ಪ್ರತಿಭಟನೆಗಾಗಿ ಬೆಂಗಳೂರಿಗೆ ಬಂದಿದ್ದ ರೈತ ಹೃದಯಾಘಾತದಿಂದ ಸಾವು
Heart attack: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಕುರಬರಹುಂಡಿ ಮೂಲದ ರೈತ ಮುಖಂಡರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಭೂಸ್ವಾಧೀನ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರೈತ ಸಂಘಟನೆಗಳು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿವೆ. ಈ ಹೋರಾಟಕ್ಕೆ ಆಗಮಿಸುತ್ತಿದ್ದಾಗ ರೈತ ಮೃತಪಟ್ಟಿದ್ದಾರೆ.