ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

108 ಆರೋಗ್ಯ ಕವಚ ಕೇಂದ್ರೀಕೃತ ಕಮಾಂಡ್-ಕಂಟ್ರೋಲ್ ಕೇಂದ್ರ ಉದ್ಘಾಟಿಸಿದ ಸಿಎಂ; ಏನಿದರ ಉಪಯೋಗ?

108 ಆರೋಗ್ಯ ಕವಚ ಕಮಾಂಡ್-ಕಂಟ್ರೋಲ್ ಕೇಂದ್ರ ಉದ್ಘಾಟಿಸಿದ ಸಿಎಂ

108 command centre: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬೆಂಗಳೂರಿನ ಬಸವೇಶ್ವರ ನಗರದ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೇಶದ ಮೊದಲ ಸರ್ಕಾರಿ ಸ್ವಾಮ್ಯದ ಅತ್ಯಾಧುನಿಕ ಮಾದರಿಯ ಸಮಗ್ರ ಕಮಾಂಡ್‌ ಮತ್ತು ಕಂಟ್ರೋಲ್‌ ಸೆಂಟರ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.

Padma Awards 2026: ರಾಜ್ಯದ ಶತಾವಧಾನಿ ಡಾ. ಆರ್. ಗಣೇಶ್, ಅಂಕೇಗೌಡ ಎಂ, ಡಾ. ಎಸ್. ಜಿ. ಸುಶೀಲಮ್ಮಗೆ ರಾಷ್ಟ್ರಪತಿಗಳಿಂದ ಪದ್ಮ ಪ್ರಶಸ್ತಿ ಪ್ರದಾನ

ಕರ್ನಾಟಕದ ಮೂವರು ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಪ್ರಶಸ್ತಿ ಪ್ರದಾನ

ಕರ್ನಾಟಕದ ಮೂವರು ಸೇರಿ ಒಟ್ಟು 66 ಮಂದಿಗೆ ಮೊದಲ ಹಂತದಲ್ಲಿ 2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಕಲಾ ಕ್ಷೇತ್ರದಲ್ಲಿ ಕರ್ನಾಟಕದ ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ಪದ್ಮಭೂಷಣ ಪ್ರಶಸ್ತಿ, ಸಮಾಜ ಸೇವೆಗೆ ನೀಡಿದ ಕೊಡುಗೆಗಾಗಿ ಅಂಕೇಗೌಡ ಎಂ. ಮತ್ತು ಡಾ. ಎಸ್. ಜಿ. ಸುಶೀಲಮ್ಮ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ; ಯೋಜನೆ-ಸಾಂಖ್ಯಿಕ ಇಲಾಖೆ ಹೊಣೆ ಕೆ.ವೆಂಕಟೇಶ್‌ ಹೆಗಲಿಗೆ, ಸಿಎಂ ಬಳಿ ಪ್ರಮುಖ ಖಾತೆಗಳು

ಸಚಿವ ಸಂಪುಟ; ಯೋಜನೆ-ಸಾಂಖ್ಯಿಕ ಇಲಾಖೆ ಹೊಣೆ ಕೆ.ವೆಂಕಟೇಶ್‌ ಹೆಗಲಿಗೆ

Karnataka cabinet reshuffle: ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್‌ ಅವರು ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾಗಿದ್ದರು. ಹೀಗಾಗಿ ಈ ಇಲಾಖೆಯ ಹೊಣೆಯನ್ನು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್‌ ಅವರಿಗೆ ವಹಿಸಲಾಗಿದೆ. ಇನ್ನುಳಿದ ಪ್ರಮುಖ ಖಾತೆಗಳು ಸಿಎಂ ಸಿದ್ದರಾಮಯ್ಯ ಅವರ ಬಳಿಯೇ ಉಳಿದಿವೆ.

