ವಿಜಯಪುರದ ವಿದ್ಯಾರ್ಥಿನಿಯಿಂದ ಪಾಕ್ ಪರ ಪೋಸ್ಟ್, ದೂರು ದಾಖಲು
ಆಪರೇಷನ್ ಸಿಂದೂರದ ಮೂಲಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಕರ್ನಾಟಕದಲ್ಲೂ ಕೂಡ ಕೆಲ ಪಾಕ್ ಪ್ರೇಮಿಗಳು ಮತ್ತೆ ಬಾಲ ಬಿಚ್ಚುತ್ತಿದ್ದಾರೆ. ವಿಜಯಪುರ ಮೂಲದ ಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪಾಕ್ ಪರ ಪೋಸ್ಟ್ ಹಂಚಿಕೊಂಡಿರುವುದು ಕೆಂಗಣ್ಣಿಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಆಕೆಯ ವಿರುದ್ದ ದೇಶದ್ರೋಹದ ಅಡಿ ಪ್ರಕರಣ ದಾಖಲು ಮಾಡಲಾಗಿದೆ.