ಕರ್ನಾಟಕದಲ್ಲಿ ಮುರುಸು ಎಫೆಕ್ಟ್; ಹಲವು ಜಿಲ್ಲೆಗಳಲ್ಲಿ ಮಳೆ
ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡಿರುವ ‘ಮುರುಸು’ ಚಂಡಮಾರುತವು ಆಂಧ್ರಪ್ರದೇಶ ಕರಾವಳಿಯತ್ತ ಮುನ್ನಡೆಯುತ್ತಿದ್ದು, ಇದರ ಪ್ರಭಾವದಿಂದಾಗಿ ಇಂದು (ನವೆಂಬರ್ 3) ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.