ಮುಂದಿನ ತಿಂಗಳಲ್ಲೇ ಮಂಗಳೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಸಂಚಾರ ಆರಂಭ: ವಿ. ಸೋಮಣ್ಣ

ಜೂನ್‌ನಲ್ಲಿ ಮಂಗಳೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ ಸೇವೆ

Mangaluru to Bengaluru vande bharat express: ಮಂಗಳೂರು ಮತ್ತು ಬೆಂಗಳೂರು ಮಾರ್ಗದಲ್ಲಿ ಈಗಾಗಲೇ ವಿದ್ಯುದ್ದೀಕರಣ ಕಾಮಗಾರಿ ಸಂಪೂರ್ಣವಾಗಿ ಮುಕ್ತಾಯಗೊಂಡಿದೆ. ಮುಂದಿನ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಕೆಲವು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಆ ಪಟ್ಟಿಯಲ್ಲಿ ಬಹುನಿರೀಕ್ಷಿತ ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲು ಕೂಡ ಸೇರಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಭಟ್ಕಳ ನದಿ ದುರಂತ; ಶಾರದಾಹೊಳೆಯಲ್ಲಿ ನೆರವೇರಿದ 11 ಮಂದಿಯ ಸಾಮೂಹಿಕ ಅಂತ್ಯಸಂಸ್ಕಾರ

ಭಟ್ಕಳ ನದಿ ದುರಂತ; 11 ಮಂದಿಯ ಸಾಮೂಹಿಕ ಅಂತ್ಯಸಂಸ್ಕಾರ

Bhatkal Tragedy: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ಶಾರದಾಹೊಳೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ಸರ್ಕಾರದ ನೆರವು ನಿರಂತರವಾಗಿ ಇರಲಿದೆ. ಚಿಕಿತ್ಸೆ ಪಡೆಯುತ್ತಿರುವವರ ವೈದ್ಯಕೀಯ ವೆಚ್ಚವನ್ನು ವೈಯಕ್ತಿಕವಾಗಿ ಭರಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

Fuel Prices Hike: ಕೇಂದ್ರ ಬಿಜೆಪಿ ಸರ್ಕಾರವನ್ನು ಜನರೇ ಕಿತ್ತೊಗೆಯಬೇಕು: ತೈಲ ಬೆಲೆ ಏರಿಕೆಗೆ ಡಿ.ಕೆ. ಶಿವಕುಮಾರ್ ಕಿಡಿ

ಕೇಂದ್ರ ಬಿಜೆಪಿ ಸರ್ಕಾರವನ್ನು ಜನರೇ ಕಿತ್ತೊಗೆಯಬೇಕು: ಡಿ.ಕೆ. ಶಿವಕುಮಾರ್

DK Shivakumar: ಬೆಲೆ ಏರಿಕೆ ವಿರುದ್ಧ ಜನರ ಗಮನ ಸೆಳೆಯುವುದು, ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ. ಜನರೇ ಈ ಜನವಿರೋಧಿ ಕೇಂದ್ರ ಸರ್ಕಾರವನ್ನು ಕಿತ್ತೊಗೆಯುವ ಕೆಲಸ ಆಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಿಎಂ ಆಕ್ರೋಶ

ಪ್ರಧಾನಿ ಮೋದಿ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ: ಸಿಎಂ

Petrol, diesel prices hike: ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ದರಗಳ ಏರಿಸಿದ್ದು, ದೇಶದ ಇತಿಹಾಸದಲ್ಲಿ ಹೀಗೆ ಏರಿಕೆಯಾಗಿದ್ದಿಲ್ಲ. ಜನಸಾಮಾನ್ಯರು, ಮದ್ಯಮ ವರ್ಗದ ಜನರ ಜೀವನ ದುಸ್ತರವಾಗಿದೆ. ಬೆಲೆಯೇರಿಕೆಯಿಂದ ಜನ ತತ್ತರಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿಗರಲ್ಲಿ ಹೆಚ್ಚುತ್ತಿದೆ ಪ್ರೋಟೀನ್ ಕ್ರೇಜ್‌; ಕೇವಲ 'ಪ್ರೋಟೀನ್ ಬಾರ್'ಗಾಗಿಯೇ 2 ಲಕ್ಷ ಖರ್ಚು ಮಾಡಿದ ಗ್ರಾಹಕ!

ಕೇವಲ 'ಪ್ರೋಟೀನ್ ಬಾರ್'ಗಾಗಿಯೇ 2 ಲಕ್ಷ ಖರ್ಚು ಮಾಡಿದ ಗ್ರಾಹಕ!

