25 ಕಲಾವಿದರಿಗೆ ವಾರ್ಷಿಕ, 7 ಮಂದಿಗೆ ದತ್ತಿನಿಧಿ ಪ್ರಶಸ್ತಿ
ಕರ್ನಾಟಕ ನಾಟಕ ಅಕಾಡೆಮಿಯು 2026-27ನೇ ಸಾಲಿನ ಜೀವಮಾನ ಸಾಧನೆ ಗೌರವ ಪ್ರಶಸ್ತಿ, ವಾರ್ಷಿಕ ಪ್ರಶಸ್ತಿ ಹಾಗೂ ವಿವಿಧ ದತ್ತಿನಿಧಿ ಪುರಸ್ಕಾರಗಳನ್ನು ಗುರುವಾರ ಪ್ರಕಟಿ ಸಿದೆ. ರಂಗಭೂಮಿ ಕ್ಷೇತ್ರಕ್ಕೆ ಸಲ್ಲಿಸಿರುವ ದೀರ್ಘ ಕಾಲದ ಸೇವೆ ಗುರುತಿಸಿ ಹಿರಿಯ ನಟ ಡಾ.ಮುಖ್ಯ ಮಂತ್ರಿ ಚಂದ್ರು ಅವರಿಗೆ ಜೀವಮಾನ ಸಾಧನೆ ಗೌರವ ಪ್ರಶಸ್ತಿ ಘೋಷಿಸಲಾಗಿದೆ.