ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

K M Suresh: ಆಗ್ನೇಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಂ. ಸುರೇಶ್ ಪರ ಅ.15ರಂದು ಶಕ್ತಿ ಪ್ರದರ್ಶನ

ಬಿಜೆಪಿ ಅಭ್ಯರ್ಥಿ ಕೆ.ಎಂ. ಸುರೇಶ್ ಪರ ಅ.15ರಂದು ಶಕ್ತಿ ಪ್ರದರ್ಶನ

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಂ. ಸುರೇಶ್ ಅವರಿಗೆ ಬೆಂಬಲ ನೀಡುವ ಉದ್ದೇಶದಿಂದ ನಡೆಯಲಿರುವ ಈ ಕಾರ್ಯಕ್ರಮ ರಾಜಕೀಯವಾಗಿ ಮಹತ್ವ ಪಡೆದು ಕೊಂಡಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿರುವುದರಿಂದ ಮೈತ್ರಿ ಪಕ್ಷಗಳ ಸಂಘಟಿತ ಪ್ರಚಾರಕ್ಕೆ ವೇದಿಕೆ ಸಿದ್ಧವಾಗಿದೆ.

ಮಹಾತ್ಮರಿಗೆ ಶುದ್ಧ ಮನಸ್ಸಿನಿಂದ ಸಮರ್ಪಿಸಿದ್ದು ಹತ್ತಾಗಿ ಮರಳುತ್ತದೆ: ರಾಘವೇಶ್ವರ ಭಾರತೀ ಶ್ರೀ

ಮಹಾತ್ಮರಿಗೆ ಸಮರ್ಪಿಸಿದ್ದು ಹತ್ತಾಗಿ ಮರಳುತ್ತದೆ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ಇಂದು ಮೋಕ್ಷ ಎಂದಾಗ ಜನರು ದೂರ ಹೋಗುತ್ತಾರೆ. ನಾನು ಈ ಜಗತ್ತಿನಲ್ಲಿ ಅನುಭವಿಸುವಂತದ್ದು ಹಲವಿದೆ, ಜೀವನದ ಸಂಧ್ಯಾಕಾಲದಲ್ಲಿ ಮೋಕ್ಷದ ಬಗ್ಗೆ ಅಲೋಚಿಸೋಣ ಎಂಬ ಭಾವವನ್ನು ಕಾಣುತ್ತೇವೆ. ಆದರೆ ಆ ಭಾವ ಸರಿಯಲ್ಲ. ರಾಜರಾಜೇಶ್ವರಿಯನ್ನು ಆಶ್ರಯಿಸಿದರೆ ಆಕೆ ಇಹದಲ್ಲಿ ಭೋಗವನ್ನೂ, ಪರದಲ್ಲಿ ಮೋಕ್ಷವನ್ನೂ ಅನುಗ್ರಹಿಸುತ್ತಾಳೆ ಎಂದು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ, 'ಜನರ ಯೋಜನೆ' ಜಾರಿಗೆ ಮಾರ್ಗಸೂಚಿ: ಸಿಎಂ

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ

CM DK Shivakumar: 5ನೇ ರಾಜ್ಯ ಹಣಕಾಸು ಆಯೋಗದ ವರದಿಯಂತೆ ಗ್ರಾಮ ಪಂಚಾಯಿತಿಗಳಿಗೆ ಒಟ್ಟು ರೂ. 1261 ಕೋಟಿ, ತಾಲೂಕು ಪಂಚಾಯಿತಿಗಳಿಗೆ ಒಟ್ಟು ರೂ. 557 ಕೋಟಿ ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಒಟ್ಟು ರೂ. 183 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Sapthak Bengaluru: ಅ.17ರಂದು ಬೆಂಗಳೂರಿನಲ್ಲಿ ಸಪ್ತಕ 20ನೇ ವಾರ್ಷಿಕೋತ್ಸವ, ಜಿ.ಎಸ್.ಹೆಗಡೆ ಅವರ ಅಮೃತ ಮಹೋತ್ಸವ

