ಮಾಲೂರು ಶಾಸಕ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್!
Malur Assembly election results: ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಮಂಜುನಾಥಗೌಡ ಅರ್ಜಿ ಸಲ್ಲಿಸಿದ್ದರು. ವಿಧಾನಸಭೆ ಚುನಾವಣೆ ಮತ ಎಣಿಕೆ ವೇಳೆ ಲೋಪವಾಗಿದೆ. ಹೀಗಾಗಿ ಶಾಸಕರ ಆಯ್ಕೆ ಅಸಿಂಧುಗೊಳಿಸಲು ಮನವಿ ಮಾಡಲಾಗಿತ್ತು. ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್, 4 ವಾರಗಳಲ್ಲಿ ಹೈಕೋರ್ಟ್ ಮರು ಮತ ಎಣಿಕೆ ನಡೆಸಲು ಆದೇಶ ನೀಡಿದೆ.