Instamart: ಪ್ರೋಟೀನ್ ಉತ್ಪನ್ನಗಳ ಬೇಡಿಕೆಯಲ್ಲಿ ಭಾರತದ ಸಿಲಿಕಾನ್ ಸಿಟಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಆದರೆ ಅಚ್ಚರಿಯ ವಿಚಾರವೆಂದರೆ, ಕೇವಲ ಮೆಟ್ರೋ ನಗರಗಳಿಗಷ್ಟೇ ಸೀಮಿತವಾಗಿದ್ದ ಈ ಟ್ರೆಂಡ್, ಇದೀಗ ನಾಗ್ಪುರ, ಜೈಪುರ, ಚಂಡೀಗಢ, ಭುವನೇಶ್ವರ, ಗುವಾಹಟಿ ಮತ್ತು ವೈಜಾಗ್‌ನಂತಹ ಎರಡನೇ ಸ್ಥರದ ನಗರಗಳಿಗೂ ವ್ಯಾಪಿಸಿದೆ. ಮೆಟ್ರೋ ನಗರಗಳಿಗಿಂತ ಟಯರ್-II ನಗರಗಳಲ್ಲಿ ಪ್ರೋಟೀನ್ ಆರ್ಡರ್‌ಗಳು ಶೇ. 200 ರಷ್ಟು ಏರಿಕೆ ಕಂಡಿದ್ದು, ವೇಗವಾಗಿ ಬೆಳವಣಿಗೆ ಕಾಣುತ್ತಿವೆ.

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು ಪ್ರಕರಣ; ಗುತ್ತಿಗೆದಾರ ಕಂಪನಿ ವಿರುದ್ಧ ಎಫ್‌ಐಆರ್‌

ಬೌರಿಂಗ್ ಆಸ್ಪತ್ರೆ ದುರಂತ; ಗುತ್ತಿಗೆದಾರ ಕಂಪನಿ ವಿರುದ್ಧ ಎಫ್‌ಐಆರ್‌

ಬೌರಿಂಗ್ ಆಸ್ಪತ್ರೆ ನೂತನ ಕಟ್ಟಡ ನಿರ್ಮಾಣಕ್ಕಾಗಿ ಹಳೇ ಕಟ್ಟಡ ತೆರವುಗೊಳಿಸಲು ಗುತ್ತಿಗೆ ನೀಡಲಾಗಿತ್ತು. ಗುತ್ತಿಗೆ ವಹಿಸಲಾದ ಎಎಸ್‌ಆರ್ ಟ್ರೇಡರ್ಸ್ ಕಂಪನಿ ನಿರ್ಲಕ್ಷ್ಯ ವಹಿಸಿದ್ದು, ಕಟ್ಟಡ ನೆಲಸಮ ಮಾಡಿದ ತ್ಯಾಜ್ಯ ವಿಲೇವಾರಿ ಮಾಡದೆ ಅಲ್ಲಿ ಬಿಟ್ಟು ಹೋಗಿದ್ದು ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ.

Gold Price Today On 25th May 2026: ಗ್ರಾಹಕರಿಗೆ ತಟ್ಟಿದ ʼಮಂಡೆʼ ಬಿಸಿ; ಪೆಟ್ರೋಲ್‌, ಡೀಸೆಲ್‌ ಜತೆಗೆ ಚಿನ್ನದ ದರವೂ ಏರಿಕೆ

ಪೆಟ್ರೋಲ್‌, ಡೀಸೆಲ್‌ ಜತೆಗೆ ಚಿನ್ನದ ದರವೂ ಏರಿಕೆ

Gold Silver Price Today: ಸೋಮವಾರ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಬೆನ್ನಲ್ಲೇ ಚಿನ್ನದ ದರದಲ್ಲಿಯೂ ಹೆಚ್ಚಳ ಕಂಡು ಬಂದಿದ್ದು, ಗ್ರಾಹಕರಿಗೆ ಡಬಲ್‌ ಶಾಕ್‌ ಎದುರಾಗಿದೆ. ಸೋಮವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 30 ರುಪಾಯಿ ಏರಿಕೆಯಾಗಿದ್ದು, 14,610 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 32 ರುಪಾಯಿ ಅಧಿಕವಾಗಿದ್ದು, 15,938 ರುಪಾಯಿ ಇದೆ.

ಸೈಬರ್ ಕ್ರೈಮ್: ಬೆಂಗಳೂರಿನ 74 ವರ್ಷದ ಮಹಿಳೆಗೆ 24 ಕೋಟಿ ರೂ. ವಂಚನೆ

ಬೆಂಗಳೂರಿನ 74 ವರ್ಷದ ಮಹಿಳೆಗೆ 24 ಕೋಟಿ ರೂ. ವಂಚನೆ

Cyber Crime: ಕರ್ನಾಟಕ ರಾಜ್ಯ ಸೈಬರ್ ಕಮಾಂಡ್ ಘಟಕವು ಬೆಂಗಳೂರಿನಲ್ಲಿ ಒಂದು ಪ್ರಮುಖ ಡಿಜಿಟಲ್ ಅರೆಸ್ಟ್ ಸೈಬರ್ ವಂಚನೆ ಜಾಲವನ್ನು ಭೇದಿಸಿದೆ. ಕೇಂದ್ರ ತನಿಖಾ ಸಂಸ್ಥೆಗಳ ಹಿರಿಯ ಅಧಿಕಾರಿಗಳಂತೆ ನಟಿಸಿದ ವಂಚಕರು 74 ವರ್ಷದ ವೃದ್ಧೆಯೊಬ್ಬರಿಂದ ಸುಮಾರು 24 ಕೋಟಿ ರೂಪಾಯಿ ವಂಚಿಸಿದ್ದಾರೆ.

Haveri News: ಅಕ್ರಮ ಸಂಬಂಧ ಶಂಕೆ; ಹಾವೇರಿಯಲ್ಲಿ ಅಕ್ಕನ ಕತ್ತು ಸೀಳಿ ಭೀಕರವಾಗಿ ಕೊಲೆಗೈದ ತಮ್ಮ

ಹಾವೇರಿಯಲ್ಲಿ ಅಕ್ಕನ ಕತ್ತು ಸೀಳಿ ಭೀಕರವಾಗಿ ಕೊಂದ ತಮ್ಮ

Haveri Murder Case: ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಭೀಕರ ಹತ್ಯೆ ನಡೆದಿದೆ. ಪರ ಪುರುಷನ ಜತೆ ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಅಕ್ಕನನ್ನೇ ಸಹೋದರ ಕೊಲೆ ಮಾಡಿದ್ದಾನೆ. ಅಂಗನವಾಡಿ ಕೇಂದ್ರದಲ್ಲಿ ಆಯಾ ಕೆಲಸ ಮಾಡಿಕೊಂಡಿದ್ದ ಮಹಿಳೆಯನ್ನು ಸಹೋದರ ಮಚ್ಚಿನಿಂದ ಕೊಚ್ಚಿ ಕೊಂದಿದ್ದಾನೆ.

ಪ್ರಧಾನಿ ಮೋದಿ ಆಗಮನದ ವೇಳೆ ಭದ್ರತಾ ಲೋಪ: ಬೆಂಗಳೂರಿನ 6 ಪೊಲೀಸರು ಅಮಾನತು

ಭದ್ರತಾ ಲೋಪ: ಬೆಂಗಳೂರಿನ 6 ಪೊಲೀಸರು ಅಮಾನತು

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ಭದ್ರತಾ ಲೋಪ ಉಂಟಾಗಿರುವ ಹಿನ್ನೆಲೆಯಲ್ಲಿ 6 ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಮೇ 10ರಂದು ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದ ವೇಳೆ ಅವರು ತೆರಳುವ ಮಾರ್ಗದಲ್ಲಿ ಭದ್ರತಾ ತಪಾಸಣೆಯ ಸಮಯದಲ್ಲಿ ಎರಡು ಜೆಲಾಟಿನ್ ಕಡ್ಡಿಗಳು ಪತ್ತೆಯಾಗಿದ್ದವು.

CM Siddaramaiah's Delhi visit: ಇಂದು ಸಂಜೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ; ಹೈಕಮಾಂಡ್‌ ಬುಲಾವ್ ಬಗ್ಗೆ ಹೇಳಿದ್ದೇನು?

ಹೈಕಮಾಂಡ್‌ ಬುಲಾವ್; ಇಂದು ಸಂಜೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಎರಡೂ ಬಣಗಳ ನಾಯಕರ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಮುಂದಾಗಿದೆ ಎನ್ನಲಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಂಡ್ ಬುಲಾವ್ ನೀಡಿದೆ.

