ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

Honorary Award: ಸಾಧಕ ಮಹನೀಯರಿಗೆ ಪುರಸ್ಕಾರದ ಗೌರವ

Honorary Award: ಸಾಧಕ ಮಹನೀಯರಿಗೆ ಪುರಸ್ಕಾರದ ಗೌರವ

ಉತ್ತರ ಕನ್ನಡ ಜಿಲ್ಲೆಯ ಪ್ರಪ್ರಥಮ ದೈನಿಕ ಲೋಕಧ್ವನಿಯು ಜಿಲ್ಲೆಯ ಪತ್ರಿಕೋದ್ಯಮ ಇತಿಹಾಸದಲ್ಲಿ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನ ರಾಡಿಸನ್ ಬ್ಲೂ ಹೋಟೆಲ್‌ ನಲ್ಲಿ ನಮ್ಮ ಹೆಮ್ಮೆಯ ಸಾಧಕರು ಪ್ರಶಸ್ತಿ ಪ್ರದಾನ ಎಂಬ ಕಾರ್ಯಕ್ರಮವನ್ನು ಆಯೋಜಿ ಸಿತ್ತು. ಉತ್ತರ ಕನ್ನಡ, ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಮಹನೀಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಪ್ರಶಸ್ತಿ ನೀಡಿ ಗೌರವಿಸಿದರು.

ಕೆಎಂಎಫ್‌ನಿಂದ ಗುಡ್‌ ನ್ಯೂಸ್‌; 10ರೂ. ಸಿಗುತ್ತೆ, ನಂದಿನಿ ಹಾಲು, ಮೊಸರು

ಕೆಎಂಎಫ್‌ನಿಂದ ಗುಡ್‌ ನ್ಯೂಸ್‌; 10ರೂ. ಸಿಗುತ್ತೆ, ನಂದಿನಿ ಹಾಲು, ಮೊಸರು

ಕರ್ನಾಟಕ ಸಹಕಾರ ಹಾಲು ಉತ್ಪಾದಕ ಮಹಾಮಂಡಳ (ಕೆಎಂಎಫ್) ರಾಜ್ಯದ ಸಾಮಾನ್ಯ ಗ್ರಾಹಕರಿಗೆ ಭರ್ಜರಿ ಉಡುಗೊರೆ ನೀಡಿದ್ದು, ಬೆಲೆ ಏರಿಕೆಯ ನಡುವೆ ಕಂಗಾಲಾಗಿದ್ದ ಸಾಮಾನ್ಯ ಜನರಿಗೆ ನಂದಿನಿ ಬ್ರ್ಯಾಂಡ್‌ನ ಹಾಲು ಮತ್ತು ಮೊಸರು ಇನ್ಮುಂದೆ ಕೇವಲ 10 ರೂಪಾಯಿಗೆ ಮಾರುಕಟ್ಟೆಯಲ್ಲಿ ಲಭ್ಯವಾಗಲಿವೆ.

ಮಾದಪ್ಪನ ದರ್ಶನಕ್ಕೆ ತೆರಳುವವರೇ ಗಮನಿಸಿ; ಮಲೆ ಮಹದೇಶ್ವರದಲ್ಲಿ ಹೊಸ ರೂಲ್ಸ್‌ ಜಾರಿ

ಭಕ್ತರಿಗೆ ಮಲೆ ಮಹದೇಶ್ವರದಲ್ಲಿ ಹೊಸ ರೂಲ್ಸ್‌ ಜಾರಿ

ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಭಕ್ತನೊಬ್ಬ ಬಲಿಯಾದ ಘಟನೆ ಹಿನ್ನೆಲೆ, ಚಾಮರಾಜನಗರ ಜಿಲ್ಲಾಡಳಿತ ಪಾದಯಾತ್ರಿಕರು ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಸಂಬಂಧಿಸಿದಂತೆ ಹೊಸ ಆದೇಶವನ್ನು ಹೊರಡಿಸಿದೆ. ಮಾದಪ್ಪನ ದರ್ಶನಕ್ಕೆ ಸಮಯ ನಿಗದಿ ಮಾಡಲಾಗಿದೆ.

