ತುಳು 2ನೇ ಆಡಳಿತ ಭಾಷೆ
ಇಡೀ ಕರಾವಳಿ ಮತ್ತು ಮಲೆನಾಡು ಭಾಗದ ಸಮಗ್ರ ಮುಖಚಿತ್ರವನ್ನೇ ಬದಲಿಸಬಲ್ಲ ಬರೋಬ್ಬರಿ 32,611 ಕೋಟಿ ರು. ಮೊತ್ತದ ಬೃಹತ್ ಮೂಲ ಸೌಕರ್ಯ, ಶಿಕ್ಷಣ, ಬಂದರು ಹಾಗೂ ಪ್ರವಾ ಸೋದ್ಯಮ ಯೋಜನೆಗಳ ಪ್ಯಾಕೇಜ್‌ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ.
ಸಂಪುಟದಲ್ಲಿ ಸದ್ಯ ಮಹಿಳೆಗೆ ಮೀಸಲಾದ ಒಂದು ಸ್ಥಾನ ಹಾಗೂ ಮಾಜಿ ಸಚಿವ ನಾಗೇಂದ್ರ ಅವರಿಂದ ತೆರವಾಗಿರುವ ಒಂದು ಸ್ಥಾನ ಸೇರಿದಂತೆ ಎರಡು ಮಂತ್ರಿ ಸ್ಥಾನಗಳು ಖಾಲಿ ಉಳಿದಿವೆ. ಇದರ ಜತೆ ಸದ್ಯದಲ್ಲೇ ಇನ್ನೂ ಎರಡು ಅಥವಾ ಮೂರು ಸ್ಥಾನಗಳು ತೆರವಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸುತ್ತಾ, ಸಂಪುಟದ ಇನ್ನೂ ಮೂವರ ಸಚಿವರ ಮೇಲೆ ಇ.ಡಿ ದಾಳಿ ಆಗುವ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿಯುವ ಮೂಲಕ ಪರೋಕ್ಷ ಸೂಚನೆಯನ್ನೇ ನೀಡಿದ್ದಾರೆ
ಭಕ್ತರಹಳ್ಳಿ ಗ್ರಾಮದ ಬಳಿ ಜಮೀನಿನ ಸರ್ಕಾರಿ ಮಾರ್ಗಸೂಚಿ ಮೌಲ್ಯ ಎಕರೆಗೆ ಸುಮಾರು ರೂಪಾಯಿ 15 ಸಾವಿರ ಇದ್ದು, ಅದರ ನಾಲ್ಕು ಪಟ್ಟು ಲೆಕ್ಕದಲ್ಲಿ ಸುಮಾರು ರೂಪಾಯಿ 63,400 ಪರಿಹಾರ ದೊರೆಯಲಿದೆ. ಯಶವಂತಪುರದ ಬಳಿ ಎಕರೆಗೆ ಸುಮಾರು ರೂಪಾಯಿ 51,500 ಪರಿಹಾರ ನಿಗದಿಯಾಗಿ ರುವ ಮಾಹಿತಿಯನ್ನು ಅಧಿಕಾರಿಗಳು ಸಭೆಯಲ್ಲಿ ನೀಡಿದರು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅತಿಥಿಗಳಾದ ಶ್ರೀನಿಧಿ ಬೆಂಗಳೂರು, ಬರಹಗಾರ ಹಾಗೂ ನಿರ್ದೇಶಕ ‘ಬ್ಲಿಂಕ್’, ‘ಜೆರಾಕ್ಸ್’ ಮತ್ತು ‘ವಿಡಿಯೋ’ ಚಿತ್ರಗಳಿಂದ ಚಿರ ಪರಿಚಿತರಾಗಿದ್ದಾರೆ. ಯುವ ಚಲನಚಿತ್ರ ನಿರ್ಮಾಪಕರನ್ನು ಪ್ರೋತ್ಸಾಹಿಸುತ್ತಾ, “ಒಂದು ಚಿತ್ರವು ಚಿತ್ರಕಥೆಯಿಂದ ಆರಂಭ ವಾಗಬಹುದು. ಆದರೆ ಚಲನಚಿತ್ರ ನಿರ್ಮಾಣದ ಪ್ರಕ್ರಿಯೆಯು ಕಥೆಗೆ ತನ್ನದೇ ಆದ ಜೀವವನ್ನು ನೀಡುತ್ತದೆ” ಎಂದು ಹೇಳಿದರು
ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಲು ಅವಕಾಶವಿಲ್ಲದ ಜಮೀನುಗಳನ್ನು ದರಖಾಸ್ತು ಮೂಲಕ ಪ್ರಭಾವಿಗಳಿಗೆ ಅಕ್ರಮವಾಗಿ ಮಂಜೂರು ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಲೋಕಾ ಯುಕ್ತ(Lokayukta) ಅಧಿಕಾರಿಗಳು ಚಿಕ್ಕಬಳ್ಳಾಪುರ ತಾಲ್ಲೂಕು ಕಚೇರಿಯ ರೆಕಾರ್ಡ್ ರೂಂ ಹಾಗೂ ಎಡಿಎಲ್‌ಆರ್ ಕಚೇರಿ ಮೇಲೆ ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸಿದರು.
Bengaluru Murder Case: ಬೆಂಗಳೂರು ನಗರದ ಹೊರವಲಯದ ಚಿಕ್ಕಜಾಲದಲ್ಲಿ ಘಟನೆ ನಡೆದಿದೆ. ಪಕ್ಕದ ಮನೆಯ 13 ವರ್ಷದ ಬಾಲಕನನ್ನು ಪರಿಚಿತ ಯುವಕನೇ ಕಿಡ್ನ್ಯಾಪ್ ಮಾಡಿ, ಕೊಲೆ ಮಾಡಿದ್ದಾನೆ. ಹಣಕ್ಕಾಗಿ ಆರೋಪಿ ಕೃತ್ಯ ಎಸಗಿದ್ದು, ಬಾಲಕನ ಮೃತದೇಹವನ್ನು ಕಾರಿನಲ್ಲಿ ಆಂಧ್ರ ಪ್ರದೇಶಕ್ಕೆ ಸಾಗಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ.
ಯಜ್ಞ - ತಪಸ್ಸು - ವ್ರತಗಳನ್ನು ಮಾಡದೇ ಇದ್ದರೂ ಬಾಯಾರಿದವರಿಗೆ ನೀರನ್ನು ದಾನ ಮಾಡಿದವನು ಸ್ವರ್ಗವನ್ನು ಪಡೆಯುತ್ತಾನೆ. ಬೇಸಿಗೆಯಲ್ಲಿ ದಾರಿಹೋಕರಿಗೆ ನೀರನ್ನು ಒದಗಿಸುವುದು, ಬಾವಿ ಹಾಗೂ ಕೆರೆಗಳನ್ನು ನಿರ್ಮಿಸುವುದು ಶ್ರೇಷ್ಠ ಕಾರ್ಯ ಎಂದು ಧರ್ಮ ಶಾಸ್ತ್ರವನ್ನು ಆಧರಿಸಿ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Pavagada News: ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆ ಗ್ರಾಮದಲ್ಲಿ ಶುಕ್ರವಾರ ಮಳೆಗಾಗಿ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ವೈ.ಎನ್. ಹೊಸಕೋಟೆ ಗ್ರಾಮದ ಮುಸ್ಲಿಂ ಸಮುದಾಯದವರು ಶುಕ್ರವಾರದ ಸಾಮೂಹಿಕ ನಮಾಜ್ ಪೂರ್ಣಗೊಳಿಸಿದ ಬಳಿಕ ಈದ್ಗಾ ಮೈದಾನದಲ್ಲಿ ಒಂದೆಡೆ ಸೇರಿ ಮಳೆಗಾಗಿ ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ.