ಜೆಜೆಎಂ ಗುತ್ತಿಗೆದಾರರ ವಿರುದ್ಧ ಜನಾಕ್ರೋಶ

ಜೆಜೆಎಂ ಗುತ್ತಿಗೆದಾರರ ವಿರುದ್ಧ ಜನಾಕ್ರೋಶ

ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಮುನ್ನಚ್ಚರಿಕೆ ವಹಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಮುಂಜಾಗ್ರತಾ ಸಭೆಯಲ್ಲಿ ಸಾಕಷ್ಟು ಬಾರಿ ಸೂಚಿಸಿದರು ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ ಎಂದು ಸಾರ್ವಜನಿಕರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಸೌಲಭ್ಯ ವಂಚಿತ ಪದವಿ ಕಾಲೇಜು

ಸೌಲಭ್ಯ ವಂಚಿತ ಪದವಿ ಕಾಲೇಜು

ತಾಲೂಕಾ ಕೇಂದ್ರವಾಗಿರುವ ರಬಕವಿ-ಬನಹಟ್ಟಿಗೆ ಪದವಿ ಕಲಿಯುವ ವಿದ್ಯಾರ್ಥಿಗಳಿಗೆ ಸರಕಾರಿ ಪದವಿ ಕಾಲೇಜು ಸವಾಲಾಗಿ ಕಾಡುತ್ತಿದೆ. ಕಲೆ ಹಾಗೂ ವಾಣಿಜ್ಯ ವಿಭಾಗ ನಿರ್ವಹಣೆ ಯಲ್ಲಿರುವ ಇಲ್ಲಿನ ಕಾಲೇಜು ಪ್ರಸಕ್ತ ವರ್ಷದಿಂದ ಬಿಬಿಎ ಹಾಗೂ ಬಿಸಿಎ ವಿಭಾಗ ಪ್ರಾರಂಭ ಗೊಳ್ಳಲಿದೆ.

ತ್ಯಾಗದ ನೆಲದಲ್ಲಿ ನಿರಾಶ್ರಿತರ ಕಣ್ಣೀರಿಗೆ ಕೊನೆಯೆಂದು?

ತ್ಯಾಗದ ನೆಲದಲ್ಲಿ ನಿರಾಶ್ರಿತರ ಕಣ್ಣೀರಿಗೆ ಕೊನೆಯೆಂದು?

ದೇಶದ ರಕ್ಷಣೆ, ರಾಜ್ಯದ ಬೆಳಕು ಮತ್ತು ರಾಷ್ಟ್ರದ ಪ್ರಗತಿಯ ಹೆಸರಿನಲ್ಲಿ ಉತ್ತರ ಕನ್ನಡ ಜಿಲ್ಲೆ ನೀಡಿದ ತ್ಯಾಗ ಅಪ್ರತಿಮ. ಆದರೆ, ಈ ‘ಅಭಿವೃದ್ಧಿ’ಯ ಮಹಾಯಾಗಕ್ಕೆ ತಮ್ಮ ಸರ್ವಸ್ವವನ್ನೂ ಆಹುತಿ ನೀಡಿದ ಇಲ್ಲಿನ ಮೂಲ ನಿವಾಸಿಗಳು ಇಂದು ಸ್ವಂತ ನೆಲದಲ್ಲೇ ನಿರಾಶ್ರಿತರಾಗಿ, ಹಕ್ಕುಪತ್ರಗಳಿಗಾಗಿ ಬೀದಿಗಿಳಿದು ಹೋರಾಡುವಂತಾಗಿರುವುದು ಜಿಲ್ಲೆಯ ಅತ್ಯಂತ ಕಟು ವಾಸ್ತವ.

ಮಾರುಕಟ್ಟೆಯಲ್ಲಿ ಹಣ್ಣಿನ ರಾಜನಿಗಿಲ್ಲ ಬೆಲೆ

ಮಾರುಕಟ್ಟೆಯಲ್ಲಿ ಹಣ್ಣಿನ ರಾಜನಿಗಿಲ್ಲ ಬೆಲೆ

ನಗರದ ಎಪಿಎಂಸಿ ಹಾಗೂ ಹಣ್ಣು ಮಾರುಕಟ್ಟೆಗಳಲ್ಲಿ ಮೇ ಮೊದಲ ವಾರದಲ್ಲಿ ಪ್ರತಿ ಕ್ವಿಂಟಲ್‌ಗೆ ಸುಮಾರು 2200 ರು.ಕ್ಕಿಂತ ಹೆಚ್ಚು ದರ ಸಿಗುತ್ತಿದ್ದ ಮಾವು, ಇದೀಗ 1850 ರಿಂದ 1900ರು. ಮಟ್ಟಕ್ಕೆ ಕುಸಿದಿದೆ. ವಿಶೇಷವಾಗಿ ರಸಪುರಿ, ಬಾದಾಮಿ ಹಾಗೂ ತೋತಾಪುರಿ, ಸೇಂದೂರು, ಮಲ್ಲಿಕಾ, ಬೇಗಪಲ್ಲಿ ತಳಿಗಳಲ್ಲಿ ಬೆಲೆ ಇಳಿಕೆ ಹೆಚ್ಚು ಕಾಣಿಸಿಕೊಂಡಿದೆ.

GI Tag for Dry Grapes: ಒಣದ್ರಾಕ್ಷಿಗೂ ಜಿಐ ಟ್ಯಾಗ್ ದೊರಕುವ ದಿನಗಳು ದೂರವಿಲ್ಲ

ಒಣದ್ರಾಕ್ಷಿಗೂ ಜಿಐ ಟ್ಯಾಗ್ ದೊರಕುವ ದಿನಗಳು ದೂರವಿಲ್ಲ

ಜಿಲ್ಲೆಯ ಇಂಡಿ ಭಾಗದಲ್ಲಿ ಬೆಳೆಯುವ ಲಿಂಬೆಗೆ ಜಿಐ ಟ್ಯಾಗ್ ದೊರಕಿದೆ. ಇನ್ನೂ ಅನೇಕ ದೇಶಗಳಿಗೆ ರಫ್ತಾಗುವ ಒಣದ್ರಾಕ್ಷಿಗೂ ಜಿಐ ಟ್ಯಾಗ್ ದೊರಕುವ ದಿನಗಳು ದೂರವಿಲ್ಲ. ಉತ್ಕೃಷ್ಣ ಗುಣಮಟ್ಟಕ್ಕೆ ಹೆಸರಾದ ಒಣದ್ರಾಕ್ಷಿಗೆ ಜಿಐ ಟ್ಯಾಗ್ ದೊರಕಿಸುವ ನಿಟ್ಟಿನಲ್ಲಿ ಪ್ರಯತ್ನಗಳು ಶರವೇಗದಿಂದ ನಡೆಯುತ್ತಿದ್ದು, ಜಿಐ ಟ್ಯಾಗ್ ದೊರಕಿದರೆ ರೈತರ ಸಂತಸ ಮತ್ತಷ್ಟು ಹೆಚ್ಚಾಗಲಿದೆ.

ಸರಕಾರಿ ಶಾಲೆಗಳ ಬಲವರ್ಧನೆಗೆ ಬೇಕಿದೆ ಶಾಸಕರು ಸಚಿವರು ಸಂಸದರೆಂಬ ಜನಪ್ರತಿನಿಧಿಗಳ ಉದಾರ ನೆರವು

ಸರಕಾರಿ ಶಾಲೆಗಳ ಬಲವರ್ಧನೆಗೆ ಬೇಕಿದೆ ಜನಪ್ರತಿನಿಧಿಗಳ ಉದಾರ ನೆರವು

ಕಾಲ ಬದಲಾದಂತೆ ಶಿಕ್ಷಣ ವ್ಯವಸ್ಥೆಯಲ್ಲಿ ಕೂಡ ಸಾಕಷ್ಟು ಬದಲಾವಣೆಗಳಾಗಿವೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಪೈಪೋಟಿಯ ನಡುವೆ ಹಲವಾರು ಸರ್ಕಾರಿ ಶಾಲೆಗಳು ತಮ್ಮ ಶತಮಾನ ಕ್ಕೂ ಮೀರಿದ ಇತಿಹಾಸದ ಹಿರಿಮೆಯನ್ನು ಹೊತ್ತು ಸಾಗಿರುವುದು ಸಾಮಾನ್ಯ ಸಂಗತಿಯಲ್ಲ. ಅಂತಹ ಐತಿಹಾಸಿಕ  ಸಾಧನೆಗೆ ಗುರಿಯಾದ ಸರ್ಕಾರಿ ಶಾಲೆಗಳಿಗೆ ಗೌರವ ಸಲ್ಲಿಸಲು ಚಿಕ್ಕಬಳ್ಳಾ ಪುರ ಜಿಲ್ಲಾಡಳಿತ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ.