ʼವಿಶ್ವವಾಣಿʼಯಂತೆ ʼಲೋಕಧ್ವನಿʼಯೂ ಬೆಳಗಲಿ

ʼವಿಶ್ವವಾಣಿʼಯಂತೆ ʼಲೋಕಧ್ವನಿʼಯೂ ಬೆಳಗಲಿ

ವಿಶ್ವೇಶ್ವರ ಭಟ್ಟರು ಉತ್ತರ ಕನ್ನಡದ ಪ್ರಮುಖ ಪತ್ರಿಕೆಯಾಗಿರುವ ಲೋಕಧ್ವನಿಯ ಸಾರಥ್ಯ ವಹಿಸಿಕೊಂಡ ಬಳಿಕ ಈ ಪತ್ರಿಕೆಯನ್ನು ಕೊಪ್ಪಳಕ್ಕೂ ವಿಸ್ತರಿಸಿದ್ದಾರೆ. ಶೀಘ್ರದಲ್ಲಿಯೇ ಮೈಸೂರಿನಲ್ಲಿಯೂ ಆರಂಭಿಸುವುದಾಗಿ ಹೇಳಿದ್ದಾರೆ. ಆದ್ದರಿಂದ ಲೋಕಧ್ವನಿ ಜಿಲ್ಲಾಮಟ್ಟದ ಪತ್ರಿಕೆಯಾಗಿ ಉಳಿದಿಲ್ಲ. ಬದಲಿಗೆ ಅದೂ ಸಹ ರಾಜ್ಯಮಟ್ಟದ ಪತ್ರಿಕೆ ಯಾಗುವತ್ತ ಸಾಗುತ್ತದೆ.

Achievers: ನಾಡಿನ ಸಾಧಕರಿಗೆ ʼಲೋಕಧ್ವನಿʼಯ ಗೌರವ

Achievers: ನಾಡಿನ ಸಾಧಕರಿಗೆ ʼಲೋಕಧ್ವನಿʼಯ ಗೌರವ

ವಿಭಿನ್ನ ಸುದ್ದಿಯ ಮೂಲಕವೇ ಜನಜನಿತವಾಗಿರುವ ಲೋಕಧ್ವನಿ, ತೆರೆಮರೆಯ ಸಾಧಕ ರನ್ನು ಗುರುತಿಸುವ ನಿಟ್ಟಿನಲ್ಲಿ ‘ಲೋಕಧ್ವನಿ ಹೆಮ್ಮೆಯ ಸಾಧಕ -2026’ ನೀಡಲಾಯಿತು. ಎಲೆಮರೆಯ ಕಾಯಿಗಳಂತೆ ಗ್ರಾಮೀಣ ಪ್ರದೇಶದಲ್ಲಿ ಸಾಧನೆ ಮಾಡಿರುವ ಕರುನಾಡಿನ ಸಾಧಕರನ್ನು ಪರಿಚಯಿಸುವುದು ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿತ್ತು.

Voice of Uttara Kannada, 'Lokadhvani': ಉತ್ತರ ಕನ್ನಡದ ಧ್ವನಿ ʼಲೋಕಧ್ವನಿʼ

ಉತ್ತರ ಕನ್ನಡದ ಧ್ವನಿ ʼಲೋಕಧ್ವನಿʼ

ಲೋಕಧ್ವನಿ ಪತ್ರಿಕೆಯ 42ನೇ ವರ್ಷದ ವಾರ್ಷಿಕೋತ್ಸವ ಹಾಗೂ ಲೋಕಧ್ವನಿ ನಮ್ಮ ಹೆಮ್ಮೆಯ ಸಾಧಕರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೋಕ ಧ್ವನಿ ಪತ್ರಿಕೆಯು ಉತ್ತರ ಕನ್ನಡ ಜಿಲ್ಲೆಯ ಮೊದಲ ದೈನಿಕವಾಗಿದ್ದು, ಕಳೆದ ನಾಲ್ಕು ದಶಕಗಳಿಂದ ಜನಜೀವನದ ಅವಿಭಾಜ್ಯ ಅಂಗವಾಗಿ ಬೆಳೆದು ಬಂದಿದೆ.

ನಾನ್‌ವೆಜ್‌ ಪ್ರಿಯರಿಗೆ ಬಿಗ್‌ ಶಾಕ್‌; ಕೋಳಿ ಮಾಂಸದ ಬೆಲೆಯಲ್ಲಿ ಭಾರೀ ಏರಿಕೆ!

ಕೋಳಿ ಮಾಂಸದ ಬೆಲೆಯಲ್ಲಿ ಭಾರೀ ಏರಿಕೆ!

ಕೋಳಿ ಮಾಂಸದ ಬೆಲೆ ದಿನೇದಿನೇ ಏರಿಕೆಯಾಗುತ್ತಿದ್ದು, ಕಳೆದ ಎರಡು ವಾರಗಳಲ್ಲಿ ಪ್ರತಿ ಕೆ.ಜಿ ಮೇಲೆ ಸುಮಾರು 100 ರೂಗೂ ಹೆಚ್ಚಾಗಿದೆ. ಇದರಿಂದ ಚಿಕನ್‌ ಪ್ರಿಯರ ಜೇಬು ಸುಡುತ್ತಿದೆ. ಕೋಳಿ ಮಾಂಸದ ದಿಢೀರ್ ಬೆಲೆ ಏರಿಕೆಗೆ ಹಲವು ಕಾರಣಗಳಿವೆ. ಪ್ರಮುಖವಾಗಿ ತಮಿಳುನಾಡು ಮತ್ತು ಆಂಧ್ರಪ್ರದೇಶಗಳಲ್ಲಿ ಕೋಳಿ ಸಾಕಾಣೆದಾರರು ನಡೆಸುತ್ತಿರುವ ಪ್ರತಿಭಟನೆ ಇದಕ್ಕೆ ಕಾರಣ ಎನ್ನಲಾಗಿದೆ.

