ಐವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ನೋಟಿಸ್
BJP Karnataka: ಸಾರ್ವಜನಿಕ ವೇದಿಕೆಗಳಲ್ಲಿ ಪಕ್ಷದ ಅಂತರಿಕ ವಿಚಾರಗಳನ್ನು ಬಹಿರಂಗವಾಗಿ ಮತ್ತು ಅನಗತ್ಯವಾಗಿ ಹೇಳಿಕೆ ನೀಡಿದ್ದೀರಿ. ಈ ನಿಟ್ಟಿನಲ್ಲಿ ನಿಮ್ಮ ವಿರುದ್ಧ ಯಾಕೆ ಕ್ರಮಕೈಗೊಳ್ಳಬಾರದು ಎಂದು ವಿವರಣೆ ನೀಡುವಂತೆ ರಾಜ್ಯದ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಮತ್ತು ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಸೇರಿ ಐವರಿಗೆ ಬಿಜೆಪಿಯ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿದೆ.