ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Bangalore News: ಅಪೋಲೊ ಕ್ಯಾನ್ಸರ್ ಸೆಂಟರ್‌ಗಳ ಹೊಸ ಕ್ಯಾಂಪೇನ್ ‘ಚೆಕ್-ಒಲೇಟ್’ ಸಿಹಿಯಾದ ಚಾಕೊಲೇಟ್‌ನಲ್ಲಿ ಆರೋಗ್ಯದ ಸಂದೇಶ

‘ಚೆಕ್-ಒಲೇಟ್’ ಸಿಹಿಯಾದ ಚಾಕೊಲೇಟ್‌ನಲ್ಲಿ ಆರೋಗ್ಯದ ಸಂದೇಶ

ಎಲ್ಲರಿಗೂ ಚಾಕೊಲೇಟ್ ಇಷ್ಟ. ಅದು ಸಂತೋಷ ಕೊಡುತ್ತದೆ. ‘ಚೆಕ್-ಒಲೇಟ್’ ಇದರ ಮೂಲಕ ಚಾಕೊಲೇಟ್ ಒಂದು ಸಿಹಿ ನೆನಪಾಗಿ ಮಹಿಳೆಯರಿಗೆ ಸ್ವಯಂ ಆರೈಕೆಯ ಮಹತ್ವವನ್ನು ನೆನಪಿಸುತ್ತದೆ. ಇದು ಅರಿವನ್ನು ಕ್ರಿಯೆಯಾಗಿ ಪರಿವರ್ತಿಸುವ ಕ್ರಿಯಾತ್ಮಕ ಹಾಗೂ ಮನಮುಟ್ಟುವ ವಿಧಾನ.”

ನ.8ಕ್ಕೆ ಶ್ರೀಕನಕದಾಸ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು: ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ

ನ.8ಕ್ಕೆ ಶ್ರೀಕನಕದಾಸ ಜಯಂತಿ ಅರ್ಥಪೂರ್ಣ ಆಚರಣೆ

ಶ್ರೀಕನಕದಾಸರ ಜಯಂತಿಯ ಅಂಗವಾಗಿ ನ.೮ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಚಿಕ್ಕಬಳ್ಳಾಪುರ ನಗರದ ಮರುಳು ಸಿದ್ದೇಶ್ವರ ದೇವಾಲಯದಿಂದ ಅದ್ದೂರಿ ಮೆರವಣಿಗೆ ಆಯೋಜಿಸಿ ಜಾನಪದ ಕಲಾ ತಂಡಗಳು ಹಾಗೂ ಪಲ್ಲಕ್ಕಿಗಳೊಂದಿಗೆ ನಡೆಸಲಾಗುವುದು. ಮೆರವಣಿಗೆಯು ಎಂ. ಜಿ ರಸ್ತೆ,ಬಿ.ಬಿ ರಸ್ತೆ ಮೂಲಕ ಕನ್ನಡ ಭವನದವರೆಗೆ ಸಾಗಲಿದೆ,

Karnataka Rajyotsava 2025: ಮಾತೃಭಾಷೆಯಲ್ಲಿ ಶಿಕ್ಷಣ ಬೇಕಿದೆ, ಮದರಸಾಗಳಲ್ಲಿ ಕನ್ನಡ ಕಲಿಸಲು ಆದ್ಯತೆ: ಸಿಎಂ ಘೋಷಣೆ

ರಾಜ್ಯದ ಮದರಸಾಗಳಲ್ಲಿ ಕನ್ನಡ ಕಲಿಸಲು ಆದ್ಯತೆ: ಸಿಎಂ ಘೋಷಣೆ

CM Siddaramaiah: ರಾಜ್ಯದ 800 ಕನ್ನಡ ಶಾಲೆಗಳು ಮತ್ತು 100 ಉರ್ದು ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಅಭಿವೃದ್ಧಿ ಮಾಡಲಾಗುತ್ತಿದೆ. ಮದರಸಾಗಳಲ್ಲಿ ಕನ್ನಡ ಕಲಿಸಲು ಆದ್ಯತೆ ನೀಡುತ್ತಿದ್ದೇವೆ. ಕನ್ನಡ ಭಾಷೆ, ಪರಂಪರೆಗಳನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸಬೇಕಾದ ಅನಿವಾರ್ಯತೆಯಿರುವುದರಿಂದ ಇದಕ್ಕಾಗಿ ಹೊಸ ನೀತಿಯನ್ನು ತರುವ ಸಿದ್ಧತೆಯಲ್ಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Belagavi News, ಎಂಇಎಸ್ ಮುಖಂಡರ ಜತೆ ಸೆಲ್ಫಿ ತೆಗೆದುಕೊಂಡ ಇನ್‌ಸ್ಪೆಕ್ಟರ್ ವಿರುದ್ಧ ಕ್ರಮ: ಗೃಹ ಸಚಿವ ಪರಮೇಶ್ವರ್‌

