೋಷಕರು ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿ ಕೊಳ್ಳುವತ್ತ ಗಮನಹರಿಸಿ ದುಶ್ಚಟಗಳಿಂದ ದೂರವಿರಬೇಕು

Gudibande News: ಕಾರ್ಗಿಲ್ ವಿಜಯೋತ್ಸವದಲ್ಲಿ ವೀರ ಯೋಧರಿಗೆ ನಮನ

ಕಾರ್ಗಿಲ್ ವಿಜಯೋತ್ಸವದಲ್ಲಿ ವೀರ ಯೋಧರಿಗೆ ನಮನ

ಪಟ್ಟಣದಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣಾ ಸಮಿತಿ ಹಾಗೂ ಪೊಲೀಸ್ ಇಲಾಖೆ ಸಂಯುಕ್ತ ವಾಗಿ ಆಯೋಜಿಸಿದ್ದ ಕಾರ್ಗಿಲ್ ವಿಜಯೋತ್ಸವ, ಮಾದಕ ವಸ್ತುಗಳ ವಿರುದ್ಧ ಜಾಗೃತಿ ಅಭಿಯಾನ ಮತ್ತು ಬೈಕ್ ಜಾಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರತಿಯೊಂದು ಕುಟುಂಬದಿಂದ ಕನಿಷ್ಠ ಒಬ್ಬರು ದೇಶ ರಕ್ಷಣೆಗೆ ಮುಂದಾಗುವ ಮನೋಭಾವ ಬೆಳೆಸಿಕೊಳ್ಳಬೇಕು

Chikkaballapur News: ಆಗಸ್ಟ್ 15ಕ್ಕೆ ಭವ್ಯ ಸಿದ್ಧತೆ; ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಪ್ರಭು ಕಟ್ಟುನಿಟ್ಟಿನ ಸೂಚನೆ

ಹಬ್ಬದ ಸಂಭ್ರಮದಲ್ಲಿ ಸ್ವಾತಂತ್ರ‍್ಯೋತ್ಸವ ಆಚರಣೆಗೆ ಜಿಲ್ಲಾಡಳಿತ ಸಜ್ಜು

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸ್ವಾತಂತ್ರ‍್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಗಸ್ಟ್ 15ರಂದು ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ಮುಖ್ಯ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಗುವುದು ಎಂದು ತಿಳಿಸಿದರು.

ಐತಿಹಾಸಿಕ ತೀರ್ಮಾನ: ನದಿ ಜೋಡಣೆ ಯೋಜನೆಗೆ ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ ಮುಖ್ಯಮಂತ್ರಿಗಳ ಒಪ್ಪಿಗೆ

ಪಕ್ಷ ರಾಜಕಾರಣ ಬದಿಗಿಟ್ಟು ಒಟ್ಟಾಗಿ ಕೆಲಸ ಮಾಡೋಣ: ಡಿಕೆಶಿ

CM DK Shivakumar: ನವದೆಹಲಿಯಲ್ಲಿ ಸೋಮವಾರ ನಡೆದ ರಾಜ್ಯದ ಸಂಸದರ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕೇಂದ್ರ ಸರ್ಕಾರದ ಮುಂದೆ ಬಾಕಿ ಉಳಿದಿರುವ ರಾಜ್ಯದ ನಾನಾ ಯೋಜನೆಗಳಿಗೆ ಅನುಮತಿ ದೊರಕಿಸಿಕೊಡಲು ಸಂಸದರ ಸಹಕಾರ ಬಹುಮುಖ್ಯ ಎಂದು ತಿಳಿಸಿದ್ದಾರೆ.

Nandamoori Balakrishna: ನಟ ಬಾಲಕೃಷ್ಣ ಶೀಘ್ರ ಚೇತರಿಕೆಗೆ ಪ್ರಾರ್ಥನೆ: ಚಿಂತಾಮಣಿಯ ಕೈಲಾಸಗಿರಿಯಲ್ಲಿ 111 ತೆಂಗಿನಕಾಯಿ ಸೇವೆ!

ಚಿಂತಾಮಣಿಯ ಕೈಲಾಸಗಿರಿಯಲ್ಲಿ 111 ತೆಂಗಿನಕಾಯಿ ಸೇವೆ!

