ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಉತ್ತರ ಕನ್ನಡ ಜನತೆಗೆ ಗುಡ್‌ನ್ಯೂಸ್‌; ಕಾರವಾರದಲ್ಲಿ ನಿರ್ಮಾಣವಾಗಲಿದೆ 200 ಹಾಸಿಗೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

ಕಾರವಾರದಲ್ಲಿ ನಿರ್ಮಾಣವಾಗಲಿದೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

Sidaramaiah: ಉತ್ತರ ಕನ್ನಡ ಭಾಗದ ಜನರ ಬಹು ವರ್ಷಗಳ ಬೇಡಿಕೆಯಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. 200 ಹಾಸಿಗೆಗಳ ಸಾಮರ್ಥ್ಯದ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು 100 ಕೋಟಿ ರುಪಾಯಿ ಅಂದಾಜು ಮೊತ್ತದಲ್ಲಿ ಕಾರವಾರದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಸಂಜೆಯಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆ; ಮೆಟ್ರೋ ಸಂಚಾರದಲ್ಲಿ ವ್ಯತ್ಯಯ, ಪ್ರಯಾಣಿಕರ ಪರದಾಟ

ಬೆಂಗಳೂರಿನಲ್ಲಿ ಅಬ್ಬರಿಸಿದ ವರುಣ; ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

Bengaluru Rains: ಮುಂಗಾರುಪೂರ್ವ ಮಳೆ ರಾಜ್ಯಾದ್ಯಂತ ಅಬ್ಬರಿಸುತ್ತಿದ್ದು, ಗುರುವಾರ ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ ಜನತೆ ಕಂಗಾಲಾಗಿದ್ದಾರೆ. ಬೆಂಗಳೂರಿನ ಜೀವನಾಡಿ ನಮ್ಮ ಮೆಟ್ರೋ ಸಂಚಾರರದಲ್ಲಿ ವ್ಯತ್ಯಯ ಉಂಟಾಗಿ ಪ್ರಯಾಣಿಕರು ಕಂಗಾಲಾದರು. ಬೆಂಗಳೂರು ಮೆಟ್ರೋ ರೈಲು ನಿಗಮ ವ್ಯಾಪ್ತಿಯ ಹಸಿರು ಮತ್ತು ನೇರಳೆ ಸೇರಿಎಲ್ಲ ಪ್ರಮುಖ ಮೆಟ್ರೋ ಮಾರ್ಗಗಳ ರೈಲು ಸೇವೆಗಳಲ್ಲಿ ವಿಳಂಬ ಉಂಟಾಯಿತು.

ನಟ ದರ್ಶನ್‌ ಜತೆ ಜೈಲಿನಲ್ಲಿ ಸಿಗರೇಟ್‌ ಸೇದುತ್ತ ವೈರಲ್‌ ಆಗಿದ್ದ ರೌಡಿ ವಿಲ್ಸನ್‌ ಗಾರ್ಡನ್‌ ನಾಗನಿಗೆ ಜಾಮೀನು; ಜೈಲಿನಿಂದ ಬಿಡುಗಡೆ

ರೌಡಿ ವಿಲ್ಸನ್‌ ಗಾರ್ಡನ್‌ ನಾಗನಿಗೆ ಜಾಮೀನು

Belagavi News: ಸಿದ್ದಾಪುರದ ಮಹೇಶ್ ಕೊಲೆ ಪ್ರಕರಣದ ಬಂಧಿತ ಆರೋಪಿ, ನಟೋರಿಯಸ್ ರೌಡಿಶೀಟರ್‌ ವಿಲ್ಸನ್ ಗಾರ್ಡನ್ ನಾಗನಿಗೆ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಸ್ಪತ್ರೆ ಕೈದಿ ವಾರ್ಡನಲ್ಲಿ ಆರೋಗ್ಯ ತಪಾಸಣೆ ನಡೆಸಿ ಬಿಡುಗಡೆ ಮಾಡಲಾಯಿತು.