ಅ.17ರಂದು ಸಪ್ತಕ 20ನೇ ವಾರ್ಷಿಕೋತ್ಸವ, ಜಿ.ಎಸ್.ಹೆಗಡೆ ಅಮೃತ ಮಹೋತ್ಸವ

ಸಪ್ತಕ ಸಂಸ್ಥೆಯ ಸಂಸ್ಥಾಪಕ ಜಿ.ಎಸ್.ಹೆಗಡೆ ಅವರು ಸಂಗೀತ ಕ್ಷೇತ್ರದಲ್ಲಿ ಐದು ದಶಕಗಳಿಂದ ಸೇವೆ ಸಲ್ಲಿಸುತ್ತಾ, ಸಂಗೀತ ಕಾರ್ಯಕ್ರಮಗಳನ್ನು ಸಂಘಟಿಸುತ್ತಾ ಬಂದಿದ್ದಾರೆ. ಅವರಿಗೆ ಗೌರವ ಸಲ್ಲಿಸಲು ಅಮೃತ ಮಹೋತ್ಸವ ಆಯೋಜಿಸಲಾಗಿದೆ. ಸಪ್ತಕ ಸಂಸ್ಥೆಯ 20ನೇ ವಾರ್ಷಿಕೋತ್ಸವವು ಅ. 17ರಂದು ಬೆಂಗಳೂರಿನ ವೈಯಾಲಿಕಾವಲ್‌ನ ಚೌಡಯ್ಯ ಸ್ಮಾರಕ ಭವನದಲ್ಲಿ ನಡೆಯಲಿದೆ.

ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಪ್ರಶ್ನಿಸಿದ್ದಕ್ಕೆ ಟಾರ್ಗೆಟ್; ನಮ್ಮವರಿಗೆ ಕಿರುಕುಳ ಕೊಟ್ರೆ ಕೈಕಟ್ಟಿ ಕೂರಲ್ಲ ಎಂದು ಎಚ್‌ಡಿಕೆ ಕಿಡಿ

ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಪ್ರಶ್ನಿಸಿದ್ದಕ್ಕೆ ಟಾರ್ಗೆಟ್: ಎಚ್‌ಡಿಕೆ

ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಅವರ ವಿರುದ್ಧ ಸ್ಟಿಂಗ್ ಮಾಡಿ, ದೃಶ್ಯಗಳನ್ನು ಚಿತ್ರೀಕರಿಸಿ ಅವರ ಚಾರಿತ್ರ್ಯಹರಣಕ್ಕೆ ಕಾರಣನಾದ ನೀಚನನ್ನು ಬಿಟ್ಟು, ಆ ನೀಚತನವನ್ನು ಪ್ರಶ್ನಿಸಿದ ನನ್ನನ್ನು ನೇರವಾಗಿ ಎದುರಿಸಲಾಗದೆ ನನ್ನ ಹುಡುಗರ ಬೆನ್ನತ್ತಿದ್ದೀರಿ ಎಂದು ಎಂದು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

ಮೂಡಲಪಾಳ್ಯದ ಚಂದ್ರಮ್ಮನವರ ಗೊಂಬೆ ಮನೆಯಲ್ಲಿ 9 ದಿನಗಳ ಕಾಲ ನವರಾತ್ರಿ ಹಬ್ಬ ಆಚರಣೆ

ಗೊಂಬೆ ಮನೆಯಲ್ಲಿ 9 ದಿನಗಳ ಕಾಲ ನವರಾತ್ರಿ ಹಬ್ಬ ಆಚರಣೆ

ಬಟ್ಟೆ, ಹತ್ತಿ, ಕಂಬಿಗಳು, ಫೈಬರ್, ಮಣ್ಣು ಹೀಗೆ ಹಲವು ವಿಧ ವಿಧವಾದ ಕಚ್ಚಾವಸ್ತುಗಳಿಂದ ಮಾಡಿದ ಗೊಂಬೆಗಳನ್ನು ಚಂದ್ರಮ್ಮ ಅವರು ಪ್ರತಿ ವರ್ಷವೂ ತಾವೇ ತಯಾರಿಸಿ ನವರಾತ್ರಿ ಹಬ್ಬವನ್ನು ಆಚರಿಸುತ್ತಾ ಬಂದಿದ್ದಾರೆ. ಸಾವಿರಾರು ಗೊಂಬೆ ಪ್ರಿಯರು ಪ್ರತಿನಿತ್ಯ ತಂಡೋ ಪತಂಡವಾಗಿ ಆಗಮಿಸಿ ಗೊಂಬೆಗಳನ್ನು ವೀಕ್ಷಿಸಿ ಸಂಭ್ರಮಿಸುತ್ತಿದ್ದಾರೆ.