ಎಂಇಎಸ್ ಮುಖಂಡರ ಜತೆ ಸೆಲ್ಫಿ; ಸಿಪಿಐ ವಿರುದ್ಧ ಕ್ರಮ ಎಂದ ಪರಮೇಶ್ವರ್

Selfie with MES leaders: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದಂದು ಕಪ್ಪು ಬಟ್ಟೆ ಧರಿಸಿ ಕರಾಳ ದಿನಾಚರಣೆ ಆಚರಿಸಲು ಬಂದಿದ್ದ ಎಂಇಎಸ್ ಮುಖಂಡರ ಜತೆ ಮಾಳ ಮಾರುತಿ ಠಾಣೆಯ ಸಿಪಿಐ ಜಾಕೀರ್ ಪಾಷಾ ಕಾಲಿಮಿರ್ಚಿ ಸೆಲ್ಫಿ ಕ್ಲಿಕ್ಕಿಸಿಕೊಂಡು ಎಡವಟ್ಟು ಮಾಡಿಕೊಂಡಿದ್ದರು. ಹೀಗಾಗಿ ಅವರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದರು. ಇದೀಗ ಈ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಅವರು ಪ್ರತಿಕ್ರಿಯಿಸಿದ್ದಾರೆ.

DK Shivakumar: ಆರ್. ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿ.ಕೆ. ಶಿವಕುಮಾರ್

ಆರ್. ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ

Tunnel Road Project: ಟನಲ್ ರಸ್ತೆ ವಿಚಾರವಾಗಿ ಬೆಂಗಳೂರಿನಲ್ಲಿ ಶನಿವಾರ ಮಾಧ್ಯಮಗಳ ಜತೆ ಮಾತನಾಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌, ಅಶೋಕ್ ಅವರು ಧರಣಿ ಕೂರುವ ಅವಶ್ಯಕತೆಯಿಲ್ಲ. ಏಕೆಂದರೆ ಅವರು ಬೆಂಗಳೂರಿನವರು. ಇಲ್ಲಿಂದ ಏಳೆಂಟು ಬಾರಿ ಗೆದ್ದಿದ್ದಾರೆ. ಅವರಿಗೂ ಜವಾಬ್ದಾರಿಯಿದೆ. ಅವರ ನೇತೃತ್ವದಲ್ಲಿ ರಚಿಸಿದ ಸಮಿತಿಯೇ ಸರ್ಕಾರಕ್ಕೆ ಸಲಹೆ, ನಿರ್ದೇಶನ ನೀಡಲಿ. ಟನಲ್ ಯೋಜನೆಯನ್ನು ಅವರೂ ಗಮನಿಸಲಿ. ಅಶ್ವತ್ಥ ನಾರಾಯಣ್ ಸೇರಿ ಬೇರೆ ಯಾರ ಹೆಸರನ್ನು ಸೂಚಿಸಿದರು ಅವರನ್ನು ಈ ಸಮಿತಿಗೆ ಸೇರ್ಪಡೆ ಮಾಡಲಾಗುವುದು.‌ ನಾವೆಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡಬೇಕು, ಮಾಡೋಣ ಎಂದು ಅವರು ತಿಳಿಸಿದ್ದಾರೆ.

Kannada Rajyotsava: ಪುಸ್ತಕ ಸಂಸ್ಕೃತಿ ಬೆಳೆದಷ್ಟು ಭಾಷೆ ಸದೃಢವಾಗಿ ಬೆಳೆಯುತ್ತದೆ: ಎಚ್‌.ಡಿ.ಕುಮಾರಸ್ವಾಮಿ

ಪುಸ್ತಕ ಸಂಸ್ಕೃತಿ ಬೆಳೆದಷ್ಟು ಭಾಷೆ ಸದೃಢವಾಗಿ ಬೆಳೆಯುತ್ತದೆ: ಎಚ್‌ಡಿಕೆ

HD Kumaraswamy: ಸಾರ್ವಜನಿಕ ಗ್ರಂಥಾಲಯಗಳಿಗೆ ಪುಸ್ತಕ ಖರೀದಿ ಮಾಡುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಕೂಡಲೇ ಆರಂಭಿಸಬೇಕು. ಸಾಮಾನ್ಯರು ಓದುವ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಸರ್ಕಾರ ಭಾಷಾಭಿಮಾನ ಬೆಳೆಸುವ, ಸಾಹಿತ್ಯಾಸಕ್ತಿ ಸೃಷ್ಟಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ, ನಾಲ್ಕೈದು ವರ್ಷಗಳಿಂದ ಕನ್ನಡ ಪುಸ್ತಕಗಳ ಸಗಟು ಖರೀದಿ ಆಗಿಲ್ಲವೆಂದು ಕೇಳಿದ್ದೇನೆ. ಮಾಧ್ಯಮಗಳಲ್ಲಿಯೂ ನಾನು ಈ ಬಗ್ಗೆ ವರದಿಗಳನ್ನು ಓದಿದ್ದೇನೆ. ಕನ್ನಡ ಪುಸ್ತಕಗಳನ್ನು ಖರೀಸಲಾಗದಷ್ಟು ದುಸ್ಥಿತಿಯಲ್ಲಿ ರಾಜ್ಯ ಇಲ್ಲ ಎಂದು ಅವರು ಹೇಳಿದ್ದಾರೆ.

Kannada Rajyotsava: ಕನ್ನಡ ಭಾಷೆ ಹೆಚ್ಚು ಬಳಸಿ, ಬೆಳೆಸಿ: ಬಿ.ವೈ. ವಿಜಯೇಂದ್ರ

ಕನ್ನಡ ಭಾಷೆ ಹೆಚ್ಚು ಬಳಸಿ, ಬೆಳೆಸಿ: ಬಿ.ವೈ. ವಿಜಯೇಂದ್ರ

BY Vijayendra: ಶಿಕಾರಿಪುರದಲ್ಲಿ ತಾಲೂಕು ಆಡಳಿತ ಹಾಗೂ ಕನ್ನಡ ಯುವಕ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿ, ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆ ನಮ್ಮ ಹೆಗ್ಗುರುತು. ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸಿ, ಉಳಿಸಿ, ಬೆಳೆಸುವ ಮೂಲಕ ನಾವೆಲ್ಲರೂ ಕನ್ನಡಮ್ಮನ ಸೇವೆ ಮಾಡೋಣ ಎಂದು ತಿಳಿಸಿದ್ದಾರೆ.

Kannada Rajyotsava: ಈ ತಿಂಗಳು ಪೂರ್ತಿ ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಧ್ವಜ ಹಾರಿಸುವ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನ: ಡಿಕೆಶಿ

ಕನ್ನಡ, ಕರ್ನಾಟಕವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಬೇಕು: ಡಿಕೆಶಿ

DK Shivakumar: ಕುವೆಂಪು ಅವರು ಹೇಳಿರುವಂತೆ ಕರ್ನಾಟಕ ಶಾಂತಿಯ ತೋಟ. ನಾವೆಲ್ಲರೂ ಜಾತಿ, ಧರ್ಮಗಳನ್ನು ಬಿಟ್ಟು ಸಹಬಾಳ್ವೆಯಿಂದ ಕರ್ನಾಟಕದ ಏಳಿಗೆಗೆ ದುಡಿಯಬೇಕು. ಜಾಗತಿಕವಾಗಿ ಬೆಂಗಳೂರು ಬೆಳಗುತ್ತಿದೆ. ಪ್ರಪಂಚದ ಜನರು ನಮ್ಮನ್ನು ಗಮನಿಸುತ್ತಿದ್ದಾರೆ. ಕನ್ನಡ, ಕರ್ನಾಟಕವನ್ನು ಜಾಗತಿಕ ಮಟ್ಟಕ್ಕೆ ನಾವೆಲ್ಲರೂ ಕೊಂಡೊಯ್ಯಬೇಕು. ಭುವನೇಶ್ವರಿ ತಾಯಿ ಇಡೀ ಭೂಮಿಗೆ ಒಡತಿ. ಕರ್ನಾಟಕದ ನಾಡದೇವತೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

Kannada Rajyotsava: ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ: ಲಕ್ಷ್ಮೀ ಹೆಬ್ಬಾಳ್ಕರ್

ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ: ಹೆಬ್ಬಾಳ್ಕರ್

Laxmi Hebbalkar: ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70 ರಿಂದ 95ರಷ್ಟು ಬಡ ಹಿಂದುಳಿದ ಮಹಿಳೆಯರ ಜೀವನಮಟ್ಟ ಸುಧಾರಣೆಯಾಗಿದೆ. ಶಕ್ತಿ, ಗೃಹಜ್ಯೋತಿ ಉಳಿತಾಯದ ಹಣ ಮತ್ತು ಗೃಹಲಕ್ಷ್ಮೀ ಹಣವನ್ನು ಪ್ರಮುಖವಾಗಿ ಆಹಾರ ಪದಾರ್ಥಗಳ ಖರೀದಿಗೆ ಬಳಸುತ್ತಿದ್ದು, ಇದರಿಂದ ಶೇ.88ರಷ್ಟು ಕುಟುಂಬಗಳು ಉತ್ತಮ ಮತ್ತು ಪೌಷ್ಟಿಕಾಂಶಯುಕ್ತ ಆಹಾರವನ್ನು ಸೇವಿಸುತ್ತಿದ್ದಾರೆ. ಶೇ.83ರಷ್ಟು ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಗ್ಯಾರಂಟಿಗಳು ಸಹಕಾರಿಯಾಗಿರುವ ಅಂಶ ಅಧ್ಯಯನದಿಂದ ಬಹಿರಂಗವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Self Harming: ಮೈಸೂರಿನಲ್ಲಿ ಘೋರ ಘಟನೆ; ಇಬ್ಬರ ಮಕ್ಕಳ ಕತ್ತು ಕೊಯ್ದು ಆತ್ಮಹತ್ಯೆ ಮಾಡಿಕೊಂಡ ತಾಯಿ!

