ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

IPL 2026 Final: ಐಪಿಎಲ್‌ ಫೈನಲ್‌ ವೀಕ್ಷಣೆಗೆ ಹಾವೇರಿಯಲ್ಲಿ ಬೃಹತ್‌ ಎಲ್‌ಇಡಿ ಪರದೆ; ಹರಿದುಬಂದ RCB ಅಭಿಮಾನಿಗಳು

ಐಪಿಎಲ್‌ ಫೈನಲ್‌ ವೀಕ್ಷಣೆಗೆ ಹಾವೇರಿಯಲ್ಲಿ ಬೃಹತ್‌ ಎಲ್‌ಇಡಿ ಪರದೆ ವ್ಯವಸ್ಥೆ

RCB vs GT: ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ನಡುವಿನ ಫೈನಲ್‌ ಮ್ಯಾಚ್‌ ವೀಕ್ಷಣೆಗೆ ಹಾವೇರಿ ಜಿಲ್ಲಾ ಹೊಸಮನಿ ಸಿದ್ದಪ್ಪ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ಬೃಹತ್ ಎಲ್‌ಇಡಿ ಪರದೆ ಅಳವಡಿಸಲಾಗಿತ್ತು. ವಿವಿಧೆಡೆಯಿಂದ ಸಾವಿರಾರು ಅಭಿಮಾನಿಗಳು ಪಂದ್ಯ ವೀಕ್ಷಿಸಲು ಆಗಮಿಸಿದ್ದರು.

DK Shivakumar: ಅಲರ್ಜಿ ಕಾರಣ ಯಾರೂ ಸುಗಂಧರಾಜ ಹೂವಿನ ಹಾರ ಹಾಕಬೇಡಿ: ಡಿ.ಕೆ. ಶಿವಕುಮಾರ್ ಮನವಿ

ಅಲರ್ಜಿ ಕಾರಣ ಸುಗಂಧರಾಜ ಹೂವಿನ ಹಾರ ಹಾಕಬೇಡಿ: ಡಿ.ಕೆ.ಶಿವಕುಮಾರ್

ಬೆಂಗಳೂರಿನ ಕುಮಾರಕೃಪ ಅತಿಥಿಗೃಹದ ಬಳಿ ಶಿವಕುಮಾರ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ತಮಗೆ ಸುಗಂಧರಾಜ ಹೂವಿನ ಅಲರ್ಜಿ ಇರುವುದರಿಂದ, ಭೇಟಿ ವೇಳೆ ಆ ಹೂವಿನ ಹಾರ ತರಬಾರದು ಎಂದು ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಮನವಿ ಮಾಡಿದ್ದಾರೆ.

CM oath ceremony: ಸಾರ್ವಜನಿಕರಿಗೆ ತೊಂದ್ರೆ ಆಗಬಾರದೆಂದು ಲೋಕಭವನದಲ್ಲಿ ಪ್ರಮಾಣದಲ್ಲಿ ವಚನ: ಡಿ.ಕೆ.ಶಿವಕುಮಾರ್‌

ಜನರಿಗೆ ತೊಂದ್ರೆ ಆಗಬಾರದೆಂದು ಲೋಕಭವನದಲ್ಲಿ ಪ್ರಮಾಣ ವಚನ

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಸರಳವಾಗಿ ನಡೆಯುತ್ತಿರುವುದರಿಂದ ಹೆಚ್ಚಿನ ಜನ ಸೇರಲು ಆಗುವುದಿಲ್ಲ. ಹೀಗಾಗಿ ನಮ್ಮ ಕಾರ್ಯಕರ್ತರು ಕ್ಷಮಿಸಬೇಕು. ಬೆಂಗಳೂರಿನ ನಾಗರಿಕರಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಕಾರ್ಯಕ್ರಮವನ್ನು ಲೋಕಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರಿನ ಹೋಟೆಲ್‌ನಲ್ಲಿ ಕುರಿ ಮಟನ್‌ ಎಂದು ಗೋಮಾಂಸದ ಆಹಾರ ಮಾರಾಟ; ಕೇರಳ ಮೂಲದ ಇಬ್ಬರ ಬಂಧನ