ಕೈದಿಗಳ ಉತ್ಪನ್ನಗಳಿಗೆ ಆಕರ್ಷಕ ಪ್ಯಾಕೇಜಿಂಗ್‌, ಮಾರುಕಟ್ಟೆ ವಿಸ್ತರಣೆಗೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

ಕೈದಿಗಳ ಉತ್ಪನ್ನಗಳಿಗೆ ಆಕರ್ಷಕ ಪ್ಯಾಕೇಜಿಂಗ್‌, ಮಾರುಕಟ್ಟೆ ವಿಸ್ತರಣೆ

Priyank Kharge: ಕೈದಿಗಳಿಂದ ತಯಾರಿಸಲಾಗುತ್ತಿರುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವುದು, ಅವುಗಳ ಮಾರಾಟವನ್ನು ಹೆಚ್ಚಿಸುವುದು ಹಾಗೂ ಈ ಮೂಲಕ ಕಾರಾಗೃಹ ಅಭಿವೃದ್ಧಿ ಮಂಡಳಿಯನ್ನು ಸ್ವಾವಲಂಬಿಯಾಗಿ ಕಾರ್ಯನಿರ್ವಹಿಸುವಂತೆ ಮಾಡಲು ಅಗತ್ಯ ಕಾರ್ಯಕ್ರಮಗಳನ್ನು ರೂಪಿಸುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Chikkaballapur News: ಆತ್ಮವಿಶ್ವಾಸ, ಸಕಾರಾತ್ಮಕ ಚಿಂತನೆ ಬೆಳೆಸಿಕೊಳ್ಳಿ; ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಿ

ಮಾನಸಿಕ ಸಮಸ್ಯೆಗಳನ್ನು ಮುಚ್ಚಿಡದೆ ಚಿಕಿತ್ಸೆ ಪಡೆಯಿರಿ

ಮಾನಸಿಕ ಆರೋಗ್ಯದ ಸಮಸ್ಯೆಗಳನ್ನು ಮುಚ್ಚಿಡದೆ ಕುಟುಂಬದ ಸದಸ್ಯರು, ಆತ್ಮೀಯರು ಹಾಗೂ ವೈದ್ಯರೊಂದಿಗೆ ಹಂಚಿಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಜನರಲ್ಲಿ ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸಬೇಕು. ತೀವ್ರ ಮಾನಸಿಕ ಒತ್ತಡ ಅಥವಾ ತುರ್ತು ಪರಿಸ್ಥಿತಿ ಎದುರಾದಾಗ ಸಮೀಪದ ಆರೋಗ್ಯ ಕೇಂದ್ರ ಅಥವಾ ಆಸ್ಪತ್ರೆಗೆ ಭೇಟಿ ನೀಡಿ ನೆರವು ಪಡೆಯಬೇಕು

Bellary News: ಕೌಟುಂಬಿಕ ಕಲಹ; ಬಳ್ಳಾರಿಯಲ್ಲಿ ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ

ಬಳ್ಳಾರಿಯಲ್ಲಿ ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ

ಕೌಟುಂಬಿಕ ಕಲಹದಿಂದ ನೊಂದು ಇಬ್ಬರು ಕಂದಮಗಳ ಜತೆ ಮಹಿಳೆಯು ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿಯ ಮಿಲ್ಲರ್‌ಪೇಟೆಯಲ್ಲಿ ನಡೆದಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಶವವನ್ನು ಹೊರ ತೆಗೆದಿದ್ದು, ಇಬ್ಬರು ಮಕ್ಕಳಿಗಾಗಿ ಶೋಧ ಮುಂದುವರಿಸಿದ್ದಾರೆ.

