ಚುನಾವಣಾ ಕರ್ತವ್ಯದಲ್ಲಿ ಪಾರದರ್ಶಕತೆ, ತಟಸ್ಥತೆ ಕಾಪಾಡಿ
ಚುನಾವಣಾ ಪ್ರಕ್ರಿಯೆಯ ಪ್ರತಿಯೊಂದು ಹಂತವೂ ಮಹತ್ವದ್ದಾಗಿದ್ದು, ಮತದಾನದಿಂದ ಹಿಡಿದು ಮತ ಎಣಿಕೆಯವರೆಗೆ ಅಧಿಕಾರಿಗಳು ಮತ್ತು ಸಿಬ್ಬಂದಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಚುನಾವಣಾ ಆಯೋಗದ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕ ಚುನಾವಣೆ ನಡೆಸಲು ಎಲ್ಲರೂ ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.