ಇಬ್ಬರ ಮಕ್ಕಳ ಕತ್ತು ಕೊಯ್ದು ಆತ್ಮಹತ್ಯೆ ಮಾಡಿಕೊಂಡ ತಾಯಿ!

Mysuru News: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಮಹಿಳೆ ತನ್ನ 10 ದಿನದ ಹೆಣ್ಣು ಮಗು ಹಾಗೂ 5 ವರ್ಷದ ಹೆಣ್ಣು ಮಗುವಿನ ಕತ್ತು ಕೊಯ್ದು ಕೊಲೆ ಮಾಡಿದ್ದಾಳೆ. ಬಳಿಕ ತಾನು ಕೂಡ ಅದೇ ಚಾಕುವಿನಿಂದ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Rohan Bopanna: ಟೆನಿಸ್‌ಗೆ ವಿದಾಯ ಹೇಳಿದ ಕನ್ನಡಿಗ ರೋಹನ್ ಬೋಪಣ್ಣ

Bopanna Retirement : ಕೊಡಗಿನ ಕಲಿ ರೋಹನ್ ಬೋಪಣ್ಣ ಟೆನಿಸ್‌ ನಿವೃತ್ತಿ

ಬೋಪಣ್ಣ ಅವರು ಒಟ್ಟು ಎರಡು ಗ್ರ್ಯಾನ್‌ಸ್ಲಾಮ್ ಪ್ರಶಸ್ತಿ ಗೆದ್ದಿದ್ದಾರೆ. 2024 ರಲ್ಲಿ ಮೆಲ್ಬರ್ನ್‌ನಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ರೋಹನ್ ಅವರು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೊತೆಗೂಡಿ ಪುರುಷರ ಡಬಲ್ಸ್‌ ಪ್ರಶಸ್ತಿ ಜಯಿಸಿದ್ದರು. ಅಲ್ಲದೆ ವಿಶ್ವ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದ್ದರು. ಈ ಮೂಲ ಗ್ರ್ಯಾನ್‌ಸ್ಲಾಮ್ ಟೆನಿಸ್‌ನಲ್ಲಿ ಈ ಸಾಧನೆ ಮಾಡಿದ ಅತ್ಯಂತ ಹಿರಿಯ ವಯಸ್ಸಿನ ಆಟಗಾರನೆಂಬ ಗೌರವಕ್ಕೂ ಅವರು ಪಾತ್ರರಾಗಿದ್ದರು.

Bagepally News: ಭಾರತ ಪ್ರಪಂಚದಾದ್ಯಂತ ರಾಷ್ಟ್ರೀಯ ಐಕ್ಯತೆ ಸಾರಿದ ದೇಶ: ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ವರ್ಣಿ

ಭಾರತ ಪ್ರಪಂಚದಾದ್ಯAತ ರಾಷ್ಟ್ರೀಯ ಐಕ್ಯತೆ ಸಾರಿದ ದೇಶ

ರಾಷ್ಟ್ರೀಯ ಐಕ್ಯತಾ ದಿನಾಚರಣೆ ಅಂಗವಾಗಿ ಸ್ವಾತಂತ್ರ‍್ಯ ಹೋರಾಟಗಾರ, ಏಕೀಕರಣದ ಶಿಲ್ಪಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ೧೫೦ನೇ ಜನ್ಮ ದಿನದ ವಾರ್ಷಿಕೋತ್ಸವದ ನಿಮಿತ್ತ ಸಾರ್ವ ಜನಿಕರಲ್ಲಿ ನಾಗರಿಕರ ಸುರಕ್ಷತೆ ಮತ್ತು ಜವಾ ಬ್ದಾರಿಗಳ ಕುರಿತು ಅರಿವು ಮೂಡಿಸಲು  ಪೊಲೀಸ್ ಇಲಾಖೆ ವತಿಯಿಂದ ಪಟ್ಟಣದಲ್ಲಿ ಏಕತೆಗಾಗಿ ಓಟಕ್ಕೆ ನೆಡೆಯುತ್ತದೆ

Bagepally News: ಪದವೀಧರರು ಸೂಕ್ತ ದಾಖಲಾತಿಗಳನ್ನು ನೀಡಿ ನೋಂದಣಿ ಮಾಡಿಕೊಳ್ಳಿ : ಎನ್.ಡಿ.ಎ. ಸಂಭವನೀಯ ಅಭ್ಯರ್ಥಿ ತೂಪಲ್ಲಿ ಚೌಡರೆಡ್ಡಿ ಮನವಿ