ಕುರಿ ಮಟನ್‌ ಎಂದು ಗೋಮಾಂಸದ ಆಹಾರ ಮಾರಾಟ; ಇಬ್ಬರು ಅರೆಸ್ಟ್‌

ಇತ್ತೀಚೆಗೆ ಬೆಂಗಳೂರಿನ ಹೋಟೆಲ್‌ಗೆ ತೆರಳಿದ್ದ ಗ್ರಾಹಕರೊಬ್ಬರು ಕುರಿ ಮಾಂಸದ ಆಹಾರ ಸೇವಿಸುವಾಗ ಅನುಮಾನ ಬಂದಿತ್ತು. ಈ ಕುರಿತು ಅವರು ಆವಲಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು. ಕೇಸ್‌ ದಾಖಲಿಸಿಕೊಂಡಿದ್ದ ಆವಲಹಳ್ಳಿ ಪೊಲೀಸರು, ಹೋಟೆಲ್‌ನಲ್ಲಿ ಪರಿಶೀಲನೆ ನಡೆಸಿದಾಗ ಬೀಫ್‌ ಮಾರುತ್ತಿರುವುದು ತಿಳಿದುಬಂದಿದೆ. ಹೀಗಾಗಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

IPL 2026 Final: ಐಪಿಎಲ್‌ ಫೈನಲ್‌; ಇಂದು ರಾತ್ರಿ ಬೆಂಗಳೂರಿನ ಪ್ರಮುಖ ಫ್ಲೈಓವರ್‌ಗಳು ಬಂದ್‌, ರಸ್ತೆಗಳಲ್ಲಿ ಸಂಭ್ರಮಾಚರಣೆಗೆ ಬ್ರೇಕ್‌!

ಐಪಿಎಲ್‌ ಫೈನಲ್‌; ಇಂದು ರಾತ್ರಿ ಬೆಂಗಳೂರಿನ ಪ್ರಮುಖ ಫ್ಲೈಓವರ್‌ಗಳು ಬಂದ್‌

RCB vs GT: ಇಂದು ಐ.ಪಿ.ಎಲ್. 19 ನೇ ಆವೃತ್ತಿಯ ಫೈನಲ್ ಪಂದ್ಯದ ಪ್ರಯುಕ್ತ ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ಬೆಂಗಳೂರು ಸಂಚಾರ ಪೊಲೀಸ್‌ ವಿಭಾಗದಿಂದ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಸಾರ್ವಜನಿಕ ರಸ್ತೆಯಲ್ಲಿ ಯಾವುದೇ ವಿಜಯೋತ್ಸವ ಆಚರಣೆ ಮಾಡಲು ಅವಕಾಶವಿರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

DK Shivakumar: ನಮ್ಮ ತಂದೆ ರಾಜ್ಯದ ಸಿಎಂ ಆಗಬೇಕು, ಯಾಕೆ ಗೊತ್ತಾ?; ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಭಾವುಕ ಮಾತಿನ ವಿಡಿಯೊ ವೈರಲ್‌!

ನಮ್ಮ ತಂದೆ ಸಿಎಂ ಆಗಬೇಕು; ಡಿಕೆಶಿ ಪುತ್ರಿಯ ಭಾವುಕ ವಿಡಿಯೊ ವೈರಲ್‌!

ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆಗುವುದು ಖಚಿತವಾಗಿರುವ ಹಿನ್ನೆಲೆಯಲ್ಲಿ ಪುತ್ರಿ ಐಶ್ವರ್ಯ ಅವರು ಭಾನುವಾರ ಒಂದು ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡಿದ್ದಾರೆ. ಅದರಲ್ಲಿ "ಕಂಗ್ರಾಜುಲೇಷನ್ಸ್ ಅಪ್ಪಾ ಎಂದು ವಿಶ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ಈ ಹಿಂದೆ ಐಶ್ವರ್ಯಾ ಅವರು ತಂದೆ ಬಗ್ಗೆ ಮಾತನಾಡಿರುವ ವಿಡಿಯೊ ಸದ್ಯ ವೈರಲ್‌ ಆಗುತ್ತಿದೆ.

Chikkaballapur accident: ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ; ಲಾರಿಗೆ ಆಟೋ ಡಿಕ್ಕಿಯಾಗಿ 6 ಮಂದಿ ದುರ್ಮರಣ

ಚಿಕ್ಕಬಳ್ಳಾಪುರದಲ್ಲಿ ಲಾರಿಗೆ ಆಟೋ ಡಿಕ್ಕಿಯಾಗಿ 6 ಮಂದಿ ದುರ್ಮರಣ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಕೂಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಆಟೋ, ರಸ್ತೆಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. ಬಾಗೇಪಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Deputy CM: ಯಾರಾಗ್ತಾರೆ ಡಿಸಿಎಂ; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?

ಯಾರಾಗ್ತಾರೆ ಡಿಸಿಎಂ; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?

ಸಿಎಂ ಜತೆ ಎಷ್ಟು ಜನ ಸಚಿವರು ಪ್ರಮಾಣ ವಚನ ಸ್ವಿಕರಿಸುತ್ತಾರೆ ಎನ್ನುವುದೂ ನಿರ್ಧಾರ ಆಗಿಲ್ಲ. ಇನ್ನು ಡಿಕೆಶಿ ಸಿಎಂ ಆದ ಮೇಲೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಹಜವಾಗಿ ಬದಲಾವಣೆ ಆಗೆಯೇ ಆಗುತ್ತದೆ. ಜನ ಬೆಂಬಲ ಇರುವ ಸೂಕ್ತ ವ್ಯಕ್ತಿಯನ್ನೇ ನೇಮಕ ಮಾಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಬಿಟ್ ಕಾಯಿನ್ ಬಹುಕೋಟಿ ಹಗರಣ ಕೇಸ್‌ – ನಲಪಾಡ್‌ಗೆ ಮತ್ತೆ ಇಡಿ ಸಮನ್ಸ್‌

ಬಿಟ್ ಕಾಯಿನ್ ಕೇಸ್‌; ನಲಪಾಡ್‌ಗೆ ಮತ್ತೆ ಇಡಿ ಸಮನ್ಸ್‌

ಬಿಟ್‌ ಕಾಯಿನ್‌ ಬಹುಕೋಟಿ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ (Mohammed Nalapad)ಗೆ ಮತ್ತೆ ಸಂಕಷ್ಟ ಎದುರಾಗಿದೆ. ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ (ED) ಸಮನ್ಸ್‌ ನೀಡಿದ್ದು, ನಾಳೆ (ಜೂ.1) ಸೋಮವಾರದಂದೇ ವಿಚಾರಣೆ ಹಾಜರಾಗುವಂತೆ ಸೂಚಿಸಿದೆ.

ನದಿಯಂತಾದ ರಸ್ತೆಯಲ್ಲಿ ಸಿಲುಕಿದ್ದ ದಿವ್ಯಾಂಗ ಯುವಕನನ್ನು ರಕ್ಷಿಸಿದ  ಬೆಂಗಳೂರು ಪೊಲೀಸ್ : ವಿಡಿಯೋ ವೈರಲ್

ಮಳೆಯಲ್ಲಿದ್ದ ದಿವ್ಯಾಂಗ ಯುವಕನನ್ನು ರಕ್ಷಿಸಿದ ಬೆಂಗಳೂರು ಪೊಲೀಸ್

ಶುಕ್ರವಾರ ರಾತ್ರಿ ಬೆಂಗಳೂರಿನಲ್ಲಿ ಸುರಿದ ಮಳೆ, ಜಲಾವೃತ ರಸ್ತೆಯಲ್ಲಿ ಸಿಲುಕಿದ್ದ ಅಂಗವಿಕಲ ವ್ಯಕ್ತಿರೊಬ್ಬರನ್ನ ಪೊಲೀಸ್‌ ಕಾನ್ಸ್‌ಟೆಬಲ್‌ ಒಬ್ಬರು ಹೆಗಲ ಮೇಲೆ ಹೊತ್ತು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಂತ್ರಾಲಯದ ಬಳಿ ದುರಂತ; ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಐವರು ನೀರುಪಾಲು

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಐವರು ನೀರುಪಾಲು

ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾಗಿರುವ ಘಟನೆ ನಡೆದಿದೆ. ಮೃತರನ್ನು ಹೈದರಾಬಾದ್‌ ಮೂಲದ ಯುವನ ಚಂದ್ರ(5), ಸತೀಶ್(35), ಮಂತ್ರಾಲಯ ಗ್ರಾಮದ ರಾಘವೇಂದ್ರ(25), ಧನುಷ್(23) ಉರವಕೊಂಡದ ಸಂಧ್ಯಾ(22) ಎಂದು ಗುರುತಿಸಲಾಗಿದೆ. ಮತ್ತೋರ್ವ ಯುವತಿ ಅಪರ್ಣಾ ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಲ್ಲಿಂದು ಭಾರೀ ಮಳೆ ಮುನ್ಸೂಚನೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರಿನಲ್ಲಿಂದು ಭಾರೀ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ರಾಜ್ಯದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (Weather) ಮುನ್ಸೂಚನೆ ನೀಡಿದೆ.

Basavakalyana News: ಬೀಜ-ರಸಗೊಬ್ಬರ ಖರೀದಿಗೆ ಮುಗಿಬಿದ್ದ ಅನ್ನದಾತರು

ಮಳೆ ಚುರುಕು: ರೈತರ ಮುಖದಲ್ಲಿ ಮಂದಹಾಸ

ತಾಲೂಕಿನ ವಿವಿಧ ಹೋಬಳಿಗಳಲ್ಲಿ ಕೃಷಿ ಇಲಾಖೆ ವತಿಯಿಂದ ಸಬ್ಸಿಡಿ ದರದಲ್ಲಿ ಬೀಜ ವಿತರಣೆ ಕಾರ್ಯ ಭರದಿಂದ ಸಾಗಿದೆ. ಹುಲಸೂರು, ರಾಜೇಶ್ವರ, ಮುಡಬಿ, ಮಂಠಾಳ ಸೇರಿದಂತೆ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ಬೆಳಿಗ್ಗೆಯಿಂದಲೇ ರೈತರು ಸರತಿ ಸಾಲಿನಲ್ಲಿ ನಿಂತು ಸೋಯಾಬಿನ್, ತೊಗರಿ, ಹೆಸರು, ಉದ್ದು ಬೀಜಗಳನ್ನು ಖರೀದಿಸುತ್ತಿರುವ ದೃಶ್ಯ ಸಾಮಾನ್ಯ ವಾಗಿದೆ. ಗುಣಮಟ್ಟದ ಬೀಜ ದೊರೆಯುತ್ತಿರುವುದರಿಂದ ರೈತರಲ್ಲಿ ಉತ್ಸಾಹ ಹೆಚ್ಚಾಗಿದೆ.

ಡಿಕೆ ಆಡಳಿತದಲ್ಲಿ ಡಿಸಿಎಂ ಹುದ್ದೆಗಳಿಗೆ ಕೊಕ್?

ಡಿಕೆ ಆಡಳಿತದಲ್ಲಿ ಡಿಸಿಎಂ ಹುದ್ದೆಗಳಿಗೆ ಕೊಕ್?

ಇನ್ನು ಡಿಸಿಎಂ ಹುದ್ದೆಗಳಿಗೆ ಕಚ್ಚಾಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಭವನೀಯ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ಡಿಸಿಎಂ ಹುದ್ದೆಗಳ ಬಗ್ಗೆ ಆಸಕ್ತಿ ತೋರುತ್ತಿಲ್ಲ ಎಂದು ಮೂಲಗಳು ನಡೆಸಿವೆ. ಉಪಮುಖ್ಯಮಂತ್ರಿ ಹುದ್ದೆಗಳು ಹೆಚ್ಚಾದಷ್ಟು ಆಡಳಿತ ದಲ್ಲಿ ಕಿರಿಕಿರಿ ಉಂಟಾಗುವ ಸಾಧ್ಯತೆಯಿದ್ದು, ಇದರಿಂದ ಸಚಿವರಲ್ಲಿ ಭಿನ್ನಾಭಿಪ್ರಾಯಕ್ಕೆ ದಾರಿಯಾಗಲಿದೆ ಎನ್ನುವುದು ಡಿಕೆಶಿ ಆಪ್ತರ ವಾದ.