ಮಂಗಳೂರಿನ ಪ್ರಜಾಸೌಧದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಮಾನ್ಯತೆ ಸೇರಿ ಕರಾವಳಿ ಭಾಗದ ಪ್ರವಾಸೋದ್ಯಮ, ಬಂಡವಾಳ ಹೂಡಿಕೆ, ಆರೋಗ್ಯ, ಭಾಷೆ ಸೇರಿದಂತೆ ಸರ್ವತೋಮುಖ ಅಭಿವೃದ್ಧಿಗಾಗಿ ಹಲವು ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ.
Tumkur News: ವಿಶ್ವಕರ್ಮ ಜಯಂತಿಯ ದಿನವೇ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವಿರುವುದು ವಿಶೇಷ. ಕರಕುಶಲ ಕರ್ಮಿಗಳಿಗೆ ಪ್ರೋತ್ಸಾಹ ನೀಡಲು ಪ್ರಧಾನಿ ಮೋದಿ ಅವರು ವಿಶೇಷ ‘ವಿಶ್ವಕರ್ಮ ಯೋಜನೆʼಯನ್ನು ಜಾರಿಗೆ ತಂದಿದ್ದು, ಸಮುದಾಯದವರು ಇದರ ಪ್ರಯೋಜನ ಪಡೆಯಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ತಿಳಿಸಿದ್ದಾರೆ.
Tumkur News: ತುಮಕೂರು ಪಟ್ಟಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು 2026-27ನೇ ಸಾಲಿಗೆ ಸೊಸೈಟಿ 1000 ಲಕ್ಷ ರೂ. ಠೇವಣಿ ಸಂಗ್ರಹಿಸುವ ಗುರಿ ಹೊಂದಿದ್ದು, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಗ್ರಾಹಕರಿಗೆ ತ್ವರಿತ ಸೇವೆ ನೀಡುವ ಉದ್ದೇಶದಿಂದ ಸಂಘದ ವ್ಯವಹಾರವನ್ನು ಕಂಪ್ಯೂಟರೀಕರಣಗೊಳಿಸಲಾಗಿದೆ ಸೊಸೈಟಿಯ ಅಧ್ಯಕ್ಷ ಪಿ.ಆರ್. ದೇವರಾಜು ತಿಳಿಸಿದ್ದಾರೆ.
ಅಖಿಲ ಕರ್ನಾಟಕ ರೈತ ಸಂಘದ ಜಿಲ್ಲಾ ಸಂಚಾಲಕ ಎನ್.ಆರ್.ರವಿಚಂದ್ರರೆಡ್ಡಿ ಮಾತನಾಡಿ, ರೈತರ ಸಮಸ್ಯೆ ಆಲಿಸಲು ಸಭೆ ಕರೆದ ಅಧಿಕಾರಿಗಳೇ ಸಮರ್ಪಕವಾಗಿ ಸ್ಪಂದಿಸದೆ, ಸರ್ಕಾರಿ ವಿಡಿಯೋ ಕಾನ್ಫರೆನ್ಸ್ ಇದೆ ಎಂಬ ಕಾರಣ ನೀಡಿ ಸಭೆಯಿಂದ ಹೊರನಡೆದಿರುವುದು ಖಂಡನೀಯ. ನಮ್ಮ ಸಮಸ್ಯೆಗಳನ್ನು ಯಾರ ಬಳಿ ಹೇಳಿಕೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿನ ನೃಪತುಂಗ ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾದ ಈ ಕಾರ್ಯ ಕ್ರಮವು ಪ್ರಾಯೋಗಿಕ AI ಶಿಕ್ಷಣಕ್ಕೆ ಪ್ರವೇಶ ವಿಸ್ತರಿಸುವ ಮೂಲಕ ಮತ್ತು ಭವಿಷ್ಯಕ್ಕೆ ಸಿದ್ಧವಾದ ತಂತ್ರಜ್ಞಾನ ಕಾರ್ಯಪಡೆಯನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುವ ಮೂಲಕ AI-ಆಧಾರಿತ ಪರಿಸರ ವ್ಯವಸ್ಥೆ ನಿರ್ಮಿಸುವ ಕರ್ನಾಟಕದ ಮಹತ್ವಾಕಾಂಕ್ಷೆಯನ್ನು ಬೆಂಬಲಿಸುತ್ತದೆ.