ಪದವೀಧರರು ಸೂಕ್ತ ದಾಖಲಾತಿಗಳನ್ನು ನೀಡಿ ನೋಂದಣಿ ಮಾಡಿಕೊಳ್ಳಿ

ಅರ್ಹ ಪದವೀಧರ ವ್ಯಕ್ತಿಗಳು ತಮ್ಮ ಹೆಸರುಗಳನ್ನು ನೋಂದಾಯಿಸಲು ನಿಗದಿತ ನಮೂನೆ-೧೮ರ ಅರ್ಜಿಯೊಂದಿಗೆ ಪದವಿ ಪ್ರಮಾಣ ಪತ್ರದ ಪ್ರತಿ, ಅಂಕ ಪಟ್ಟಿಯ ಪ್ರತಿಯನ್ನು ಸ್ವಯಂ ದೃಢೀಕರಿಸಿ ಮತ್ತು ಗೆಜೆಟೇಡ್ ಅಧಿಕಾರಿಗಳಿಂದ ದೃಢೀಕರಿಸಿ ಅಡಕದೊಂದಿಗೆ ಸಲ್ಲಿಸಬೇಕು ಮಾಹಿತಿ ಮತ್ತು ಮಾರ್ಗದರ್ಶನ ನೀಡಲು ಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಶಿಕ್ಷಕರು ಮಾಡಬೇಕು

Gauribidanur News: ನ.2ಕ್ಕೆ ಮದಕರಿ ಯುವ ಬ್ರಿಗೇಡ್‌ನಿಂದ ಮದಕರಿ ಜಯಂತಿ

ನ.2ಕ್ಕೆ ಮದಕರಿ ಯುವ ಬ್ರಿಗೇಡ್‌ನಿಂದ ಮದಕರಿ ಜಯಂತಿ

ತಾಲ್ಲೂಕಿನಲ್ಲಿ ಪ್ರಥಮ ಬಾರಿಗೆ ನಾಡ ದೊರೆ ವೀರ ಮದಕರಿ ನಾಯಕ ಜಯಂತಿಯನ್ನು ಆಚರಣೆ ಮಾಡಲು ಮದಕರಿ ಯುವ ಬ್ರಿಗ್ರೇಡ್ ವತಿಯಿಂದ ಹಮ್ಮಿಕೊಂಡಿರುವುದು ಉತ್ತಮ ಬೆಳವಣಿಗೆ, ತಾಲ್ಲೂಕಿನಲ್ಲಿ ಸಮುದಾಯದ ಜನಸಂಖ್ಯೆ ಹೆಚ್ಚಾಗಿದ್ದು, ಎಲ್ಲರೂ ಭಾಗವಹಿಸಬೇಕು, ಜಯಂತಿ ಗಳನ್ನು ಆಚರಣೆ ಮಾತ್ರ ಸೀಮಿತ ಗೊಳಿಸಬಾರದು, ಸಮಾಜಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡ ಬೇಕು, ಈ ಕಾರ್ಯಕ್ರಮ ದಲ್ಲಿ ಸಮುದಾಯದ ಗಣ್ಯ ವ್ಯಕ್ತಿಗಳು ಮತ್ತು ಸಮುದಾಯ ದವರನ್ನು ಮಾತ್ರ  ಅಹ್ವಾನ ನೀಡಲಾಗಿದೆ

70th Kannada Rajyotsava: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 15 ಮಂದಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

15 ಮಂದಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

ನಾಡ ಹಬ್ಬದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕೈಗೊಂಡಿದ್ದ ಪೂರ್ವ ಭಾವಿ ಸಭೆಯಲ್ಲಿನ ಸಲಹೆ ಸೂಚನೆಗಳಂತೆ ಕ್ರೀಡಾಂಗಣದಲ್ಲಿ ಈಗಾಗಲೇ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಗಿದೆ. ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಕನ್ನಡ ಗೀತೆಗಳಿಗೆ ನೃತ್ಯ ಪ್ರದರ್ಶನ, ಮೈದಾನ ದಲ್ಲಿ ವಿವಿಧ ತಂಡಗಳ ಪಥ ಸಂಚಲನ ಸೇರಿದಂತೆ ವಿವಿಧ ಚಟುವಟಿಕೆಯ ತಾಲೀಮು ಮುಗಿದಿದೆ

Gauribidanur News: ವಿಜ್ಞಾನ ಕಲಿಕೆ ಕ್ರಿಯಾತ್ಮಕವಾಗಿರಲಿ: ಕ್ಷೇತ್ರ ಶಿಕ್ಷಣಾಧಿಕಾರಿ ಗಂಗರೆಡ್ಡಿ

ವಿಜ್ಞಾನ ಕಲಿಕೆ ಕ್ರಿಯಾತ್ಮಕವಾಗಿರಲಿ: ಕ್ಷೇತ್ರ ಶಿಕ್ಷಣಾಧಿಕಾರಿ ಗಂಗರೆಡ್ಡಿ

ಮಕ್ಕಳಲ್ಲಿ ಶಾಲಾ ಹಂತ ದಲ್ಲಿಯೇ ವೈಜ್ಞಾನಿಕ ಮನೋಭಾವವನ್ನು ಉತ್ತೇಜಿಸುವ ಮತ್ತು ಆಸಕ್ತಿ ಯನ್ನು ಹೆಚ್ಚಿಸುವ ನಿಟ್ಟಿ ನಲ್ಲಿ ವಿಜ್ಞಾನ ದಿನಾಚರಣೆ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಲು ಮುಂದಾಗುವುದರ ಜೊತೆಗೆ ಸಿ.ವಿ.ರಾಮನ್ ಅವರ ಕಾರ್ಯವೈಖರಿಯು ಎಲ್ಲರಿಗೂ ಮಾದರಿಯಾಗಿದೆ