ಕಾಂಗ್ರೆಸ್ ಕಚೇರಿಯಲ್ಲಿ ಪುಷ್ಪನಮನದ ಮೂಲಕ ರಾಜೀವ್‌ಗಾಂಧಿ ಪುಣ್ಯಸ್ಮರಣೆ

ಕಾಂಗ್ರೆಸ್ ಕಚೇರಿಯಲ್ಲಿ ಪುಷ್ಪನಮನದ ಮೂಲಕ ರಾಜೀವ್‌ಗಾಂಧಿ ಪುಣ್ಯಸ್ಮರಣೆ

ಭಾರತ ಕಂಡ ದೂರದೃಷ್ಟಿಯ ನೇತಾರರಲ್ಲಿ ಒಬ್ಬರಾಗಿದ್ದ ರಾಜೀವ್‌ಗಾಂಧಿ ಅವರು ಅಪ್ರತಿಮ ನಾಯಕರಾಗಿದ್ದರು.ಅವರು ಪ್ರಧಾನಿಗಳಾಗಿದ್ದ ಅವಧಿಯಲ್ಲಿ ಭಾರತವು ಅಭಿವೃದ್ಧಿಯತ್ತ ದಿಟ್ಟ ಹೆಜ್ಜೆಗೋಳನ್ನು ಹಾಕಿತ್ತು. ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ದೇಶದ ಪ್ರಧಾನಿಯಾಗಿದ್ದ ರಾಜೀವ್‌ಗಾಂಧಿ ಅಭಿವೃದ್ದಿಯ ಶಕೆಯನ್ನು ಹುಟ್ಟು ಹಾಕುವ ಮೂಲಕ ಯುವಕರ ಕಣ್ಮಣಿಯಾಗಿದ್ದರು

ಶಾಂತಿಯುತ ಬಕ್ರೀದ್ ಆಚರಣೆಗೆ ಪೊಲೀಸ್ ಸನ್ನದ್ಧ: ಚಿಂತಾಮಣಿ ವೃತ್ತ ನಿರೀಕ್ಷಕ ಬಿ.ಎ.ವಿಜಿ ಕುಮಾರ್ ಭರವಸೆ

ಶಾಂತಿಯುತ ಬಕ್ರೀದ್ ಆಚರಣೆಗೆ ಪೊಲೀಸ್ ಸನ್ನದ್ಧ

ಚಿಂತಾಮಣಿ ನಗರ ಮತ್ತು ಗ್ರಾಮಾಂತರ ಪ್ರದೇಶಗಳು ಶಾಂತಿ ಮತ್ತು ಸೌಹಾರ್ದತೆಗೆ ಹೆಸರಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಹಬ್ಬವನ್ನು ಯಶಸ್ವಿಯಾಗಿ ಆಚರಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಪೊಲೀಸ್ ಇಲಾಖೆಯ ವತಿಯಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಭರವಸೆ ನೀಡಿದರು.

ʼವಿಶ್ವವಾಣಿʼ ಉದ್ಯೋಗಿ ಜಿ.ಎಲ್. ರಂಗನಾಥ್ ನಿಧನ

ʼವಿಶ್ವವಾಣಿʼ ಉದ್ಯೋಗಿ ಜಿ.ಎಲ್. ರಂಗನಾಥ್ ನಿಧನ

GL Ranganath: ʼವಿಶ್ವವಾಣಿʼ ದಿನಪತ್ರಿಕೆಯಲ್ಲಿ ಬೆಂಗಳೂರು ಕೇಂದ್ರ ಕಚೇರಿಯಲ್ಲಿ ಹಿರಿಯ ಗ್ರಾಫಿಕ್ ಡಿಸೈನರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಜಿ.ಎಲ್. ರಂಗನಾಥ್ ಗುರುವಾರ ನಸುಕಿನಲ್ಲಿ ಮೃತಪಟ್ಟಿದ್ದಾರೆ. ಮೃತರು ಇಬ್ಬರು ಸಹೋದರರು, ಸಹೋದರಿ, ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

26ನೇ ವಯಸ್ಸಿಗೆ ಬಿಎಂಡಬ್ಲ್ಯು ಕಾರ್ ಖರೀದಿಸಿದ ಬೆಂಗಳೂರಿನ ಯುವಕ: ಪೋಷಕರ ಭಾವನಾತ್ಮಕ ಕ್ಷಣ ವೈರಲ್

ಬಿಎಂಡಬ್ಲ್ಯು ಕಾರ್ ಖರೀದಿಸಿದ ಬೆಂಗಳೂರಿನ ಯುವಕ: ನೆಟ್ಟಿಗರ ಮನಗೆದ್ದ ದೃಶ್ಯ

Viral News: ಬೆಂಗಳೂರಿನ ಟೆಕ್ಕಿ ಇಶಾನ್ ದತ್ತ 26ನೇ ವಯಸ್ಸಿನಲ್ಲಿ ತಮ್ಮ ಕನಸಿನ ಬಿಎಂಡಬ್ಲ್ಯು ಕಾರ್‌ ಖರೀದಿಸಿದ್ದು, ಇದನ್ನು ಕಂಡು ಪೋಷಕರು ಖುಷಿಯಲ್ಲೇ ಅತ್ತು ಬಿಟ್ಟಿದ್ದಾರೆ. ಈ ಘಟನೆಯ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.

