ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ, ಎನ್‌ಐಎ ತನಿಖೆಗೆ ಒತ್ತಾಯ
ಹಿಂದೂಗಳ ಅಸ್ಮಿತೆ, ನಂಬಿಕೆ ಹಾಗೂ ಭಾವನೆಗಳಿಗೆ ಘಾಸಿ ಮಾಡುತ್ತಿರುವ ಧರ್ಮ ದ್ರೋಹಿಗಳಿಗೆ, ಹಿಂದೂ ವಿರೋಧಿಗಳಿಗೆ ಕಠಿಣ ಎಚ್ಚರಿಕೆ ನೀಡುವ ಜತೆಗೆ ಧಾರ್ಮಿಕ ಕ್ಷೇತ್ರಗಳ ರಕ್ಷಣೆಗೆ ಬದ್ಧತೆಯನ್ನು ತೋರುವುದು ಈ ಅಭಿಯಾನದ ಉದ್ದೇಶ. ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದ ಪಕ್ಷದ 1 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಧರ್ಮಸ್ಥಳ ಚಲೋದಲ್ಲಿ ಭಾಗವಹಿಸಲಿದ್ದಾರೆ.