Bhim Army: ಭೀಮ್‌ ಆರ್ಮಿ ಕಾರ್ಯಕರ್ತನ ಕಾರಿಗೆ ಬೆಂಕಿ; RSS ಮೇಲೆ ಆರೋಪ

ಭೀಮ್‌ ಆರ್ಮಿ ಕಾರ್ಯಕರ್ತನ ಕಾರಿಗೆ ಬೆಂಕಿ

ಭೀಮ್‌ ಆರ್ಮಿ ಕಾರ್ಯಕರ್ತನ ಕಾರಿಗೆ ಬೆಂಕಿ ಹಚ್ಚಿದ ಘಟನೆ ಕಲಬುರಗಿ ನಗರದಲ್ಲಿ ಈ ಘಟನೆ ನಡೆದಿದೆ. ಸತೀಶ್ ಹುಗ್ಗಿ ಎಂಬುವವರ ಕಾರಿಗೆ ಕಿಡಿಗೆಡಿಗಳು ಬೆಂಕಿ ಹಚ್ಚಿದ್ದಾರೆ. ಇದು ಶಹಾಬಾದ್ ರಿಂಗ್ ರಸ್ತೆಯ ಬಳಿ ನಡೆದಿದ್ದು, ಸತೀಶ್ ಅವರ ಮನೆ ಮುಂದೆ ನಿಲ್ಲಿಸಿದ್ದ ಕಾರ್‌ ಮೇಲೆ ದಾಳಿ ನಡೆದಿದೆ. ಸತೀಶ್ ಹುಗ್ಗಿ ಭೀಮ್ ಆರ್ಮಿ ಸಂಘಟನೆಯ ಸ್ಥಳೀಯ ಕಾರ್ಯಕರ್ತರಾಗಿದ್ದರೆ. ಅವರು ಇತ್ತೀಚಿನ ದಿನಗಳಲ್ಲಿ RSS (ರಾಷ್ಟ್ರೀಯ ಸ್ವಯಂಸೇವಕ ಸಂಘ)ಯ ಪಥಸಂಚಲನ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿದ್ದರು.

DCM DK Shivakumar: ಎಲ್ಲೆಂದರಲ್ಲಿ ಕಸ ಹಾಕೋ ಸಮಸ್ಯೆ ನಿವಾರಣೆಗೆ ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಕಸದ ಸಮಸ್ಯೆಗೆ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ: ಡಿ.ಕೆ.ಶಿವಕುಮಾರ್

ನಗರದಾದ್ಯಂತ ಎಲ್ಲೆಂದರಲ್ಲಿ ಕಸದ ರಾಶಿ ಇರುವ ಸಮಸ್ಯೆ ಕುರಿತು ಟೀಕೆ ವ್ಯಕ್ತವಾಗುತ್ತಿರುವ ಬಗ್ಗೆ ಕೇಳಿದಾಗ, "ಈಗಾಗಲೇ‌‌ ಸಾಕಷ್ಟು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದರಿಂದ ಎಲ್ಲೆಂದರಲ್ಲಿ ಕಸ ಎಸೆಯುವವರನ್ನು ಗುರುತಿಸಿ ಅವರ ಮನೆ ಮುಂದೆಯೇ ಅದೇ ಕಸ ಸುರಿದು ಬುದ್ದಿವಾದ ಹೇಳುವ ಕೆಲಸ ಮಾಡಲಾಗುತ್ತಿದೆ. ಕಸ ಎಸೆಯುವವರಿಗೆ ದಂಡ ವಿಧಿಸುವ ಕೆಲಸವೂ ನಡೆಯುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ ಹೇಳಿದ್ದಾರೆ. ಇಡೀ ದೇಶದಲ್ಲಿಯೇ ಅತ್ಯುತ್ತಮ ವ್ಯವಸ್ಥೆ ರೂಪಿಸಿದ್ದೇವೆ. ಎಲ್ಲಾದರೂ ಕಸ, ರಸ್ತೆಗುಂಡಿ ಕಂಡರೆ ನಮಗೆ ಪೋಟೊ ಹಾಗೂ ಜಾಗ ಕಳಿಸಿ ಎನ್ನುವ ಅವಕಾಶ ನೀಡಿದ್ದೇವೆ. ಮಾಧ್ಯಮಗಳು ಪ್ರತಿದಿನ ಒಂದೊಂದು ರಸ್ತೆಗುಂಡಿ ಹಾಕುತ್ತಲೇ ಇರುತ್ತಾರೆ. ಎಷ್ಟೇ ಕೆಲಸ ಮಾಡಿದರೂ ರಸ್ತೆಗುಂಡಿ ಇದ್ದೇ ಇರುತ್ತದೆ ಎಂದು ಅವರು ಹೇಳಿದ್ದಾರೆ.