ನಂದಮೂರಿ ಬಾಲಕೃಷ್ಣ ಮತ್ತು ನಂದಮೂರಿ ಮೋಕ್ಷಜ್ಞ ಅಭಿಮಾನಿಗಳ ಸಂಘ ಚಿಂತಾಮಣಿ ಇವರ ವತಿಯಿಂದ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ,ನಟ ಬಾಲಕೃಷ್ಣ ಅವರು ಅಭಿನಯಿಸುತ್ತಿರುವ 111ನೇ ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿ ಆದ ಸಣ್ಣ ಪ್ರಮಾಣದ ಕಾಲಿನ ಗಾಯದಿಂದ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ವಿಶೇಷ ಪ್ರಾರ್ಥನೆ ಮಾಡಲಾಯಿತು.

ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಬಿಗ್‌ ರಿಲೀಫ್‌; ತಮಿಳುನಾಡಿನ ಒಪ್ಪಿಗೆ ಅಗತ್ಯವಿಲ್ಲ ಎಂದ ಕೇಂದ್ರ ಸರ್ಕಾರ

ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕಕ್ಕೆ ಜಯ

Mekedatu Project: ಯೋಜನೆ ಜಾರಿಗೆ ಕರ್ನಾಟಕವು ತಮಿಳುನಾಡು, ಕೇರಳಂ ಹಾಗೂ ಪುದುಚೇರಿಯಂತಹ ನೆರೆ ರಾಜ್ಯಗಳ ಪ್ರತ್ಯೇಕ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದೆ. ಜತೆಗೆ ಗಡಿಯೊಳಗೆ ನೀರು ಬಳಕೆಗೆ ಕರ್ನಾಟಕಕ್ಕೆ ಪೂರ್ಣ ಅಧಿಕಾರ ಇದೆ ಎಂದಿದೆ.

Chinthamani News: ಕೈವಾರದಲ್ಲಿ ಮೂರು ದಿನಗಳ ಕಾಲ ನಡೆಯುವ ಗುರುಪೂಜಾ ಸಂಗೀತೋತ್ಸವಕ್ಕೆ ಅದ್ಧೂರಿ ಚಾಲನೆ

ಗುರುಪೂಜಾ ಸಂಗೀತೋತ್ಸವಕ್ಕೆ ಅದ್ಧೂರಿ ಚಾಲನೆ

ಪ್ರಾತ:ಕಾಲದಲ್ಲಿ ದೇವಾಲಯದಲ್ಲಿ ಸದ್ಗುರು ಶ್ರೀಯೋಗಿನಾರೇಯಣ ತಾತಯ್ಯನವರಿಗೆ ವಿಶೇಷ ಪಂಚಾಮೃತ ಅಭಿಷೇಕವನ್ನು ನೆರವೇರಿಸಲಾಯಿತು. ನಂತರ ಅಷ್ಟಾವಧಾನ ಸೇವೆಯನ್ನು ಸಮರ್ಪಿಸಿ ಮಹಾಮಂಗಳಾರತಿಯನ್ನು ಬೆಳಗಲಾಯಿತು. ಮೂರು ದಿನಗಳ ಕಾಲ ನಡೆಯುವ ಗುರುಪೂಜಾ ಸಂಗೀತೋತ್ಸವಕ್ಕೆ  ಧರ್ಮಾಧಿಕಾರಿಗಳಾದ ಎಂ.ಆರ್. ಜಯರಾಮ್ ದಂಪತಿಗಳು ಕಾರ್ಯಕ್ರಮ ಉದ್ಘಾಟಿಸಿದರು.

ಕೆಪಿಎಸ್‍ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಆರೋಪ; ರಾಜ್ಯದಲ್ಲೂ ದೆಹಲಿ ಮಾದರಿ ಹೋರಾಟ ನಡೆಯುತ್ತ?

ಕೆಪಿಎಸ್‍ಸಿ ನೇಮಕಾತಿ ಅಕ್ರಮ ಆರೋಪ; ಸಿಬಿಐ ತನಿಖೆಗೆ ಬಿಜೆಪಿ ಪಟ್ಟು

BJP: ಕೆಪಿಎಸ್‍ಸಿಯ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ₹80 ಲಕ್ಷದವರೆಗೆ ಲಂಚ ಪಡೆದಿರುವ ಗಂಭೀರ ಆರೋಪಗಳಿದ್ದು, ಸಿಬಿಐ ಅಥವಾ ಕರ್ನಾಟಕ ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿ ನೇತೃತ್ವದ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಹಿರಿಯ ಶಾಸಕ ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ.

