ಕೇಂದ್ರ ಸರ್ಕಾರ ನಮಗೆ ಕೊಟ್ಟಿದ್ದು ಅನುದಾನವಲ್ಲ, ಸಾಲ: ಸಿಎಂ ಸಿದ್ದರಾಮಯ್ಯ
ಬಿಜೆಪಿಗರು ಸುಳ್ಳು ಹೇಳುತ್ತಿದ್ದಾರೆ. ಕರ್ನಾಟಕಕ್ಕೆ ಕೇಂದ್ರ ಸರ್ಕಾರ ನಮಗೆ ನ್ಯಾಯವಾಗಿ ಸಲ್ಲಬೇಕಾದ ಅನುದಾನವನ್ನು ನೀಡಿಲ್ಲ. ಬದಲಾಗಿ ಬಡ್ಡಿರಹಿತ ಸಾಲವನ್ನು ಮಾತ್ರ ನೀಡಿದೆ ಎಂದು ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಕುರಿತ ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ.