ಕಿರ್ಲೋಸ್ಕರ್ನಿಂದ ರಾಜ್ಯದಲ್ಲಿ 3,000 ಕೋಟಿ ರೂ. ಹೂಡಿಕೆ: ಎಂ.ಬಿ. ಪಾಟೀಲ್
Kirloskar Ferrous: ಕಿರ್ಲೋಸ್ಕರ್ ಫೆರೋಸ್ ಈಗಾಗಲೇ ಹಿರಿಯೂರಿನಲ್ಲಿ ತನ್ನ ಘಟಕ ಹೊಂದಿದ್ದು, ಅದನ್ನು ಮೇಲ್ದರ್ಜೆಗೇರಿಸಲು ಮುಂದಾಗಿದೆ. ಇಲ್ಲಿ ಸ್ಪಾಂಜ್ ಪೈಪ್ ಉತ್ಪಾದನೆ ಆರಂಭಿಸಲಿದೆ. ಜತೆಗೆ ತನ್ನ ಉಕ್ಕು ಉತ್ಪಾದನೆ ಘಟಕದ ಸಾಮರ್ಥ್ಯ ಹೆಚ್ಚಳ, ಕಬ್ಬಿಣದ ಅದಿರು ಸಂಸ್ಕರಣೆ ಹೆಚ್ಚಳ, ಫೌಂಡ್ರಿ ಘಟಕದ ಅಭಿವೃದ್ಧಿ ಮುಂತಾದ ಯೋಜನೆಗಳನ್ನು ಕೈಗೆತ್ತಿಕೊಳ್ಳಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.