ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್ ಚೆಕ್ ಮಾಡಿ
Gold price today on 19th Sep 2025: 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 15ರೂ ಏರಿಕೆಯಾಗಿ , 10,205 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 16ರೂ. ಏರಿಕೆಯಾಗಿ 11,133 ರೂ ಆಗಿದೆ.
Thimarodi: ಅಕ್ರಮವಾಗಿ ಮನೆಯೊಳಗೆ ಎರಡು ತಲವಾರು ಮತ್ತು ಒಂದು ಬಂದೂಕು ಎಸ್‌ಐಟಿ ಶೋಧದ ವೇಳೆ ಪತ್ತೆಯಾದ ಬಗ್ಗೆ ಸೆ.16 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಮಾಸ್ಕ್ ಮ್ಯಾನ್ ಬುರುಡೆ ಚಿನ್ನಯ್ಯನ ಹೇಳಿಕೆ ಆಧಾರದಲ್ಲಿ ತಿಮರೋಡಿ ಮನೆಯನ್ನು ಪರಿಶೀಲಿಸಲಾಗಿತ್ತು.
ಸಮಾಜದ ಅಧ್ಯಕ್ಷರಾದ ಡಾ.ಸೋನಾಲಿ ಸರ್ನೋಬತ್ ಅವರು ಸಮಾಜದ ಪ್ರಗತಿ, ಸಾಧನೆಗಳು ಮತ್ತು ಭವಿಷ್ಯದ ದೃಷ್ಟಿಕೋನ ಕುರಿತು ಸವಿಸ್ತಾರ ವರದಿ ಮಂಡಿಸಿದರು. ಬ್ಯಾಲೆನ್ಸ್ ಶೀಟ್ ಅನ್ನು ನರಸಿಂಹ ಜೋಶಿ ಓದಿದರು. ಲಾಭ-ನಷ್ಟ ಪತ್ರಿಕೆ ಅನ್ನು ಅನುಷಾ ಜೋಶಿ ಮಂಡಿಸಿದರು. ಸಭೆಯ ಅಧಿಸೂಚನೆ ಅನ್ನು ದೀಪಾ ಪ್ರಭು ದೇಸಾಯಿ ಓದಿದರು.
CM Siddaramaiah: ಈಗಾಗಲೇ ನಿರ್ಮಾಣವಾಗಿರುವ ಕಟ್ಟಡಗಳಿಗೆ ಒಸಿ ಇಲ್ಲದಿದ್ದರೂ ವಿದ್ಯುತ್ ಸಂಪರ್ಕ ನೀಡಲು ಒಂದು ಬಾರಿಗೆ ಅನ್ವಯಿಸುವಂತೆ ನಿಯಮಗಳನ್ನು ಸಡಲಿಸುವ ಕುರಿತು ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಯಾವುದೇ ನಿರ್ಧಾರ ಮಾಡದೆ ವಿಷಯವನ್ನು ಮುಂದಿನ ಸಂಪುಟಕ್ಕೆ ಮುಂದೂಡಲಾಗಿದೆ.