ದಿಢೀರ್ ದಾಳಿ, ಗೂಂಡಾ ಕಾಯ್ದೆಯಡಿ ಕ್ರಮ; ಅಕ್ರಮ ಮರಳು ಗಣಿಗಾರಿಕೆಯಲ್ಲಿ ತೊಡಗಿರುವವರಿಗೆ ನಡುಕ ಹುಟ್ಟಿಸಿದ ರಾಜ್ಯ ಸರ್ಕಾರ

ಅಕ್ರಮ ಮರಳು ಗಣಿಗಾರಿಕೆ, ಸಾಗಾಣಿಕೆಗೆ ಕಡಿವಾಣ: ಪ್ರಿಯಾಂಕ್ ಖರ್ಗೆ

Priyank Kharge: ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ರಾಜ್ಯದ ನೈಸರ್ಗಿಕ ಸಂಪತ್ತಿನ ಲೂಟಿ ಮಾತ್ರವಲ್ಲ, ಇದು ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸವಾಲು ಎಸೆಯುವ ಗಂಭೀರ ಅಪರಾಧ. ಸರ್ಕಾರ ಯಾವುದೇ ಅಕ್ರಮ ಚಟುವಟಿಕೆಯನ್ನು ಸಹಿಸುವುದಿಲ್ಲ. ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Byrathi Suresh: ಜಿಲ್ಲಾಧಿಕಾರಿಗಳ ಮೂಲಕ ರೈತ ಸಂಘಟನೆಗಳ ಒಕ್ಕೂಟದಿಂದ ಮನವಿ ಸಲ್ಲಿಕೆ

ಬರಪೀಡಿತ ಜಿಲ್ಲೆ ಘೋಷಣೆಗೆ ಉಸ್ತುವಾರಿ ಸಚಿವರಿಗೆ ಮನವಿ

ಮನವಿಯಲ್ಲಿ, ರಾಜ್ಯದಲ್ಲೇ ಅತಿ ಕಡಿಮೆ ಮಳೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದಾಖಲಾಗಿದ್ದು, ಜುಲೈ ತಿಂಗಳು ಕಳೆದರೂ ಬಹುತೇಕ ಕಡೆ ಬಿತ್ತನೆ ನಡೆದಿಲ್ಲ. ಕೆರೆ-ಕಟ್ಟೆಗಳು ಬತ್ತಿ, ಅಂತರ್ಜಲ ಮಟ್ಟ ಕುಸಿದು ನೂರಾರು ಕೊಳವೆಬಾವಿಗಳು ಒಣಗಿವೆ. ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿದ್ದು, ರೈತರು ಹಾಗೂ ಕೃಷಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ವಿವರಿಸಲಾಗಿದೆ

ಮೆಟ್ರೋ ರೈಲು ಹಳಿಗೆ ಹಾರಿ ಯುವಕ ಆತ್ಮಹತ್ಯೆ; ಹಳದಿ ಮಾರ್ಗದ ಸಂಚಾರ ಸ್ಥಗಿತ

ಮೆಟ್ರೋ ರೈಲು ಹಳಿಗೆ ಹಾರಿ ಯುವಕ ಆತ್ಮಹತ್ಯೆ; ಸಂಚಾರ ಸ್ಥಗಿತ

ನಮ್ಮ ಮೆಟ್ರೊ ಹಳದಿ ಮಾರ್ಗದ ಹುಸ್ಕೂರು ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಸೋಮವಾರ ಸಂಜೆ ಯುವಕ ಹಳಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಎಲೆಕ್ಟ್ರಾನಿಕ್ ಸಿಟಿಯಿಂದ ಬೊಮ್ಮಸಂದ್ರ ಕಡೆಗೆ ಸಾಗುವ ಮೆಟ್ರೊ ರೈಲುಗಳು ಸ್ಥಗಿತಗೊಂಡಿವೆ. ಆರ್.ವಿ. ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ ಮಾತ್ರ ಸಂಚಾರ ಮುಂದುವರಿದಿದೆ. ಮೃತನನ್ನು 30-35 ವರ್ಷದ ಯುವಕ ಎಂದು ಗುರುತಿಸಲಾಗಿದೆ.