Kalaburagi News: ಕರೆಂಟ್‌ ಹರಿಸಿ ಕಾಡು ಪ್ರಾಣಿಗಳ ಬಲಿ ಪಡೆಯುತ್ತಿದ್ದ ಇಬ್ಬರ ಬಂಧನ

ಕಾಡು ಪ್ರಾಣಿಗಳ ಬಲಿ ಪಡೆಯುತ್ತಿದ್ದ ಇಬ್ಬರ ಬಂಧನ

ತೆಲಂಗಾಣ ಗಡಿಭಾಗದ ಸಂಗಾಪೂರ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕರೆಂಟ್‌ ಹರಿಸಿ ಪ್ರಾಣಿಗಳನ್ನು ಬಲಿ ಪಡೆಯುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಸಂಗಾಪೂರ ಗ್ರಾಮದ ಮಾಣಿಕ ತಂದೆ ಹರಿಶ್ಚಂದ್ರ ಪವಾರ (40) ಹಾಗೂ ಸುನೀಲ ತಂದೆ ಧರ್ಮು ರಾಠೋಡ (30) ಬಂಧಿತರು.

MLA Pradeep Eshwar: ಶಾಸಕ ಪ್ರದೀಪ್ ಈಶ್ವರ್ ಸಚಿವರಾಗಬೇಕು ಎಂಬುದು ಕ್ಷೇತ್ರದ ಜನತೆಯ ಆಶಯವಾಗಿದೆ : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗಭೂಷಣ್

ಶಾಸಕ ಪ್ರದೀಪ್ ಈಶ್ವರ್ ಸಚಿವರಾಗಬೇಕು ಎಂಬುದು ಕ್ಷೇತ್ರದ ಜನತೆಯ ಆಶಯ

ಹಳ್ಳಿಗಳ ಬೆಳವಣಿಗೆಯಲ್ಲಿಯೇ ದೇಶದ ಅಭಿವೃದ್ದಿಯ ಗುಟ್ಟು ಅಡಗಿದೆ ಎಂಬ ಮಹಾತ್ಮಾ ಗಾಂಧೀಜಿ ಅವರ ಗ್ರಾಮಸ್ವರಾಜ್ಯ ತತ್ವದಲ್ಲಿ ನಂಬಿಕೆ ಇಟ್ಟಿರುವ ನಮ್ಮ ಶಾಸಕ ಪ್ರದೀಪ್ ಈಶ್ವರ್ ಕೊಟ್ಟ ಮಾತಿನಂತೆ ನಡೆದುಕೊಳ್ಳುವ ನಾಯಕರಾಗಿದ್ದಾರೆ. ಕ್ಷೇತ್ರದ ಪ್ರತಿಹಳ್ಳಿಯ ರಸ್ತೆಗಳು ಚೆನ್ನಾಗಿರಬೇಕು ಎಂದು ಭಾವಿಸಿ ಎಲ್ಲೆಲ್ಲಿ ಸಾಧ್ಯವೋ ಎಲ್ಲೆಲ್ಲಾ ಸಿ ಸಿ ರಸ್ತೆ ನಿರ್ಮಾಣಕ್ಕೆ ಅಡಿಗಲ್ಲು ಹಾಕುತ್ತಿದ್ದಾರೆ. ಇದಕ್ಕೆ ಇಂದಿನ  ಶಂಕುಸ್ಥಾಪನೆಯೇ ಸಾಕ್ಷಿ ಎಂದರು