CM Siddaramaiah: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗಾಗಿ ಹಿಂದುಳಿದ ವರ್ಗಗಳ ಆಯೋಗದಿಂದ ಸಿದ್ಧಪಡಿಸಲಾದ ಜಾತಿ ಪಟ್ಟಿಯಲ್ಲಿ ಹಿಂದೂ ಜಾತಿಗಳ ಹೆಸರಿನ ಮುಂದೆ ಕ್ರಿಶ್ಚಿಯನ್ ಪದ ಸೇರ್ಪಡೆ, 331 ಹೊಸ ಜಾತಿಗಳನ್ನು ಉಲ್ಲೇಖಿಸಿರುವ ಬಗ್ಗೆ ಹಲವು ಸಚಿವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಿಎಂ ಈ ಬಗ್ಗೆ ನಿರ್ಣಯ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ವಾಸ್ತುಶಿಲ್ಪ, ಶಿಲ್ಪಕಲೆ, ಲೋಹದ ಕೆಲಸ ಮತ್ತು ಮರಗೆಲಸದಂತಹ ಕರಕುಶಲ ಕಲೆಗಳಲ್ಲಿ ಇವರ ನೈಪುಣ್ಯವು ನಮ್ಮ ಸಂಸ್ಕೃತಿಯನ್ನು ಶ್ರೀಮಂತಗೊಳಿಸಿದೆ. ನಮ್ಮ ದೇವಾಲಯಗಳು, ಸ್ಮಾರಕಗಳು ಮತ್ತು ದೈನಂದಿನ ಜೀವನದಲ್ಲಿ ಬಳಸುವ ವಸ್ತುಗಳ ಹಿಂದಿನ ಸೌಂದರ್ಯ ಮತ್ತು ಶಕ್ತಿ ವಿಶ್ವಕರ್ಮ ಸಮುದಾಯದವರ ಕೈಚಳಕದ ಪರಿಣಾಮವಾಗಿದೆ
ಋಗ್ವೇದ ಹಾಗೂ ಪುರಾಣಗಳಲ್ಲಿ ವಿಶ್ವಕರ್ಮರನ್ನು ಸರ್ವಶಕ್ತಿಶಾಲಿ ಕರ್ತೃ ಹಾಗೂ ಶ್ರೇಷ್ಠ ವಾಸ್ತುಶಿಲ್ಪಿ ಯಾಗಿ ವರ್ಣಿಸಲಾಗಿದೆ. ಲಂಕಾ, ದ್ವಾರಕಾ, ಇಂದ್ರಪ್ರಸ್ಥದಂತಹ ಮಹಾನಗರಗಳನ್ನು ನಿರ್ಮಿಸಿದವರು ವಿಶ್ವಕರ್ಮ. ಮನೆ-ಮಂದಿರಗಳ ನಿರ್ಮಾಣದಿಂದ ಹಿಡಿದು ಪ್ರತಿಯೊಂದು ಕಲೆಯಲ್ಲೂ ವಿಶ್ವ ಕರ್ಮ ಸಮಾಜದ ಅಪ್ರತಿಮ ಕೊಡುಗೆಯಿದೆ. ಪಠ್ಯ-ಪುಸ್ತಕ ಓದದೆ, ಬೇರೆಯವರಿಂದ ತಂತ್ರಜ್ಞಾನ ಕಲಿಯದೆ ಕುಶಲಕರ್ಮಿಗಳಾಗಿರುವ ವಿಶ್ವಕರ್ಮ ಸಮಾಜ ಜಗತ್ತಿನಲ್ಲಿ ಹೊಸ ಶಕ್ತಿಯನ್ನೇ ಹುಟ್ಟು ಹಾಕಿದೆ.
ಕ್ಲಿಯರ್‌ಟ್ರಿಪ್ ಬಿಗ್ ಬಿಲಿಯನ್ ಡೇಯನ್ನು ಹಲವಾರು ಭಾರಿ ಆಫರ್ ಗಳೊಂದಿಗೆ ಆಚರಿಸುತ್ತಿದೆ. ಫ್ಲಾಶ್ ಸೇಲ್ ಗಳ ಸಮಯದಲ್ಲಿ, ದೇಶೀಯ ವಿಮಾನಗಳ ಟಿಕೆಟ್ ಗಳು ಕೇವಲ ₹999* ರಿಂದ ಪ್ರಾರಂಭವಾಗು ತ್ತವೆ ಮತ್ತು ಅಂತಾರಾಷ್ಟ್ರೀಯ ವಿಮಾನಗಳಿಗೆ 20% ರಿಯಾಯಿತಿ* ಲಭ್ಯವಿದೆ. ಜೊತೆಗೆ, ಕ್ಲಿಯರ್‌ಟ್ರಿಪ್ ತನ್ನ ಹೋಟೆಲ್ ವಿಭಾಗವನ್ನು 20,000ರಿಂದ 80,000+ ಹೋಟೆಲ್ ಗಳಿಗೆ ಗಣನೀಯವಾಗಿ ವಿಸ್ತರಿಸಿದೆ.