Kannada Rajyotsava: ಮತ್ತೆ ಬಾಲ ಬಿಚ್ಚಿದ MES ಪುಂಡರು; ಕನ್ನಡ ರಾಜ್ಯೋತ್ಸವದಂದೇ ಕರಾಳ ದಿನ ಆಚರಣೆ

ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದಂದೇ ಕರಾಳ ದಿನ ಆಚರಣೆ

ಒಂದೆಡೆ ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದರೆ, ಇನ್ನೊಂದೆಡೆ ಬೆಳಗಾವಿಯಯಲ್ಲಿ ಎಮ್‌ಇಎಸ್‌ ಮತ್ತೆ ತನ್ನ ಪುಂಡಾಟವನ್ನು ಮೆರೆದಿದೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಇಎಸ್ ಅನುಮತಿ ಇಲ್ಲದೆ ಇದ್ದರೂ ಕರಾಳ ದಿನ ಆಚರಣೆಗೆ ಪ್ರಯತ್ನಿಸಿದೆ. ಎಂಇಎಸ್ ಕಾರ್ಯಕರ್ತರು “ಕನ್ನಡ ಸರ್ಕಾರಕ್ಕೆ ಧಿಕ್ಕಾರ. ಕೇಂದ್ರ ಸರ್ಕಾರಕ್ಕೆ ಧಿಕ್ಕಾರ” ಎಂದು ಘೋಷಣೆಗಳನ್ನು ಕೂಗುವ ಮೂಲಕ ಕರ್ನಾಟಕ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Gold price today on 1st November 2025: ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold and silver rate in bengaluru: ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 25 ರೂ. ಇಳಿಕೆ ಕಂಡು ಬಂದಿದ್ದು, 11,275 ರೂ. ಗೆ ತಲುಪಿದೆ. 24 ಕ್ಯಾರಟ್‌ 1 (Gold Price) ಗ್ರಾಂ ಚಿನ್ನದ ದರದಲ್ಲಿ 28 ರೂ. ಇಳಿಕೆಯಾಗಿ, 12,300 ರೂ ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 90,200 ರೂ. ಬಾಳಿದರೆ, 10 ಗ್ರಾಂಗೆ ನೀವು 1,12,750 ಹಾಗೂ 100 ಗ್ರಾಂಗೆ 12,27,500 ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ 98,400 ರೂ. ಆದರೆ, 10 ಗ್ರಾಂಗೆ ನೀವು 1,23,000 ರೂ. ಹಾಗೂ 100 ಗ್ರಾಂಗೆ 12,30,000 ರೂ. ಪಾವತಿಸಬೇಕಾಗುತ್ತದೆ.

Digital Arrest: ಡಿಜಿಟಲ್ ಅರೆಸ್ಟ್ ಪ್ರಕರಣ; ಮಂಗಳೂರು ಪೊಲೀಸರ ಕಾರ್ಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ

ಮಂಗಳೂರು ಪೊಲೀಸರ ಕಾರ್ಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ

ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘಿಸಿದ್ದಾರೆ. ಅ. 23ರಂದು ಬಿಜೈ ನಿವಾಸಿ 79ರ ಹರೆಯದ ಮಹಿಳೆಗೆ ಪೊಲೀಸ್ ಸಮಸ್ತ್ರದಲ್ಲಿದ್ದ ವ್ಯಕ್ತಿ ವಾಟ್ಸಾಪ್ ಕರೆ ಮಾಡಿ ಮಹಿಳೆಯ ಮೇಲೆ ಅರೆಸ್ಟ್ ವಾರೆಂಟ್ ಜಾರಿಯಾಗಿದೆ ಎಂದು ಬಂಧನದ ಬೆದರಿಕೆಯೊಡ್ಡಿದ್ದ.

Kannada Rajyotsava: ಕುಂದಾ ನಗರಿಯಲ್ಲಿ ಕಳೆಗಟ್ಟಿದ ಕನ್ನಡ ರಾಜ್ಯೋತ್ಸವ; ಮಧ್ಯರಾತ್ರಿಯಿಂದಲೇ ಆಚರಣೆ ಶುರು

