ಹಾಸಿಗೆ, ದಿಂಬು ನೀಡಿಲ್ಲ; ಕೋರ್ಟ್‌ಗೆ ದರ್ಶನ್ ಪರ ವಕೀಲರಿಂದ ಮತ್ತೆ ಅರ್ಜಿ
Actor Darshan: ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಕ್ಕೆ ಮಾಡಲು ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ಇತ್ತೀಚೆಗೆ ನಿರಾಕರಿಸಿತ್ತು. ಅಲ್ಲದೇ ನಟನಿಗೆ ಹಾಸಿಗೆ, ದಿಂಬು ನೀಡಲು ಅನುಮತಿ ನೀಡಿತ್ತು. ಆದರೆ, ಕೋರ್ಟ್ ಆದೇಶ ಮಾಡಿದರೂ ಯಾವುದೇ ಸೌಕರ್ಯ ನೀಡಿಲ್ಲ ಎಂದು ಇದೀಗ ದರ್ಶನ್ ಪರ ವಕೀಲರು ಕೋರ್ಟ್‌ಗೆ ಮತ್ತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.