ಸುರಪುರದಲ್ಲಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಜೆಇಗಳು

ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಜೆಇಗಳು

ದೂರುದಾರರಿಗೆ ಸಂಬಂಧಿಸಿದ ಕಾಮಗಾರಿಗೆ ಸಂಬಂಧಿಸಿದ ಕೆಲಸದ ಪ್ರಕ್ರಿಯೆ ಪೂರ್ಣಗೊಳಿಸಲು ಎಇಗಳು, 9 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, 3 ಸಾವಿರ ರೂಪಾಯಿ ಸ್ವೀಕರಿಸಿದ ಆರೋಪ ಕೇಳಿಬಂದಿದೆ. ಹೀಗಾಗಿ ಲಂಚ ಸ್ವೀಕರಿಸುವ ವೇಳೆ ಎಇಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.

Factory caught fire: ಮಸ್ತೇನಹಳ್ಳಿಯ ಗರುಡ ಮಾರ್ಟ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ರೂ. ನಷ್ಟ

ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ರೂ. ನಷ್ಟ

ತಾಲೂಕಿನ ಕೈವಾರ ಹೋಬಳಿಯ ಮಸ್ತೇನಹಳ್ಳಿ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿರುವ ಗರುಡ ಮಾರ್ಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದ ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.

Gauribidanur News: ಆಡಂಬರದ ಮದುವೆಗಳಿಗೆ ಕಡಿವಾಣ ಹಾಕಲು ಕುವೆಂಪು ಅವರ ಮಂತ್ರ ಮಾಂಗಲ್ಯ ಮಾದರಿ: ಡಾ. ರಮೇಶ್ ಚಂದ್ರ ದತ್ತ

ಆಡಂಬರದ ಮದುವೆಗಳಿಗೆ ಕಡಿವಾಣ ಹಾಕಲು ಮಂತ್ರ ಮಾಂಗಲ್ಯ ಮಾದರಿ

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ (ಐಕ್ಯೂಎಸಿ) ಸಂಯುಕ್ತ ಆಶ್ರಯದಲ್ಲಿ ಎ.ವಿ. ಸಭಾಂಗಣದಲ್ಲಿ ಆಯೋಜಿ ಸಿದ್ದ ‘ಕುವೆಂಪು ಅವರ ಮಂತ್ರ ಮಾಂಗಲ್ಯ’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

Vijayanagara News: ಹೊಸಪೇಟೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ

ಹೊಸಪೇಟೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ

Vijayanagara News: ಹೊಸಪೇಟೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎನ್. ಸುಬ್ರಹ್ಮಣ್ಯ ಹಾಗೂ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಶಾಂತ ನಾಗಲಾಪುರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಹೊಸಪೇಟೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

ಹೊಸಪೇಟೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜ್ಯೋತಿ ರಥಯಾತ್ರೆಗೆ ಸ್ವಾಗತ

Vijayanagara News: ಐತಿಹಾಸಿಕ ಕಿತ್ತೂರು ಉತ್ಸವದ ನಿಮಿತ್ತ ನಾಡಿನ ಹೆಮ್ಮೆಯ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಜ್ಯೋತಿ ರಥಯಾತ್ರೆ ಬುಧವಾರ ಹೊಸಪೇಟೆ ನಗರಕ್ಕೆ ಆಗಮಿಸಿದ ವೇಳೆ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಜ್ಯೋತಿ ರಥಯಾತ್ರೆಗೆ ಭವ್ಯ ಸ್ವಾಗತ ಕೋರಿ, ಬಳಿಕ ವಿಧ್ಯುಕ್ತವಾಗಿ ಬೀಳ್ಕೊಟ್ಟರು.

Chikkaballapur News: ಕೃಷಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಇಲಾಖೆಗಳ ಸಮನ್ವಯ ಅಗತ್ಯ

ಆತ್ಮ ಯೋಜನೆಯ ಜಿಲ್ಲಾ ಆಡಳಿತ ಮಂಡಳಿ ಸಮಿತಿ ಸಭೆ

ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಸಭಾಂಗಣದ ಡಾ. ಹೆಚ್. ನರಸಿಂಹಯ್ಯ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ 2026-27ನೇ ಸಾಲಿನ ಆತ್ಮ (ATMA) ಯೋಜನೆಯ ಜಿಲ್ಲಾ ಆಡಳಿತ ಮಂಡಳಿ ಸಮಿತಿ ಸಭೆ ನಡೆಯಿತು.