Tulu second official language: ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ ನಡೆದಿದೆ. ತುಳು ಭಾಷೆಯನ್ನು (Tulu) ಕರ್ನಾಟಕದ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಮಾಡುವುದು, 'ದಕ್ಷಿಣ ಕನ್ನಡ' ಜಿಲ್ಲೆಯ ಹೆಸರನ್ನು 'ಮಂಗಳೂರು ಜಿಲ್ಲೆ' ಎಂದು ಮರುನಾಮಕರಣ ಮಾಡಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದ ಇತ್ತು. ಈ ಬಗ್ಗೆ ಮಹತ್ವದ ತೀರ್ಮಾನವನ್ನು ಸರ್ಕಾರ ಕೈಗೊಂಡಿದ್ದು, ಯಾವೆಲ್ಲಾ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂಬ ಕುರಿತ ಮಾಹಿತಿ ಇಲ್ಲಿದೆ.
ಕಾರ್ಯಕ್ರಮದಲ್ಲಿ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಲಾಯಿತು. ಶಿಕ್ಷಕ ಚಂದ್ರಶೇಖರ್ ಮಾತನಾಡಿ, ವಿಶ್ವಕರ್ಮ ಸಮುದಾಯವು ಬುದ್ಧಿವಂತಿಕೆ, ದೂರದೃಷ್ಟಿ ಹಾಗೂ ವಿಶಿಷ್ಟ ಕೌಶಲ್ಯಕ್ಕೆ ಹೆಸರಾಗಿದ್ದು, ಚಿನ್ನ-ಬೆಳ್ಳಿ ಕೆಲಸ, ಮರಗೆಲಸ, ಕಬ್ಬಿಣದ ಕೆಲಸ, ಶಿಲ್ಪಕಲೆ ಸೇರಿದಂತೆ ವಿವಿಧ ಸಾಂಪ್ರದಾಯಿಕ ಕಸುಬುಗಳಲ್ಲಿ ಪರಿಣತಿ ಹೊಂದಿದೆ ಎಂದರು.
ರಾಜ್ಯ ಸರ್ಕಾರವು 2024 ರಲ್ಲಿ ಮಂಡಿಸಿದ್ದ ‘ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ವಿಧೇಯಕಕ್ಕೆ 2024ರ ಸೆಪ್ಟೆಂಬರ್ 23 ರಂದು ಕರ್ನಾಟಕದ ರಾಜ್ಯಪಾಲರು ಅಧಿಕೃತವಾಗಿ ಅಂಕಿತ ಹಾಕಿದ್ದರು. ಎರಡು ವರ್ಷಗಳ ಸುದೀರ್ಘ ಪ್ರಕ್ರಿಯೆಯ ಬಳಿಕ ಸಿನಿಮಾ ಟಿಕೆಟ್‌ಗಳ ಮೇಲೆ ಸೆಸ್ ವಿಧಿಸಲು ಅಧಿನಿಯಮವನ್ನು ಜಾರಿಗೆ ತರಲಾಗುತ್ತಿದೆ.
Kalaburagi News: ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂರ್ತಿಯನ್ನು ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ತೆರವುಗೊಳಿಸಿರುವ ಸ್ಥಳದಲ್ಲಿಯೇ ಸಿದ್ದರಾಮಯ್ಯ ಅವರ ಮೂರ್ತಿಯನ್ನು ಮರಳಿ ಪ್ರತಿಷ್ಠಾಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.