ಇಂದು ಬೆಂಗಳೂರು, ಕೊಡಗು ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ
Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಸಂಜೆಯ ವೇಳೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಾಗುತ್ತದೆ. ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ರಾಜ್ಯದ ವಿವಿಧೆಡೆ ಮೇ 16 ರವರೆಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.