Manchenahalli News: ಅರ್ಹರಿಗೆ ಮನೆ ಮಂಜೂರು, ಸರ್ಕಾರಿ ಕಚೇರಿಗಳಲ್ಲಿ ರ‍್ಯಾಂಪ್, ಶೇ. 5ರ ಅನುದಾನ ಸದ್ಬಳಕೆಗೆ ಆಗ್ರಹ

ಮಂಚೇನಹಳ್ಳಿಯಲ್ಲಿ ಮೊದಲ ಬಾರಿಗೆ ವಿಕಲಚೇತನರ ಕುಂದುಕೊರತೆ ಸಭೆ

ತಾಲೂಕಿನ ವಿಕಲಚೇತನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು ಹಾಗೂ ಸಾರ್ವ ಜನಿಕ ಸ್ಥಳಗಳಲ್ಲಿ ಅಡೆತಡೆರಹಿತ ಸಂಚಾರಕ್ಕೆ ಅವಕಾಶ ಕಲ್ಪಿಸುವ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು. ವಿವಿಧ ಬೇಡಿಕೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ಆದ್ಯತೆಯ ಮೇರೆಗೆ ಪರಿಹಾರ ಒದಗಿಸುವಂತೆ ಮನವಿ ಮಾಡಲಾಯಿತು.

KSRTC Bus: ಸರ್ಕಾರಿ ಬಸ್‌ಗಳಿಗೆ ADAS ರಕ್ಷೆ; ಅಪಘಾತ ತಡೆಗೆ ಹೈಟೆಕ್ ಸುರಕ್ಷತಾ ತಂತ್ರಜ್ಞಾನ ಅಳವಡಿಕೆ

ಸರ್ಕಾರಿ ಬಸ್‌ಗಳಿಗೆ ಹೈಟೆಕ್‌ ರಕ್ಷೆ; ಅಪಘಾತ ತಪ್ಪಿಸಲು ADAS ತಂತ್ರಜ್ಞಾನ

ADAS technology in KSRTC buses: ಸುಧಾರಿತ ಚಾಲಕ ಸಹಾಯ ವ್ಯವಸ್ಥೆಯು (ADAS)ಆಧುನಿಕ ವಾಹನಗಳಲ್ಲಿ ಬಳಕೆಯಾಗುವ ಒಂದು ಹೈಟೆಕ್ ಸುರಕ್ಷತಾ ತಂತ್ರಜ್ಞಾನವಾಗಿದೆ. ಇದು ರಸ್ತೆಯಲ್ಲಿ ಚಾಲನೆ ಮಾಡುವಾಗ ಚಾಲಕನಿಗೆ ಸಹಾಯ ಮಾಡಲು ಮತ್ತು ಅಪಘಾತಗಳನ್ನು ತಡೆಯಲು ಸಹಾಯವಾಗುತ್ತದೆ.

MLA S R Srinivas: ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಶಾಸಕ ಎಸ್.ಆರ್. ಶ್ರೀನಿವಾಸ್

ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ

ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್ ಯುವಕರಾಗಿದ್ದು, ಉತ್ತಮ ಸಂಘಟನಾ ಸಾಮರ್ಥ್ಯ ಹೊಂದಿದ್ದಾರೆ. ಆಗ್ನೇಯ ಪದವೀಧರ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಶಾಸಕರು ತಮ್ಮ ತಮ್ಮ ತಾಲೂಕುಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದು, ಅಭ್ಯರ್ಥಿಯ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಈ ಬಾರಿಯ ಜಂಬೂಸವಾರಿಯಲ್ಲಿ ಅಂಬಾರಿ ಹೊರಲು ಪ್ರಶಾಂತ ಆನೆ ಆಯ್ಕೆ; ಮಹೇಂದ್ರನಿಗೆ ಕೈ ತಪ್ಪಿದ ಚಾನ್ಸ್‌

