ರಾಜ್ಯ ಕಿರಿಯರ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ಗೆ ಜಿಲ್ಲಾ ತಂಡ ಆಯ್ಕೆ
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇದೇ ತಿಂಗಳ 11 ಮತ್ತು 12ರಂದು ನಡೆಯಲಿರುವ ರಾಜ್ಯ ಮಟ್ಟದ ಕಿರಿಯರ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ಗೆ 14, 16, 18 ಹಾಗೂ 20 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ತಂಡವನ್ನು ಆಯ್ಕೆ ಮಾಡಲಾಗುತ್ತಿದೆ. ಜಿಲ್ಲಾ ಮಟ್ಟದ ಆಯ್ಕೆ ಸ್ಪರ್ಧೆಯು ಆ.6ರಂದು ಬೆಳಿಗ್ಗೆ 10 ಗಂಟೆಗೆ ಚಿಕ್ಕಬಳ್ಳಾಪುರದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯ ಲಿದ್ದು, ಜಿಲ್ಲೆಯ ಅರ್ಹ ಕ್ರೀಡಾಪಟುಗಳು ಭಾಗವಹಿಸುವಂತೆ ಕೋರಲಾಗಿದೆ.