ಜುಲೈ 29ರಿಂದ ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ; ಪಾರಂಪರಿಕ ಆಚರಣೆಗಳ ವೈಜ್ಞಾನಿಕತೆಯನ್ನು ಸಮಾಜಕ್ಕೆ ತಿಳಿಸಲು ರಾಘವೇಶ್ವರ ಶ್ರೀ ಕರೆ

ಜುಲೈ 29ರಂದು ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯಕ್ಕೆ ಚಾಲನೆ

Sri Raghaveshwara Bharathi Swamiji: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಅಶೋಕೆಯ ಪರಿಸರದಲ್ಲಿ ಜುಲೈ 29ರಿಂದ ಸೆಪ್ಟೆಂಬರ್‌ 26ರವರೆಗೆ ಅನ್ನಬ್ರಹ್ಮ ಚಾತುರ್ಮಾಸ್ಯ ನಡೆಯಲಿದೆ. ಇದರ ಅಂಗವಾಗಿ ಜುಲೈ 27ರಂದು ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿ ಮಾತನಾಡಿದರು.

ನೀಟ್‌ ಹೋರಾಟಕ್ಕೆ ಸಂಬಂಧಿಸಿದ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕ ಸಿ.ಟಿ. ರವಿಗೆ ಬಿಗ್‌ ರಿಲೀಫ್‌; ಬಂಧನಕ್ಕೆ ಹೈಕೋರ್ಟ್‌ ತಡೆ

ನೀಟ್‌ ಹೋರಾಟಕ್ಕೆ ಸಂಬಂಧಿಸಿದ ಹೇಳಿಕೆ: ಬಂಧನ ಭೀತಿಯಿಂದ ಸಿ.ಟಿ. ರವಿ ಪಾರು

CT Ravi: ನೀಟ್ ಪ್ರತಿಭಟನೆ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್‌ಐಆರ್ ಪ್ರಕರಣ ಚಿಕ್ಕಮಗಳೂರಿನಿಂದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ. ಅಲ್ಲದೆ ಎಫ್ಐಆರ್ ಪ್ರಶ್ನಿಸಿ ಸಿ.ಟಿ. ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಜುಲೈ 31ಕ್ಕೆ ವಿಚಾರಣೆ ಮುಂದೂಡಿದೆ. ಇದರಿಂದ ಬಂಧನದ ಭೀತಿಯಿಂದ ಅವರು ಪಾರಾಗಿದ್ದಾರೆ.

Dr Shalini Rajaneesh: ತಂತ್ರಜ್ಞಾನಕ್ಕೆ ಕರುಣೆ, ನೈತಿಕತೆಯ ಸ್ಪರ್ಶವಿರಲಿ: ಡಾ.ಶಾಲಿನಿ ರಜನೀಶ್

ತಂತ್ರಜ್ಞಾನಕ್ಕೆ ಕರುಣೆ, ನೈತಿಕತೆಯ ಸ್ಪರ್ಶವಿರಲಿ

ಗ್ರಾಮೀಣ ಯುವಕರಿಗೆ ಎಐ ಕೌಶಲಗಳನ್ನು ಕಲಿಸುವುದಷ್ಟೇ ಅಲ್ಲ, ಸಮಾಜದ ಒಳಿತಿಗಾಗಿ ತಂತ್ರಜ್ಞಾನ ವನ್ನು ಹೇಗೆ ಬಳಸಬೇಕು ಎಂಬ ಮೌಲ್ಯಗಳನ್ನೂ ಬೆಳೆಸುವುದು ಅಗತ್ಯ. ಶಿಕ್ಷಣ, ಕೌಶಲಾಭಿವೃದ್ಧಿ ಹಾಗೂ ಉದ್ಯೋಗಾವಕಾಶಗಳನ್ನು ಗ್ರಾಮಗಳ ಬಾಗಿಲಿಗೆ ತಲುಪಿಸುವ ಇಂತಹ ಪ್ರಯತ್ನಗಳು ಗ್ರಾಮೀಣ ಆರ್ಥಿಕತೆಯನ್ನು ಮತ್ತಷ್ಟು ಸದೃಢಗೊಳಿಸಲಿವೆ

Shidlaghatta News: ಶಿಡ್ಲಘಟ್ಟದಲ್ಲಿ ಸುಭಿಕ್ಷಕ್ಕಾಗಿ ಮರವತ್ತೂರು ಅಮ್ಮನವರಿಗೆ ವಿಶೇಷ ಪೂಜಾ ಕೈಂಕರ್ಯ

ನಾಡಿನ ಒಳಿತಿಗಾಗಿ ಮರವತ್ತೂರು ಅಮ್ಮನವರಿಗೆ ವಿಶೇಷ ಪೂಜೆ

ಗಂಗಮ್ಮದೇವಿ ವಸಂತ್ ಮಾತನಾಡಿ, ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆ ಯಲ್ಲಿ ಶಿಡ್ಲಘಟ್ಟದ ವಿವಿಧ ಮಂಡಳಿಗಳ ಭಕ್ತರು ಒಗ್ಗೂಡಿ ವಿಶೇಷ ಪೂಜೆ ಹಮ್ಮಿಕೊಂಡಿದ್ದಾರೆ. ದೇವಿಯ ಆಶೀರ್ವಾದದಿಂದ ಉತ್ತಮ ಮಳೆಯಾಗಿ ರಾಜ್ಯದಲ್ಲಿ ಸುಭಿಕ್ಷತೆ ನೆಲೆಸಲಿ ಎಂಬುದು ಎಲ್ಲರ ಆಶಯವಾಗಿದೆ

Shidlaghatta News: ಮತದಾರರ ಪಟ್ಟಿಯೇ ಪ್ರಜಾಪ್ರಭುತ್ವದ ಶಕ್ತಿ; ಎಸ್‌ಐಆರ್‌ಗೆ ಸಹಕರಿಸಿ: ಸೀಕಲ್ ರಾಮಚಂದ್ರಗೌಡ

ಮತದಾರರ ಪಟ್ಟಿಯೇ ಪ್ರಜಾಪ್ರಭುತ್ವದ ಶಕ್ತಿ; ಎಸ್‌ಐಆರ್‌ಗೆ ಸಹಕರಿಸಿ

ಬಿಜೆಪಿ ರಾಜ್ಯಾಧ್ಯಕ್ಷರ ನಿರ್ದೇಶನದಂತೆ ರಾಜ್ಯಾದ್ಯಂತ ಎಸ್‌ಐಆರ್ ಕುರಿತು ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುವ ಅಭಿಯಾನ ನಡೆಯುತ್ತಿದೆ. ಅದರಂತೆ ಶಿಡ್ಲಘಟ್ಟದಲ್ಲಿಯೂ ಮತದಾರರಿಗೆ ಪ್ರಕ್ರಿಯೆಯ ಮಹತ್ವವನ್ನು ತಿಳಿಸಿ, ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹಿಸಲಾಗುತ್ತಿದೆ. ಎಲ್ಲರೂ ಜವಾಬ್ದಾರಿ ಯಿಂದ ಈ ಅಭಿಯಾನದಲ್ಲಿ ಭಾಗವಹಿಸಿ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು

ಪ್ರವಾಸಿಗರ ಗಮನಕ್ಕೆ; ಇನ್ಮುಂದೆ  ಬಂಡೀಪುರ ಸಫಾರಿಗೆ ನೀವು ಹೆಚ್ಚುವರಿ ಹಣ ಪಾವತಿಸ್ಲೇಬೇಕು; ಸೆಪ್ಟೆಂಬರ್ 1ರಿಂದ ಪರಿಷ್ಕೃತ ಶುಲ್ಕ

ಬಂಡೀಪುರ ಸಫಾರಿಗೆ ಇನ್ಮುಂದೆ ದುಬಾರಿ; ಪ್ರವೇಶ ಶುಲ್ಕದಲ್ಲಿ ಭಾರಿ ಏರಿಕೆ

Bandipur Safari: ಚಾಮರಾಜನಗರ ಜಿಲ್ಲೆಯಲ್ಲಿರುವ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಪ್ರವೇಶ ಶುಲ್ಕ ಹೆಚ್ಚಿಸಿ ಕರ್ನಾಟಕ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ಸಫಾರಿ ಶುಲ್ಕ, ಖಾಸಗಿ ವಾಹನ, ಕ್ಯಾಮರಾ ಬಳಕೆ ಸೇರಿ ಹಲವು ಸೇವೆಗಳ ಶುಲ್ಕ ಬಹುತೇಕ ದ್ವಿಗುಣಗೊಂಡಿದ್ದು, ಸೆಪ್ಟೆಂಬರ್‌ 1ರಿಂದ ಜಾರಿಗೆ ಬರಲಿದೆ.

