ಗೃಹ ಸಚಿವರಿಗೆ ಅವಹೇಳನ, ಚಿಕ್ಕಮಗಳೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಬಂಧನ
ಬಂಧನದ ವೇಳೆ ಚಿಕ್ಕಮಗಳೂರು (Chikkamagaluru News) ನಗರದಲ್ಲಿರುವ ಮಾರ್ಕೆಟ್ ರಸ್ತೆಯಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ಕಂಡಿತು. ಸಂತೋಷ್ ಕೋಟ್ಯಾನ್ ಅವರನ್ನು ಪೊಲೀಸ್ ಜೀಪ್‌ಗೆ ಕರೆದೊಯ್ಯುವ ವೇಳೆ ಬಿಜೆಪಿ ಕಾರ್ಯಕರ್ತರು ಅಡ್ಡಬಂದಿದ್ದು, ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ನೂಕಾಟ ತಳ್ಳಾಟ ನಡೆಯಿತು. ಸಂತೋಷ್ ಬಂಧನ ಖಂಡಿಸಿ ನಗರ ಠಾಣೆ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪೊಲೀಸರು ಠಾಣೆ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದಾರೆ.