ಆರ್ಎಸ್ಎಸ್ ಕುರಿತ ಹೇಳಿಕೆ: ಸಿಎಂ ಸಿದ್ದರಾಮಯ್ಯ ವಿರುದ್ಧದ ದೂರು ವಜಾ
ಸಿಎಂ ಸಿದ್ದರಾಮಯ್ಯ ಅವರು ಆರ್ಎಸ್ಎಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಎನ್ ಕಿರಣ್ ಎಂಬವರು ಖಾಸಗಿ ದೂರು ದಾಖಲಿಸಿದ್ದರು. ಇದೀಗ ಬೆಂಗಳೂರಿನ 42ನೇ ACMM ಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಖಾಸಗಿ ದೂರು ವಜಾಗೊಳಿಸಿ ಆದೇಶ ಹೊರಡಿಸಿದೆ.