Indira Kit: ಅಕ್ಕಿಯ ಜೊತೆಗೆ ಇಂದಿರಾ ಕಿಟ್: ಸರ್ಕಾರದ ಘೋಷಣೆ ಮೇಲೆ ಜನರ ಕಣ್ಣು

ಇಂದಿರಾ ಕಿಟ್ ಯೋಜನೆಗೆ ಚಾಲನೆ – ಜೂನ್‌ನಲ್ಲಿ ವಿತರಣೆ ಸಾಧ್ಯತೆ

ಸಚಿವರ ಮಾಹಿತಿಯಂತೆ ಕಿಟ್ ವಿತರಣೆಗೆ ಸಂಬಂಧಿಸಿದ ಮರು ಟೆಂಡರ್ ಪ್ರಕ್ರಿಯೆ ಅಂತಿಮ ಹಂತ ದಲ್ಲಿದ್ದು, ಶೀಘ್ರದಲ್ಲೇ ಜಿಲ್ಲೆಗಳಿಗೆ ಸರಬರಾಜು ಆರಂಭವಾಗಲಿದೆ. ಇಂದಿರಾ ಕಿಟ್‌ನಲ್ಲಿ ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ, ಸಕ್ಕರೆ ಹಾಗೂ ಉಪ್ಪು ಸೇರಿರಲಿದ್ದು, ಬಡ ಕುಟುಂಬಗಳಿಗೆ ಇದು ನೆರವಾಗಲಿದೆ ಎಂದು ಸರ್ಕಾರ ಹೇಳಿದೆ.

ಗೃಹಲಕ್ಷ್ಮಿ ಯೋಜನೆ ಬಾಕಿ ಹಣ ವಿಚಾರದಲ್ಲಿ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌; ನ್ಯಾಯಾಲಯ ಹೇಳಿದ್ದೇನು?

ʼಗೃಹಲಕ್ಷ್ಮಿʼ ಬಾಕಿ ಹಣ ವಿಚಾರದಲ್ಲಿ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

Gruhalakshmi Scheme: ಗೃಹಲಕ್ಷ್ಮಿ ಯೋಜನೆ 2 ತಿಂಗಳ ಕಂತು ಪಾವತಿಯಾಗದಿರುವ ಬಗ್ಗೆ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ ಸರ್ಕಾರಕ್ಕೆ ನೋಟಿಸ್‌ ನೀಡಿದೆ. 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ‌ ಹಣವನ್ನು ಪಾವತಿ ಮಾಡದ ಹಿನ್ನೆಲೆಯಲ್ಲಿ ಫಲಾನುಭವಿಗಳು ಕೋರ್ಟ್‌ ಮೊರೆ ಹೋಗಿದ್ದರು.

Gauribidabur News: ಸವಿತಾ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

Gauribidabur News: ಸವಿತಾ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ತಾಲೂಕು ಸವಿತಾ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಿ.ಡಿ.ಶಿವಕುಮಾರ್ ಮಾತನಾಡಿ, ಸಮುದಾಯದವರು ಸಂಘಟನೆ ಮತ್ತು ಒಗ್ಗಟ್ಟಿನಿಂದ ಸಾಗಿದಾಗ ರಾಜಕೀಯ, ಸಾಮಾಜಿಕ ಕ್ಷೇತ್ರಗಳಲ್ಲಿ ನಮಗೆ ಪ್ರಾತಿನಿಧ್ಯ ಸಿಗಲಿದೆ, ಈ ನಿಟ್ಟಿನಲ್ಲಿ ನೂತನ ಪದಾಧಿ ಕಾರಿಗಳು ಸಮುದಾಯದ ಸಂಘಟನೆ ಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು

ಬೆಂಗಳೂರಿನಲ್ಲಿ ಡಿ.5,6ರಂದು ಮನೋತ್ಸವ-2026 ರಾಷ್ಟ್ರೀಯ ಮಾನಸಿಕ ಆರೋಗ್ಯ ಹಬ್ಬ: ಕಾರ್ಯಕ್ರಮ ಪ್ರಸ್ತಾವನೆಗಳಿಗೆ ಆಹ್ವಾನ

ಡಿ.5,6ರಂದು ಮನೋತ್ಸವ-2026 ರಾಷ್ಟ್ರೀಯ ಮಾನಸಿಕ ಆರೋಗ್ಯ ಹಬ್ಬ

ದೇಶದ ಪ್ರತಿಷ್ಠಿತ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಬ್ಬ ಮನೋತ್ಸವದ ಮೂರನೇ ಆವೃತ್ತಿಯು ಇದೇ ವರ್ಷದ ಡಿಸೆಂಬರ್ 5 ಮತ್ತು 6 ರಂದು ಬೆಂಗಳೂರಿನಲ್ಲಿ ಆಯೋ ಜನೆಗೊಂಡಿದೆ. ಸಾರ್ವಜನಿಕ ರಿಗೆ ಉಚಿತ ಪ್ರವೇಶವಿರುವ ಈ ವಿಶಿಷ್ಟ ಕಾರ್ಯಕ್ರಮಕ್ಕಾಗಿ ಪ್ರಸ್ತುತ ಕಾರ್ಯಕ್ರಮ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.