ಕುಂದಾ ನಗರಿಯಲ್ಲಿ ಕಳೆಗಟ್ಟಿದ ಕನ್ನಡ ರಾಜ್ಯೋತ್ಸವ

ರಾಜ್ಯದೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಕುಂದಾನಗರಿ ಬೆಳಗಾವಿಯಲ್ಲಿ ಮಧ್ಯರಾತ್ರಿಯಿಂದಲೇ ಜನರು ಕನ್ನಡ ರಾಜ್ಯೋತ್ಸವನ್ನು ಆಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಮಾತನಾಡಿ, ಕರಾಳ ದಿನಕ್ಕೆ ಅವಕಾಶ ಕೊಟ್ಟರೆ ದೊಡ್ಡ ಕ್ರಾಂತಿ ಆಗುವುದು ನಿಶ್ಚಿತ. ಏನಾದರೂ‌ ಅನಾಹುತ‌ ಉಂಟಾದರೆ ಅದಕ್ಕೆ ಜಿಲ್ಲಾಡಳಿತವೇ ನೇರ ಹೊಣೆ ಆಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Karnataka Rajyotsava: ಕನ್ನಡ ನಾಡು ನುಡಿಯ ಶ್ರೇಷ್ಠತೆ ಸಾರುವ ಚಿತ್ರ ಗೀತೆಗಳಿವು

ಕರ್ನಾಟಕ ರಾಜ್ಯೋತ್ಸವದ ಈ ದಿನ ಕೇಳಲೇಬೇಕಾದ ಹಾಡುಗಳಿವು

ಕರ್ನಾಟಕ ರಾಜ್ಯೋತ್ಸವ ಬಂತೆಂದೆರೆ ನಾಡಿನೆಲ್ಲೆಡೆ ಸಂಭ್ರಮದ ವಾತಾವರಣ. ಕನ್ನಡದ ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಗಳನ್ನು ಸಾರುವ ಅನೇಕ ವಿಚಾರಗಳು ರಾಜ್ಯೋತ್ಸವದಂದು ಆಗಾಗ ಚರ್ಚಿಸಲ್ಪಡುತ್ತದೆ. ರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮದಿಂದ ಹಿಡಿದು ಸಾಂಸ್ಕೃತಿಕ ಕಾರ್ಯಕ್ರಮಗಳವರೆಗೂ ಕನ್ನಡ ತಾಯಿ ಭುವನೇಶ್ವರಿಯನ್ನು ಸ್ಮರಿಸಲಾಗುತ್ತದೆ. ಅದರಲ್ಲೂ ಕನ್ನಡದ ಬಗ್ಗೆ ನಮ್ಮ ನಾಡು ನುಡಿಯನ್ನು ಜಗತ್ಪಸಿದ್ಧವಾಗಿಸುವ ಅನೇಕ ಸಿನಿಮಾ ಹಾಡುಗಳಿವೆ. ಸಾಂಸ್ಕೃತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮ ಎಲ್ಲೆಡೆ ಆಗಾಗ ಮನನ ಮಾಡುವ ಕನ್ನಡ ಸೂಪರ್ ಹಿಟ್ ರಾಜ್ಯೋತ್ಸವ ಹಾಡುಗಳಿವೆ‌. ಆ ಹಾಡುಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

Namma Metro: ಕನ್ನಡ ರಾಜ್ಯೋತ್ಸವಕ್ಕೆ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ಹಳದಿ ಮಾರ್ಗದಲ್ಲಿ ಇನ್ಮುಂದೆ ಪ್ರತಿ 15 ನಿಮಿಷಕ್ಕೊಂದು ರೈಲು

ಕನ್ನಡ ರಾಜ್ಯೋತ್ಸವಕ್ಕೆ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಮ್‌ಆರ್‌ಸಿಎಲ್‌ ಗುಡ್‌ ನ್ಯೂಸ್‌ ನೀಡಿದೆ. ನವೆಂಬರ್.1ರ ಇಂದಿನಿಂದ ಹೆಚ್ಚುವರಿಯಾಗಿ ಐದು ರೈಲುಗಳು ವಾಣಿಜ್ಯ ಸಂಚಾರ ಆರಂಭಿಸಲಿವೆ. ಹೀಗಾಗಿ ಪ್ರತಿ 15 ನಿಮಿಷಕ್ಕೊಂದು ರೈಲುಗಳು ಸಂಚರಿಸಲಿವೆ ಎಂದು ಬಿಎಮ್‌ಆರ್‌ಸಿಎಲ್‌ ತಿಳಿಸಿದೆ. ಸದ್ಯ 4 ರೈಲುಗಳು ಸಂಚಾರ ನಡೆಸುತ್ತಿದ್ದು, 19 ನಿಮಿಷ ಅಂತರದಲ್ಲಿ ರೈಲು ಸೇವೆ ಲಭ್ಯವಿತ್ತು. ಈ ಹೊಸ ರೈಲಿನ ಚಾಲನೆಯಿಂದ, ಹಳದಿ ಮಾರ್ಗದಲ್ಲಿ ಪ್ರಯಾಣ ಅನುಕೂಲಕರವಾಗಲಿದೆ. ಸಾವಿರಾರು ಜನರಿಗೆ ಅನುಕೂಲವಾಗಿರುವ ಹಳದಿ ಮೆಟ್ರೋ ಮಾರ್ಗದ ವಿಸ್ತರಣೆಗೆ ಸರ್ಕಾರ ಚಿಂತನೆ ನಡೆಸಿದೆ.

Loading...