Govinda Karajola: ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಕಳೆದ ಎರಡೂವರೆ ವರ್ಷದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಜನ ಅವರಿಗೆ ಛೀಮಾರಿ ಹಾಕುತ್ತಿದ್ದಾರೆ. ಎಲ್ಲಿಯೂ ಅವರು ಓಡಾಡುವ ಪರಿಸ್ಥಿತಿಯಿಲ್ಲ. ಜನರ ಗಮನವನ್ನು ಬೇರೆಡೆ ಸೆಳೆಯುವ ಸಲುವಾಗಿ ಸಿದ್ದರಾಮಯ್ಯ ಜಾತಿಗಣತಿಯನ್ನು ಮಾಡಿಸಲು ತಯಾರಾಗಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.
ಸ್ಯಾಮ್‌ಸಂಗ್ 2024ರಲ್ಲಿ ವಿಶ್ವದ ಮೊದಲ ಎಐ ಫೋನ್ ಆದ ಗ್ಯಾಲಕ್ಸಿ ಎಸ್24 ಸರಣಿಯನ್ನು ಬಿಡುಗಡೆ ಮಾಡಿತು. ಇದು ಹೊಸ ಹೊಸ ಎಐ ಆವಿಷ್ಕಾರಗಳಿಗೆ ದಾರಿಯಾಯಿತು. ಆಗಿನಿಂದ, ಸ್ಯಾಮ್‌ಸಂಗ್ ತನ್ನ ಮೊಬೈಲ್ ಎಐ ವ್ಯವಸ್ಥೆಯನ್ನು ವಿಸ್ತರಿಸುತ್ತಾ ಬಂದಿದ್ದು, ಮಲ್ಟಿಮಾಡೆಲ್ ಇಂಟೆಲಿಜೆನ್ಸ್ ಅನ್ನು ಬಳಸಿಕೊಂಡು ತನ್ನ ವೇರೆಬಲ್ಸ್, ಟ್ಯಾಬ್ಲೆಟ್ ಗಳು, ಪಿಸಿಗಳು ಮತ್ತು ಇತರೆ ಸಾಧನಗಳಲ್ಲಿ ಎಐ ಅನ್ನು ಸಂಯೋಜಿಸಿದೆ.
ಕರ್ನಾಟಕದೆಲ್ಲೆಡೆ ದಸರಾ ಹಬ್ಬದ ಸಂಭ್ರಮ ಆವರಿಸಿರುವ ಈ ಸಂದರ್ಭದಲ್ಲಿ ಯಮಹಾ ಇಂಡಿಯಾ ಮೋಟಾರ್ ಸಂಸ್ಥೆಯು ಗ್ರಾಹಕರಿಗೆ ವಿಶೇಷ ಆಫರ್ ಗಳನ್ನು ಘೋಷಿಸಿದೆ. ಈ ಶುಭ ಸಂದರ್ಭದಲ್ಲಿ ಸಂಭ್ರಮ ಹೆಚ್ಚಿಸುವ ನಿಟ್ಟಿನಲ್ಲಿ ಯಮಹಾ ತನ್ನ ಜನಪ್ರಿಯ ಮೋಟಾರ್ ಸೈಕಲ್ ಗಳು ಮತ್ತು ಸ್ಕೂಟರ್ ಗಳ ಮೇಲೆ ಜಿಎಸ್‌ಟಿ ಲಾಭಗಳು, ವಿಮಾ ಆಫರ್ ಗಳು ಮತ್ತು ಕ್ಯಾಶ್ ಬ್ಯಾಕ್ ಒದಗಿಸುವ ಮೂಲಕ ಹಲವಾರು ವಿಶೇಷ ಆಫರ್ ಗಳನ್ನು ನೀಡುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ (ಸೆಪ್ಟೆಂಬರ್ 18) ಸಚಿವ ಸಂಪುಟ ಸಭೆ ನಡೆಯಿತು. ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಕ್ಕೆ ಸೇರಿದ ವ್ಯಕ್ತಿಗಳ ಅವಲಂಬಿತರಿಗೆ ಗ್ರೂಪ್ ಸಿ ಮತ್ತು ಗ್ರೂಪ್ ಡಿ ವೃಂದದ ಹುದ್ದೆಗಳಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಲು ಸಚಿವ ಸಂಪುಟ ಅನುಮತಿ ಸೇರಿದಂತೆ ಅನೇಕ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.
DK Shivakumar: ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವಂತಹ ಪರಿಶಿಷ್ಟರು, ಅಲ್ಪಸಂಖ್ಯಾತರು, ಸಾಮಾನ್ಯ ವರ್ಗದವರು ಸೇರಿದಂತೆ ಎಲ್ಲ ಜನ ಸಾಮಾನ್ಯರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಗಡಿ ಭಾಗದಲ್ಲಿರುವ ಬೇರೆ ರಾಜ್ಯದವರ ಹೆಸರನ್ನು ಸೇರಿಸಲಾಗಿತ್ತು. ಒಟ್ಟಾರೆ ಇದೆಲ್ಲವನ್ನೂ ಪೂರ್ವ ನಿಯೋಜಿತವಾಗಿ ಮಾಡಲಾಗಿತ್ತು. ಹೀಗಾಗಿ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಈ ವಿಚಾರವನ್ನು ಪ್ರಸ್ತಾಪಿಸಿದ್ದು, ಅವರು ಮಾಡಿರುವ ಆರೋಪಗಳೆಲ್ಲವೂ ನಿಜ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
CM Siddaramaiah: ಕಲಬುರಗಿಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ ನಡೆದಿದೆ ಎಂದು ಕಾಂಗ್ರೆಸ್ ನಾಯಕ, ಸಂಸದ ಆರೋಪಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಆರೋಪವನ್ನು ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು ಎನ್ನುವ ವಿರ ಇಲ್ಲಿದೆ.
Pralhad Joshi: ಮಾತೆತ್ತಿದರೆ ʼವೋಟ್ ಚೋರಿʼ ಆರೋಪ ಮಾಡುವ ರಾಹುಲ್ ಗಾಂಧಿ ಈಗ ಮಾಲೂರು ವಿಧಾನಸಭಾ ಕ್ಷೇತ್ರದ ಬಗ್ಗೆ ಏಕೆ ಮಾತನಾಡಲಿಲ್ಲ? ಅಲ್ಲಿ ಕಾಂಗ್ರೆಸ್ ಪಕ್ಷವೇ ಗೆದ್ದಿದೆ. ಇಲ್ಲಿ ನಡೆದ ಚುನಾವಣಾ ದುಷ್ಕೃತ್ಯದ ಕಾರಣ ಎರಡು ದಿನಗಳ ಹಿಂದಷ್ಟೇ ಹೈಕೋರ್ಟ್ ಶಾಸಕತ್ವ ಅನರ್ಹಗೊಳಿಸಿ, ಹೊಸ ಮತ ಎಣಿಕೆಗೆ ಆದೇಶಿಸಲಾಗಿದೆ. ಇನ್ನಾದರೂ ರಾಹುಲ್ ಗಾಂಧಿ ಬುದ್ಧಿ ಕಲಿಯಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಚಾಟಿ ಬೀಸಿದ್ದಾರೆ.
ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಜಾತಿಗಣತಿಗೆ ಸಚಿವರಿಂದಲೇ ವಿರೋಧ ವ್ಯಕ್ತವಾಗುತ್ತಿದೆ. ಗುರುವಾರ (ಸೆಪ್ಟೆಂಬರ್ 18) ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮುಂದೆಯೇ ಕೆಲವು ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. 331 ಹೊಸದಾಗಿ ಜಾತಿಗಳ ಸೇರ್ಪಡೆಗೆ ಆಕ್ಷೇಪ ವ್ಯಕ್ತಪಡಿಸಿದ ಕೆಲ ಸಚಿವರು, ಹೊಸ ಜಾತಿಗಳ ಸೇರ್ಪಡೆಯಿಂದ ಗೊಂದಲ ಸೃಷ್ಟಿಯಾಗಿದೆ ಎಂದಿದ್ದಾರೆ.