ಭೀಮಾ ನದಿ ಪ್ರದೇಶಕ್ಕೆ ಹೆಚ್ಚುವರಿ 5 ಟಿಎಂಸಿ ನೀರು ಒದಗಿಸಿ: ಡಿಕೆಶಿ
DK Shivakumar: ʼʼನದಿ ಜೋಡಣೆ ವಿಚಾರವಾಗಿ ಕೇಂದ್ರ ಜಲ ಶಕ್ತಿ ಸಚಿವರ ನೇತೃತ್ವದಲ್ಲಿ ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯನ್ನು ರಚಿಸಲಾಗಿದ್ದು, ಎಲ್ಲ ರಾಜ್ಯಗಳು ಅದರ ಸದಸ್ಯರಾಗಿವೆ. ಮಂಗಳವಾರ ಇದರ 24ನೇ ಸಭೆ ನಡೆದಿದ್ದು, ನಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ ಗೋದಾವರಿ ಹಾಗೂ ಕಾವೇರಿ, ಬೇಡ್ತಿ ಮತ್ತು ವರದಾ ನದಿ ಜೋಡಣೆ ಬಗ್ಗೆ ಚರ್ಚೆ ನಡೆದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.