ಸಚಿವ ಸಂಪುಟದಲ್ಲಿ ಡಿ ಟಿ. ಶ್ರೀನಿವಾಸ್ ಗೆ ಸಚಿವ ಸ್ಥಾನ ನೀಡಲು ಯಾದವ ಜನಾಂಗ ಮುಖಂಡರ ಒತ್ತಾಯ

ಡಿ ಟಿ. ಶ್ರೀನಿವಾಸ್ ಗೆ ಸಚಿವ ಸ್ಥಾನ ನೀಡಲು ಒತ್ತಾಯ

ಸುಮಾರು ವರ್ಷಗಳಿಂದ ಜನಾಂಗದಲ್ಲಿ ಶಾಸಕರಾಗಿ ಆಯ್ಕೆಯಾಗಿರಲಿಲ್ಲ. ಅಂತಹ ಸಂದರ್ಭ ದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಡಿ.ಟಿ.ಶ್ರೀನಿವಾಸ್ ಅವರು ನೂತನವಾಗಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.ಅಲ್ಲದೆ ಅವರು ರಾಜ್ಯ ಹಿಂದುಳಿದ ವರ್ಗಗಳ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ

CITU: ಸಿಐಟಿಯುನಿಂದ ಕನಿಷ್ಠ ವೇತನಕ್ಕಾಗಿ ಆಗ್ರಹಿಸಿ ಪ್ರತಿಭಟನೆ

CITU: ಸಿಐಟಿಯುನಿಂದ ಕನಿಷ್ಠ ವೇತನಕ್ಕಾಗಿ ಆಗ್ರಹಿಸಿ ಪ್ರತಿಭಟನೆ

ಕರ್ನಾಟಕ ರಾಜ್ಯ ಸರ್ಕಾರವು ಕನಿಷ್ಠ ವೇತನವನ್ನು ಪರಿಷ್ಕರಿಸಿ, ಪ್ರತಿ ಉದ್ದಿಮೆಗೆ ಪ್ರತ್ಯೇಕ ವಾಗಿ ಕನಿಷ್ಠ ವೇತನ ನಿಗದಿ ಮಾಡದೇ ಬಹುತೇಕ ಉದ್ದಿಮೆಗಳಿಗೆ ಏಕರೂಪವಾಗಿ ಹಾಗೂ ಹಿಂದೆ ಇದ್ದ ನಾಲ್ಕು ವಲಯಕ್ಕೆ ಬದಲಾಗಿ ಮೂರು ವಲಯಗಳಾಗಿ ಮಾಡಿ ಮೇ 22ರಂದು ಹೊರಡಿಸಿರುವ ಕನಿಷ್ಠ ವೇತನದ ಅಂತಿಮ ಅಧಿಸೂಚನೆಯನ್ನು ಸಿಐಟಿಯು ಸ್ವಾಗತಿಸುತ್ತದೆ. ಆದರೆ ಇದರಲ್ಲಿರುವ ನೂನ್ಯತೆಗಳನ್ನು ಸರಿಪಡಿಸಬೇಕೆಂದು ಆಗ್ರಹಿಸಿದರು

10 ಕಿ.ಮೀ. ಗೆ 700 ರೂ.; ಬೆಂಗಳೂರು ಕ್ಯಾಬ್ ಗಳಿಂದ ಹಗಲು ದರೋಡೆ ಎಂದ ಮಹಿಳೆ

ಬೆಂಗಳೂರಿನ ಕ್ಯಾಬ್ ದರ ಕೇಳಿ ಮಹಿಳೆ ಶಾಕ್

10 ಕಿ.ಮೀ. ಗಿಂತಲೂ ಕಡಿಮೆ ದೂರ ಪ್ರಯಾಣಿಸಲು ಮಹಿಳೆಯೊಬ್ಬರು ಕ್ಯಾಬ್ ಗೆ 700 ರೂ. ಪಾವತಿ ಮಾಡಿದ್ದಾರೆ. ಬಳಿಕ ಇದನ್ನು ಅವರು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೊಂಡಿದ್ದು, ಇದರಿಂದ ಅನೇಕರು ಶಾಕ್ ಗೊಂಡಿದ್ದಾರೆ. ಬೆಂಗಳೂರಿನಲ್ಲಿ ಕ್ಯಾಬ್ ದರ ಈಗ ಚರ್ಚೆಯನ್ನು ಉಂಟು ಮಾಡಿದೆ. ಅನೇಕರು ಇದು ಹಗಲು ದರೋಡೆಯಾಗಿದೆ ಎಂದು ಆರೋಪಿಸಿದ್ದಾರೆ.