Bengaluru Power Cut: ಜುಲೈ 28ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ನಾಳೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Bengaluru Power Cut: 66/11 ಕೆವಿ ಪೂರ್ವಾಂಕರ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜುಲೈ 28ರಂದು ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ʼʼಅಮ್ಮಾ ಏಳಮ್ಮʼʼ: ಮೃತ ತಾಯಿ ಆನೆಯನ್ನು ಎಬ್ಬಿಸಲು ಮರಿಯಾನೆಯ ಪ್ರಯತ್ನ; ಕೊಡಗಿನಲ್ಲೊಂದು ಹೃದಯ ವಿದ್ರಾವಕ ಘಟನೆ

ಮೃತ ತಾಯಿ ಆನೆಯನ್ನು ಎಬ್ಬಿಸಲು ಮರಿಯಾನೆಯ ಪ್ರಯತ್ನ; ವಿಡಿಯೊ ವೈರಲ್‌

Viral Video: ಕೊಡಗು ಜಿಲ್ಲೆಯ ಅಮ್ಮತಿ ಸಮೀಪದ ಆನಂದಪುರದ ಖಾಸಗಿ ಕಾಫಿ ಎಸ್ಟೇಟ್‌ನಲ್ಲಿ ತಾಯಿ ಆನೆಯೊಂದು ಮೃತಪಟ್ಟಿದ್ದು, ಮರಿಯಾನೆ ಅದನ್ನು ಎಬ್ಬಿಸಲು ಯತ್ನಿಸುತ್ತಿರುವ ವಿಡಿಯೊ ವೈರಲ್‌ ಆಗಿದೆ. ಆನೆ ಮರಿಯ ಗೋಳಾಟವು ಇದೀಗ ಪ್ರಾಣಿಪ್ರಿಯರ ಹೃದಯ ತಟ್ಟಿದೆ.

ಬೆಂಗಳೂರಿಗರಿಗೆ ಸಿಹಿ ಸುದ್ದಿ: ‘ಆಕಾಶ ಏರ್' ನಿಂದ ಉದಯಪುರ ಬಳಿಕ ಪಿಂಕ್ ಸಿಟಿ ಜೈಪುರಕ್ಕೂ ನೇರ ವಿಮಾನ, ಟಿಕೆಟ್ ಬುಕ್ಕಿಂಗ್ ಆರಂಭ

‘ಆಕಾಶ ಏರ್' ನಿಂದ ಬೆಂಗಳೂರು ಮತ್ತು ಜೈಪುರ ನಡುವೆ ನೇರ ವಿಮಾನ ಸೇವೆ

Akasa Air: ‘ಆಕಾಶ ಏರ್' ಮುಂಬರುವ ಅಕ್ಟೋಬರ್ 11, 2026ರಿಂದ ಬೆಂಗಳೂರು ಮತ್ತು ಜೈಪುರ ನಡುವೆ ದೈನಂದಿನ ನೇರ ವಿಮಾನ ಸೇವೆಯನ್ನು ಆರಂಭಿಸುವುದಾಗಿ ಘೋಷಿಸಿದೆ. ಬೆಂಗಳೂರಿನ ಟೆಕ್ಕಿಗಳಿಗೆ, ಉದ್ಯಮಿಗಳಿಗೆ ಹಾಗೂ ಪ್ರವಾಸಿಗರಿಗೆ ರಾಜಸ್ಥಾನ ಪ್ರವಾಸ ಈಗ ಮತ್ತಷ್ಟು ಸುಲಭವಾಗಲಿದೆ. ಬೆಂಗಳೂರಿನಿಂದ ನೇರವಾಗಿ ಜೈಪುರಕ್ಕೆ ಅಕ್ಟೋಬರ್ 11ರಿಂದ ಸೇವೆ ಆರಂಭವಾಗುತ್ತಿದ್ದರೆ, ಅಕ್ಟೋಬರ್ 15ರಿಂದ ಬೆಂಗಳೂರಿನಿಂದ ರಾಜಸ್ಥಾನದ ಮತ್ತೊಂದು ಸುಂದರ ನಗರವಾದ ಉದಯಪುರಕ್ಕೂ ವಿಮಾನ ಸೇವೆಗಳು ಶುರುವಾಗಲಿವೆ.

Loading...