Anchor Jhanvi: ಬಿಗ್‌ಬಾಸ್‌ ಖ್ಯಾತಿಯ ಜಾಹ್ನವಿ ರಾಜಕೀಯಕ್ಕೆ ಎಂಟ್ರಿ; ಎಚ್‌ಡಿಕೆ ಸಮ್ಮುಖದಲ್ಲಿ ಜೆಡಿಎಸ್‌ ಸೇರ್ಪಡೆ

ನಿರೂಪಕಿ, ಬಿಗ್‌ಬಾಸ್‌ ಖ್ಯಾತಿಯ ಜಾಹ್ನವಿ ಜೆಡಿಎಸ್‌ ಸೇರ್ಪಡೆ

ನಟಿ ಹಾಗೂ ಟಿವಿ ನಿರೂಪಕಿ ಜಾಹ್ನವಿ ಅವರು ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಎಚ್‌.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಬೆಂಗಳೂರಿನ ಜೆ.ಪಿ. ಭವನದಲ್ಲಿ ಜೆಡಿಎಸ್ ಪಕ್ಷಕ್ಕೆ ಭಾನುವಾರ ಸೇರ್ಪಡೆಯಾಗಿದ್ದಾರೆ. ರಾಜ್ಯ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ರಶ್ಮಿ ರಾಮೇಗೌಡ ಅವರು ಪಕ್ಷದ ಧ್ವಜವನ್ನು ನೀಡಿ ಜಾಹ್ನವಿ ಅವರನ್ನು ಸ್ವಾಗತಿಸಿದರು.

Bhatkal Tragedy: ಭಟ್ಕಳ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ; ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ

ಭಟ್ಕಳ ದುರಂತ; ಮೃತರಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

PM Narendra Modi: ಭಟ್ಕಳ ತಾಲೂಕಿನ ತಟ್ಟಿಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ತೆರಳಿದ್ದ 14 ಮಂದಿ ನೀರಿನಲ್ಲಿ ಸಿಲುಕಿಕೊಂಡಿದ್ದರು. ಈ ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದು, ಒಬ್ಬ ವ್ಯಕ್ತಿ ಕಣ್ಮರೆಯಾಗಿದ್ದಾನೆ. ಆತನ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ. ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂತಾಪ ಸೂಚಿಸಿದ್ದಾರೆ.

Gauribidanur News: ಬಿಕೆಎಸ್, ನೂತನ ಪದಾಧಿಕಾರಿಗಳ ಆಯ್ಕೆ

Gauribidanur News: ಬಿಕೆಎಸ್, ನೂತನ ಪದಾಧಿಕಾರಿಗಳ ಆಯ್ಕೆ

ಭಾರತೀಯ ಕಿಸಾನ್ ಸಂಘದ ಮಂಜೇನಹಳ್ಳಿ ತಾಲೂಕಿನ ನೂತನ ಅಧ್ಯಕ್ಷರಾಗಿ ಕಾಡಚಿಕ್ಕನ ಹಳ್ಳಿ ನರಸಿಂಹಮೂರ್ತಿ ಅವರನ್ನು ಆಯ್ಕೆ ಮಾಡಲಾಯಿತು. ಭಾರತೀಯ ಕಿಸಾನ್ ಸಂಘದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ನಾರಾಯಣ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಮಿಣಕನಗುರ್ಕಿ ವೃತ್ತ ಕಚೇರಿಯಲ್ಲಿ ಏರ್ಪಡಿಸಲಾಗಿತ್ತು.

Chinthamani News: ಕೆಂಚಾರ್ಲಹಳ್ಳಿ ವ್ಯಾಪ್ತಿಯಲ್ಲಿ ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸ್ ದಾಳಿ: ಐವರ ವಶಕ್ಕೆ,ನಗದು ಮತ್ತು ಬೈಕ್‌ಗಳು ಜಪ್ತಿ

ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸ್ ದಾಳಿ

ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದೆಪಲ್ಲಿ ಗ್ರಾಮದ ಕೆರೆ ಅಂಗಳ ದಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಅಡ್ಡೆ ಯೊಂದರ ಮೇಲೆ ಪೊಲೀಸರು ಯಶಸ್ವಿ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಐದು ಮಂದಿ ಆರೋಪಿಗಳನ್ನು ಬಂಧಿಸ ಲಾಗಿದ್ದು, ನಗದು ಹಣ ಹಾಗೂ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

Loading...