ಶಸ್ತ್ರಚಿಕಿತ್ಸೆ ಸಾಧ್ಯವಿಲ್ಲ ಎಂದು ಹೇಳಲಾಗಿದ್ದ ವೃದ್ಧರಿಗೆ ಬೆಂಗಳೂರಿನಲ್ಲಿ ಯಶಸ್ವಿ ಶ್ವಾಸಕೋಶದ ಕ್ಯಾನ್ಸರ್ ರೊಬೊಟಿಕ್ ಚಿಕಿತ್ಸೆ

ವೃದ್ಧರಿಗೆ ಯಶಸ್ವಿ ಶ್ವಾಸಕೋಶದ ಕ್ಯಾನ್ಸರ್ ರೊಬೊಟಿಕ್ ಚಿಕಿತ್ಸೆ

ನಾಲ್ವರು ಮಕ್ಕಳ ತಂದೆಯಾಗಿರುವ ರೋಗಿಯು ಶ್ವಾಸಕೋಶದ ಕ್ಯಾನ್ಸರ್ ಪತ್ತೆಯಾದಾಗ ಸತತ ಉಸಿರಾಟದ ತೊಂದರೆ ಮತ್ತು ಕುಸಿಯುತ್ತಿರುವ ಆರೋಗ್ಯದಿಂದ ಸಂಕಷ್ಟ ಅನುಭವಿಸುತ್ತಿದ್ದರು. ಆದಾಗ್ಯೂ, ಅವರ ಗಂಭೀರ ಕ್ರಾನಿಕ್ ಅಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ), ದುರ್ಬಲ ಶ್ಚಾಸಕೋಶದ ರಿಸರ್ವ್ ಮತ್ತು ಮಧುಮೇಹವು ಸಾಂಪ್ರದಾಯಿಕ ತೆರೆದ ಎದೆಯ ಶಸ್ತ್ರಚಿಕಿತ್ಸೆಯನ್ನು ಅತ್ಯಂತ ಕಠಿಣವಾಗಿಸಿತ್ತು

ಮಧುಗಿರಿ ತಾಪಂನಲ್ಲಿ 4.24 ಕೋಟಿ ಗುಳುಂ; ಮೂವರು ಇಒಗಳ ಸಸ್ಪೆಂಡ್

ಮಧುಗಿರಿ ತಾಪಂನಲ್ಲಿ 4.24 ಕೋಟಿ ಗುಳುಂ; ಮೂವರು ಇಒಗಳ ಸಸ್ಪೆಂಡ್

ಮಧುಗಿರಿ ತಾಲೂಕು ಪಂಚಾಯಿತಿಯಲ್ಲಿ ನೌಕರರ ಗಳಿಕೆ ರಜೆ ನಗದೀಕರಣ ಮಂಜೂರಾತಿಯಲ್ಲಿ ಅಕ್ರಮ ಎಸಗಿ, ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಕೇಳಿಬಂದಿತ್ತು. ಇದಕ್ಕೆ ಸಂಬಂಧಿಸಿ ಮೂವರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

illegal mining case: ಅಕ್ರಮ ಅದಿರು ಸಾಗಾಟ; ಎರಡು ಪ್ರಮುಖ ಪ್ರಕರಣಗಳಲ್ಲಿ ಜನಾರ್ದನ ರೆಡ್ಡಿ ಖುಲಾಸೆ

ಅಕ್ರಮ ಅದಿರು ಸಾಗಾಟ; ಎರಡು ಪ್ರಕರಣಗಳಲ್ಲಿ ಜನಾರ್ದನ ರೆಡ್ಡಿ ಖುಲಾಸೆ

ಅಕ್ರಮ ಗಣಿಗಾರಿಕೆ ಪ್ರಕರಣದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಕೋರಿ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಶಾಸಕ ಜನಾರ್ದನ ರೆಡ್ಡಿ ಸೇರಿ ಇತರ ಆರೋಪಿಗಳನ್ನು ಪ್ರಕರಣದಿಂದ ಕೈಬಿಟ್ಟು ಮಹತ್ವದ ಆದೇಶ ಹೊರಡಿಸಿದೆ.

ಇದು ಅಪರೂಪದ ಗಜ ಪ್ರೇಮ ಪ್ರಸಂಗ; ಉತ್ತರಾಖಂಡದಲ್ಲಿ ಕಾಡಾನೆಗಳೊಂದಿಗೆ ʼಓಡಿ ಹೋದʼ ಕರ್ನಾಟಕದ ಸಾಕಾನೆಗಳು!

ಉತ್ತರಾಖಂಡದಲ್ಲಿ ಕಾಡಾನೆಗಳೊಂದಿಗೆ ಪರಾರಿಯಾದ ಸಾಕಾನೆಗಳು!