ನೀಟ್‌ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಕಿಂಗ್‌ ಹೇಳಿಕೆ; ಕೇಂದ್ರದ ವಿರುದ್ಧ ವಾಗ್ದಾಳಿ

ವೈದ್ಯಕೀಯ ಪ್ರವೇಶ ಪರೀಕ್ಷೆ ಕೇಂದ್ರೀಕೃತವಾಗಬಾರದು‌: ಸಿಎಂ ಸಿದ್ದರಾಮಯ್ಯ

CM Siddaramaiah: ನೀಟ್ ಪರೀಕ್ಷೆಯ ಪ್ರಶ್ನೆ ಸೋರಿಕೆಯಾಗಿದ್ದು, ಇದಕ್ಕೆ ಜವಾಬ್ದಾರರಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಾಗಲಿ ಅಥವಾ ಪ್ರಧಾನಮಂತ್ರಿ ನರೇಂದ್ರ ಮೋದಿಯವರಾಗಲಿ ಜವಾಬ್ದಾರಿಯನ್ನು ಹೊತ್ತುಕೊಂಡಿಲ್ಲ. ಧರ್ಮೇಂದ್ರ ಪ್ರಧಾನ್ ನೀಟ್ ಪರೀಕ್ಷೆಗೆ ಮತ್ತೊಂದು ದಿನಾಂಕ ನಿಗದಿ ಮಾಡಿ ಕೈ ತೊಳೆದುಕೊಂಡಿದ್ದು , ಈ ಜವಾಬ್ದಾರಿಯನ್ನು ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಹೊರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ನಾಳೆ ರಾಜ್ಯಾದ್ಯಂತ ಅಬ್ಬರಿಸಲಿದೆ ಮುಂಗಾರು ಪೂರ್ವ ಮಳೆ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ನಾಳೆ ರಾಜ್ಯಾದ್ಯಂತ ಅಬ್ಬರಿಸಲಿದೆ ಮುಂಗಾರು ಪೂರ್ವ ಮಳೆ

Karnataka Weather: ಮುಂದಿನ 4 ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜತೆಗೆ ಬೆಂಗಳೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 'ಚಾಲೆಂಜರ್ 2026' ಭರ್ಜರಿ ತಾಲೀಮು

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 'ಚಾಲೆಂಜರ್ 2026' ಭರ್ಜರಿ ತಾಲೀಮು

Kempegowda International Airport: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 'ಚಾಲೆಂಜರ್ 2026' ಎಂಬ ಮಹಾ ಅಭ್ಯಾಸವನ್ನು ಯಶಸ್ವಿಯಾಗಿ ನಡೆಸಲಾಯಿತು. ಈ ತಾಲೀಮಿನಲ್ಲಿ ವಿಮಾನಯಾನ ಸಂಸ್ಥೆಗಳು, ರಾಜ್ಯ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಆಸ್ಪತ್ರೆಗಳು, ಭಾರತೀಯ ವಾಯುಪಡೆ, ಸೇನಾ ಹಾಗೂ ಅರೆಸೇನಾ ಪಡೆಗಳು ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸೇರಿ ಬರೋಬ್ಬರಿ 100ಕ್ಕೂ ಹೆಚ್ಚು ಸಂಸ್ಥೆಗಳು ಹಾಗೂ 3,000ಕ್ಕೂ ಅಧಿಕ ಸಿಬ್ಬಂದಿ ಪಾಲ್ಗೊಂಡಿದ್ದರು.

ತಪ್ಪಿದ ಭಾರೀ ದುರಂತ: ನೆಲಕ್ಕಪ್ಪಳಿಸಿದ ಏರ್ ಇಂಡಿಯಾ ವಿಮಾನದ ಹಿಂಭಾಗ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅವಘಡ

ಬೆಂಗಳೂರಿನಲ್ಲಿ ನೆಲಕ್ಕಪ್ಪಳಿಸಿದ ಏರ್ ಇಂಡಿಯಾ ವಿಮಾನದ ಹಿಂಭಾಗ

tail strike in Bengaluru: ಏರ್ ಇಂಡಿಯಾ ವಿಮಾನವೊಂದು ಇಂದು (ಗುರುವಾರ, ಮೇ 21) ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಅದರ ಹಿಂಭಾಗ ನೆಲಕ್ಕಪ್ಪಳಿಸಿದ ಘಟನೆ ನಡೆದಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ತಾಂತ್ರಿಕ ಅಡಚಣೆ ಉಂಟಾಗಿದ್ದರಿಂದ ಈ ದುರ್ಘಟನೆ ನಡೆದಿದೆ.

ರಾಹುಲ್ ಗಾಂಧಿ ಅಸಂಬದ್ಧ, ಬೇಜವಾಬ್ದಾರಿಯ ಹೇಳಿಕೆ ಖಂಡನೀಯ: ಬಿ.ವೈ. ರಾಘವೇಂದ್ರ

ರಾಹುಲ್ ಗಾಂಧಿ ಹೇಳಿಕೆ ಖಂಡನೀಯ: ಬಿ.ವೈ. ರಾಘವೇಂದ್ರ

BY Raghavendra: ಮೇಲಿಂದ ಮೇಲೆ ಚುನಾವಣಾ ಸೋಲುಗಳನ್ನು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಜನರ ಅಚಲ ನಂಬಿಕೆಯನ್ನು ಒಪ್ಪಿಕೊಳ್ಳಲು ಸಾಧ್ಯವಾಗದೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮತ್ತೆ ತಮ್ಮ ಅದೇ ನಿಂದನೀಯ ಮತ್ತು ಬೇಜವಾಬ್ದಾರಿಯುತ ನಾಲಿಗೆಯನ್ನು ಹರಿ ಬಿಟ್ಟಿದ್ದಾರೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಟೀಕಿಸಿದ್ದಾರೆ.

ರಾಜ್ಯದಲ್ಲೂ ಜಿರಳೆ ಅಬ್ಬರ; ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆಗೊಳಿಸಿದ ಕಾಂಗ್ರೆಸ್‌ ನಾಯಕರು

ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆಗೊಳಿಸಿದ ಸಿದ್ದರಾಮಯ್ಯ

I am Cockroach Tshirt: ದೇಶಾದ್ಯಂತ ಕಾಕ್ರೋಚ್​​ ಜನತಾ ಪಾರ್ಟಿ ಸದ್ದು ಮಾಡುತ್ತಿದೆ. ಈ ಮಧ್ಯೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ನಾಯಕರು ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆಗೊಳಿಸಿದ್ದಾರೆ. ಸದ್ಯ ಈ ವಿಡಿಯೊ ಭಾರಿ ಸದ್ದು ಮಾಡುತ್ತಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ

Karnataka 2nd PUC Exam 2 Result: ದ್ವಿತೀಯ ಪಿಯುಸಿ ಪರೀಕ್ಷೆ–2ರ ಫಲಿತಾಂಶವನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಗುರುವಾರ (ಮೇ 21) ಪ್ರಕಟಿಸಿದೆ. ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಲ್ಲಿ ಒಟ್ಟು 80,535 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ದುಬಾರೆ ಆನೆ ಶಿಬಿರ ದುರಂತ; ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ನಿಷೇಧ

ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ನಿಷೇಧ

Sakrebyle Elephant Camp: ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ನಾಳೆಯಿಂದ (ಮೇ 22) ತಾತ್ಕಾಲಿಕವಾಗಿ ಪ್ರವೇಶ ನಿಷೇಧಿಸಲಾಗಿದೆ. ದುಬಾರೆ ಆನೆ ಬಿಡಾರದಲ್ಲಿ ಕಾವೇರಿ ನದಿಯಲ್ಲಿ ಸ್ನಾನ ಮಾಡಿಸುವ ವೇಳೆ ಎರಡು ಸಾಕಾನೆಗಳ ನಡುವೆ ನಡೆದ ಕಾದಾಟದಲ್ಲಿ ತಮಿಳುನಾಡಿನ ಮಹಿಳೆ ಆನೆಯಡಿ ಸಿಲುಕಿ ಮೃತಪಟ್ಟ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.

ನಾನ್‌ ಸ್ಟಾಪ್‌ ಓಟ, ಪ್ರಯಾಣಿಕರ ಪರದಾಟ ?

ನಾನ್‌ ಸ್ಟಾಪ್‌ ಓಟ, ಪ್ರಯಾಣಿಕರ ಪರದಾಟ ?

ಕೊಪ್ಪಳ, ಯಲಬುರ್ಗಾ ಹಾಗೂ ಕುಕನೂರು ಸಾರಿಗೆ ಘಟಕಗಳ ಬಸ್ ಗಳು ಈ ಮಾರ್ಗದಲ್ಲಿ ಕಾರ್ಯಾ ಚರಣೆ ಮಾಡುತ್ತವೆ. ಜೊತೆಗೆ ಕೊಪ್ಪಳ ಜಿಲ್ಲೆಯ ಹೊರತಾಗಿ ಬೇರೆ ಘಟಕದ ಬಸ್ ಕೂಡ ಈ ಮಾರ್ಗ ದಲ್ಲಿ ಓಡಾಡುತ್ತವೆ. ಇದರಿಂದ ಕೊಪ್ಪಳ- ಯಲಬುರ್ಗಾ ಮಾರ್ಗದಲ್ಲಿ ಬಸ್ ಕೊರತೆ ಇಲ್ಲ. ಆದರೆ, ಈ ಮಾರ್ಗದಲ್ಲಿ ಕಾರ್ಯಾಚರಣೆ ಮಾಡುವ ಬಹುತೇಕ ಬಸ್ ಗಳು ನಾನ್ ಸ್ಟಾಪ್ ಬೋರ್ಡ್ ಹಾಕಿಕೊಂಡೇ ಓಡಾಡುತ್ತವೆ. ಇದರಿಂದ ಹಲಗೇರಿ, ಭಾನಾಪೂರ ಮಸಬಹಂಚಿನಾಳ ಸೇರಿ ಗ್ರಾಮೀಣ ಭಾಗದ ಪ್ರಯಾಣಿಕರಿಗೆ ತೊಂದರೆ ಆಗುತ್ತಿದೆ.

ಸಾಲ ವಾಪಸ್ ಕೇಳಿದ್ದಕ್ಕೆ ದರ್ಪ; ಕಾರಿನ ಬಾನೆಟ್‌ನಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಸಾಲಗಾರ, ವಿಡಿಯೋ ವೈರಲ್‌

ಕಾರಿನ ಬಾನೆಟ್‌ನಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಸಾಲಗಾರ

drags man on car bonnet: ಹಣ ಮರುಪಾವತಿ ವಿಚಾರದಲ್ಲಿ ಸಾಲಗಾರನ ಜೊತೆ ಜಗಳವಾಡಿದ ವ್ಯಕ್ತಿಯೊಬ್ಬರನ್ನು ಚಲಿಸುತ್ತಿದ್ದ ಕಾರಿನ ಬಾನೆಟ್ ಮೇಲೆ ಸುಮಾರು 500 ಮೀಟರ್ ಎಳೆದೊಯ್ದ ಘಟನೆ ಮೈಸೂರಿನಲ್ಲಿ ನಡೆದಿದೆ. ರಸ್ತೆಯಲ್ಲಿ ವಾಹನ ಚಲಾಯಿಸುತ್ತಿದ್ದ ಇತರರು ಘಟನೆಯ ದೃಶ್ಯವನ್ನು ವಿಡಿಯೊ ಮಾಡಿದ್ದಾರೆ.

ಮಹಾರಾಜಾವಾಡಿ ಜನರಿಗೆ ಟ್ರ್ಯಾಕ್ಟರ್‌ ನೀರೇ ಗತಿ

ಮಹಾರಾಜಾವಾಡಿ ಜನರಿಗೆ ಟ್ರ್ಯಾಕ್ಟರ್‌ ನೀರೇ ಗತಿ

ಮಹಾರಾಜವಾಡಿ ಗ್ರಾಮದಲ್ಲಿ ತೀವ್ರ ನೀರಿನ ಸಮಸ್ಯೆ ಉಂಟಾಗಿರುವ ಹಿನ್ನೆಲೆ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ್ ಪಾಟೀಲ್ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿ ಮಾರುತಿ ರಾಠೋಡ್ ಅವರು ಕೆಲ ದಿನಗಳ ಹಿಂದೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Loading...