ಈ ಬಾರಿ ಜಂಬೂಸವಾರಿಯಲ್ಲಿ ಅಂಬಾರಿ ಹೊರಲು ಪ್ರಶಾಂತ ಆನೆ ಆಯ್ಕೆ

ವಿಶ್ವವಿಖ್ಯಾತ ಮೈಸೂರು ದಸರಾದ ಜಂಬೂಸವಾರಿಯಲ್ಲಿ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಹೊರಲು ದುಬಾರೆ ಶಿಬಿರದ 'ಪ್ರಶಾಂತ' ಆನೆಯನ್ನು ಇಂದು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ. ಈ ಕುರಿತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಸಿದ್ದರಾಮಯ್ಯ ವಿರುದ್ಧದ ವಿಡಿಯೊ ಹಂಚಿಕೆ; ಇಬ್ಬರು ಶಂಕಿತರು ಸಿಸಿಬಿ ವಶಕ್ಕೆ

ಸಿದ್ದರಾಮಯ್ಯ ವಿರುದ್ಧದ ವಿಡಿಯೊ ಹಂಚಿಕೆ; ಇಬ್ಬರು ಶಂಕಿತರು ಸಿಸಿಬಿ ವಶಕ್ಕೆ

Karnataka sting operation: ಸ್ಟಿಂಗ್ ಆಪರೇಷನ್‌ ವಿಡಿಯೊ ವದಂತಿ ಬೆನ್ನಲ್ಲೇ ನ್ಯಾಯಾಲಯದ ಮೊರೆಹೋಗಿ ತಮ್ಮ ವಿರುದ್ಧ ಯಾವುದೇ ಆಕ್ಷೇಪಾರ್ಹ ವಿಡಿಯೊ ಪ್ರಸಾರ ಮಾಡದಂತೆ ಸಿದ್ದರಾಮಯ್ಯ ಪ್ರತಿಬಂಧಕಾಜ್ಞೆ ತಂದಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಿಸಿಬಿ ಪೊಲೀಸರು, ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ದೇವರಾಯನದುರ್ಗದಲ್ಲಿ ಕಾಡು ಮನುಷ್ಯರು ಕಾಣಿಸಿಕೊಂಡದ್ದು ನಿಜವೇ?; ವೈರಲ್ ವಿಡಿಯೊ ಬಗ್ಗೆ ಪೊಲೀಸರು ಹೇಳಿದ್ದೇನು?

ದೇವರಾಯನದುರ್ಗದಲ್ಲಿ ಕಾಡು ಮನುಷ್ಯರು ಪ್ರತ್ಯಕ್ಷ? ಪೊಲೀಸರು ಹೇಳಿದ್ದೇನು?

​Tumkur News: ತುಮಕೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ದೇವರಾಯನದುರ್ಗದಲ್ಲಿ ಇಬ್ಬರು ಕಾಡು ಮನುಷ್ಯರು ಕಾಣಿಸಿಕೊಂಡಿದ್ದಾರೆ ಎಂದು ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಈ ಬಗ್ಗೆ ತುಮಕೂರು ಜಿಲ್ಲಾ ಪೊಲೀಸ್‌ ಇಲಾಖೆ ಸ್ಪಷ್ಟನೆ ನೀಡಿದೆ.

ಬರಗಾಲದ ತೀವ್ರತೆ ಅರ್ಥ ಮಾಡಿಕೊಳ್ಳಲು ಕರ್ನಾಟಕಕ್ಕೆ ಭೇಟಿ ನೀಡಿ, ರೈತರಿಗೆ ಹೆಚ್ಚಿನ ಪರಿಹಾರ ಕೊಡಿಸಿ: ರಾಹುಲ್‌ ಗಾಂಧಿಗೆ ಆರ್‌.ಅಶೋಕ್‌ ಆಗ್ರಹ

ತೀವ್ರ ಬರ; ರಾಜ್ಯಕ್ಕೆ ಭೇಟಿ ನೀಡಲು ರಾಹುಲ್‌ ಗಾಂಧಿಗೆ ಅಶೋಕ್‌ ಆಗ್ರಹ

R Ashok: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿ ನಿಮ್ಮ ಸ್ಥಾನವನ್ನು ಬಳಸಿಕೊಂಡು, ಕರ್ನಾಟಕ ಸರ್ಕಾರವು ತನ್ನ ಜವಾಬ್ದಾರಿಯನ್ನು ಒಪ್ಪಿಕೊಳ್ಳುವಂತೆ, ತನ್ನ ವೈಫಲ್ಯಗಳನ್ನು ಸರಿಪಡಿಸಿಕೊಳ್ಳುವಂತೆ ಮತ್ತು ಭೀಕರ ಬರದಿಂದ ಬಾಧಿತರಾಗಿರುವ ಪ್ರತಿ ರೈತನಿಗೂ ಸಮರ್ಪಕ ಹಾಗೂ ಸಕಾಲಿಕ ಪರಿಹಾರ ಒದಗಿಸುವಂತೆ ನೋಡಿಕೊಳ್ಳಬೇಕು ಎಂದು ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರಿಗೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಪತ್ರದಲ್ಲಿ ಆಗ್ರಹಿಸಿದ್ದಾರೆ.

'ಬಾಗಿದ ಬೆನ್ನಿ'ನೊಂದಿಗೆ 20 ವರ್ಷಗಳು: 60 ವರ್ಷದ ರೋಗಿಯ 70-ಡಿಗ್ರಿ ಬೆನ್ನುಹುರಿ ವಕ್ರತೆಗೆ ಯಶಸ್ವಿ ಶಸ್ತ್ರಚಿಕಿತ್ಸೆ

ರೋಗಿಯ 70-ಡಿಗ್ರಿ ಬೆನ್ನುಹುರಿ ವಕ್ರತೆಗೆ ಯಶಸ್ವಿ ಶಸ್ತ್ರಚಿಕಿತ್ಸೆ

ರೋಗಿಯು 'ಆಂಕೈಲೋಸಿಂಗ್ ಸ್ಪಾಂಡಿಲೈಟಿಸ್' ಎಂಬ ಸಮಸ್ಯೆಯಿಂದ ಬಳಲುತ್ತಿದ್ದರು. ಇದು ಬೆನ್ನುಹುರಿಯು ಕ್ರಮೇಣವಾಗಿ ಬಿಗಿಯಾಗಿ, ತನ್ನ ನಮ್ಯತೆಯನ್ನು ಕಳೆದುಕೊಳ್ಳುವಂತೆ ಮಾಡುವ ಸ್ಥಿತಿಯಾಗಿದೆ. ಹಿಂದೆ ಒಮ್ಮೆ ಕೆಳಗೆ ಬಿದ್ದಿದ್ದರಿಂದ ಅವರ ಬೆನ್ನುಹುರಿಯ ಮೇಲ್ಭಾಗ ದಲ್ಲಿ ಮುರಿತವೂ ಉಂಟಾಗಿತ್ತು, ಅದಕ್ಕೆ ಶಸ್ತ್ರಚಿಕಿತ್ಸೆಯಿಲ್ಲದೆ ಚಿಕಿತ್ಸೆ ನೀಡಲಾಗಿತ್ತು.

Hospet News: ಶ್ರೀವರದೇಶದಾಸರ ಮಧ್ಯಾರಾಧನೆ ಪ್ರಯುಕ್ತ ದಾಸ ಸಾಹಿತ್ಯ ಕಾರ್ಯಕ್ರಮ

ಶ್ರೀವರದೇಶದಾಸರ ಮಧ್ಯಾರಾಧನೆ ಪ್ರಯುಕ್ತ ದಾಸ ಸಾಹಿತ್ಯ ಕಾರ್ಯಕ್ರಮ

ಪರಮಪೂಜ್ಯ ಮಂತ್ರಾಲಯ ಮಠಾಧೀಶರಾದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆಜ್ಞಾನುಸಾರ, ಮಂತ್ರಾಲಯ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ವತಿಯಿಂದ ಶ್ರೀಗುರುಜಗನ್ನಾಥದಾಸರ ಪ್ರಿಯ ಶಿಷ್ಯರಾದ ಶ್ರೀವರದೇಶದಾಸರ ಆರಾಧನೆ ಅಂಗವಾಗಿ ನಗರದ ಶ್ರೀರಾಘವೇಂದ್ರ ಸ್ವಾಮಿ ಮಠ( ಹಳೆರಾಯರ ಮಠ)ದಲ್ಲಿ ದಸ ಸಾಹಿತ್ಯ ಕಾರ್ಯಕ್ರಮ ನಡೆಯಿತು.

Loading...