Kumki Elephants: ಕರ್ನಾಟಕದಿಂದ ಉತ್ತರಾಖಂಡಕ್ಕೆ ಹಸ್ತಾಂತರಿಸಲಾಗಿದ್ದ 2 ಕುಮ್ಕಿ ಹೆಣ್ಣಾನೆಗಳು ಕಾಡಾನೆ ಹಿಂದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ. ಉತ್ತರಾಖಂಡದ ಜಿಮ್‌ ಕಾರ್ಬೆಟ್‌ ರಾಷ್ಟ್ರೀಯ ಉದ್ಯಾನವನದಲ್ಲಿ ಅಪರೂಪದ ವಿದ್ಯಾಮಾನ ಜರುಗಿದೆ. ಕಾಡು ಗಸ್ತು ತಿರುಗುವ ಉದ್ದೇಶದಿಂದ ಇಲ್ಲಿಗೆ ಕರ್ನಾಟಕದಿಂದ 2 ಹೆಣ್ಣಾನೆಗಳನ್ನು ಕರೆತರಲಾಗಿತ್ತು. ಇದೀಗ ಇವು ʼಓಡಿ ಹೋಗಿದ್ದುʼ ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಯುತ್ತಿದೆ.

ಜೂನ್ 3ಕ್ಕೆ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಕೆ.ಸಿ. ವೇಣುಗೋಪಾಲ್ ಘೋಷಣೆ

ಜೂನ್ 3ಕ್ಕೆ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕಾರ: ಕೆ.ಸಿ. ವೇಣುಗೋಪಾಲ್

Karnataka New CM Oath: ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿ, ಮುಖ್ಯಮಂತ್ರಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ. ಜೂನ್ 3ರಂದು ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

SSLC Exam 2 Results 2026: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ; ಶೇ.62 ವಿದ್ಯಾರ್ಥಿಗಳು ಪಾಸ್‌

SLC Exam 2 Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ

ರಾಜ್ಯದಾದ್ಯಂತ ಎಸ್‌ಎಸ್ಎಲ್‌ಸಿ ಪರೀಕ್ಷೆ- 2ನ್ನು ಮೇ 18ರಿಂದ 25ರವರೆಗೆ ಒಟ್ಟು 358 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಇದೀಗ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿದ್ದು, ರಿಸಲ್ಟ್‌ ವೀಕ್ಷಿಸುವುದು ಹೇಗೆ?, ವೆಬ್‌ಸೈಟ್‌ ಲಿಂಕ್‌ ಕುರಿತ ಮಾಹಿತಿ ಇಲ್ಲಿ ನೀಡಲಾಗಿದೆ.

Karnataka New CM: ಸರ್ಕಾರ ರಚಿಸಲು ಡಿ.ಕೆ.ಶಿವಕುಮಾರ್‌ಗೆ ರಾಜ್ಯಪಾಲರಿಂದ ಆಹ್ವಾನ; ಜೂನ್‌ 3ಕ್ಕೆ ನೂತನ ಸಿಎಂ ಪ್ರಮಾಣ ವಚನ

ಸರ್ಕಾರ ರಚಿಸಲು ಡಿ.ಕೆ.ಶಿವಕುಮಾರ್‌ಗೆ ರಾಜ್ಯಪಾಲರಿಂದ ಆಹ್ವಾನ;

ಬೆಂಗಳೂರಿನ ವಿಧಾನಸೌಧದಲ್ಲಿ ಶನಿವಾರ ನಡೆದ ಸಿಎಲ್‌ಪಿ ಸಭೆಯಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಅವರನ್ನು ಆಯ್ಕೆ ಮಾಡಲಾಗಿತ್ತು. ಇದಾದ ಬಳಿಕ ಡಿ.ಕೆ.ಶಿವಕುಮಾರ್‌ ಅವರು ಕಾಂಗ್ರೆಸ್‌ ನಾಯಕರೊಂದಿಗೆ ಲೋಕಭವನಕ್ಕೆ ತೆರಳಿ, ಸರ್ಕಾರ ರಚಿಸಲು ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಸರ್ಕಾರ ರಚನೆಗೆ ಗವರ್ನರ್‌ ಆಹ್ವಾನಿಸಿದ್ದಾರೆ.

Loading...