ಗಣರಾಜ್ಯೋತ್ಸವಕ್ಕೆ ಮಾಣಿಕ್ ಷಾ ಮೈದಾನ ಸಜ್ಜು; ಹಲವೆಡೆ ಸಂಚಾರ ನಿಷೇಧ

ಗಣರಾಜ್ಯೋತ್ಸವಕ್ಕೆ ಮಾಣಿಕ್ ಷಾ ಮೈದಾನ ಸಜ್ಜು

77ನೇ ಗಣರಾಜ್ಯೋತ್ಸವಕ್ಕೆ ದೇಶಾದ್ಯಂತ ಭರದಿಂದ ಸಿದ್ದತೆ ನಡೆಸಲಾಗುತ್ತಿದೆ. ಐತಿಹಾಸಿಕ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಾರ್ವಜನಿಕ ದೃಷ್ಟಿಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಬೆಂಗಳೂರಿನ ಮೆಜೆಸ್ಟಿಕ್‌-ಏರ್‌ಪೋರ್ಟ್‌ ಸಬ್‌ ಅರ್ಬನ್‌ ರೈಲು ಯೋಜನೆಗೆ ಕೇಂದ್ರದಿಂದ ಗ್ರೀನ್‌ ಸಿಗ್ನಲ್‌

ಮೆಜೆಸ್ಟಿಕ್‌-ಏರ್‌ಪೋರ್ಟ್‌ ಉಪನಗರ ರೈಲು ಯೋಜನೆಗೆ ಗ್ರೀನ್‌ ಸಿಗ್ನಲ್‌

Bengaluru Suburban Rail Project: ಬೆಂಗಳೂರಿನ ಮೆಜೆಸ್ಟಿಕ್‌ನಿಂದ ಕೆಂಪೇಗೌಡ ವಿಮಾನ ನಿಲ್ದಾಣ ಸಂಪರ್ಕಿಸುವ ಉಪನಗರ ರೈಲು ಯೋಜನೆಯನ್ನು 4,100 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಕೇಂದ್ರ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ. ಒಟ್ಟು 8.5 ಕಿ.ಮೀ ರೈಲು ಮಾರ್ಗ 2030ರ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.

ಕಡಬದಲ್ಲಿ ಶಾಕಿಂಗ್‌ ಘಟನೆ; ತಂದೆಗೆ ಚಾಕು ಇರಿದ ಬಳಿಕ ಕೋವಿಯಿಂದ ಗುಂಡು ಹಾರಿಸಿಕೊಂಡು ಬಾಲಕ ಆತ್ಮಹತ್ಯೆ!

ತಂದೆಗೆ ಚಾಕುವಿನಿಂದ ಇರಿದ ಬಳಿಕ ಗುಂಡು ಹಾರಿಸಿಕೊಂಡು ಬಾಲಕ ಆತ್ಮಹತ್ಯೆ!

Kadaba News: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಪಾದೆಯಲ್ಲಿ ಘಟನೆ ನಡೆದಿದೆ. ಗಲಾಟೆ ವೇಳೆ ಕೋಪದಿಂದ ತಂದೆಗೆ ಚಾಕುವಿನಿಂದ ಇರಿದಿದ್ದ ಬಾಲಕ, ಬಳಿಕ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಜ್ಯದ ಜೈಲುಗಳಲ್ಲಿ ಹೊಸ ರೂಲ್ಸ್‌; ದರ್ಶನ್ ಸೇರಿ ಇತರ ಕೈದಿಗಳಿಗೆ ವಿಶೇಷ ಸೌಲಭ್ಯಕ್ಕೆ ಕುತ್ತು

ಜೈಲಿನಲ್ಲಿ ದರ್ಶನ್ ಸೇರಿ ಇತರ ಕೈದಿಗಳಿಗೆ ವಿಶೇಷ ಸೌಲಭ್ಯಕ್ಕೆ ಕುತ್ತು

ವಿಚಾರಣಾಧೀನ ಆರೋಪಿಗಳಿಗೆ ಒದಗಿಸುವ ಹೊರಗಿನ ಸೌಕರ್ಯದ ಬಗ್ಗೆ ಹೊಸ ಸುತ್ತೋಲೆ ಹೊರಡಿಸಲಾಗಿದೆ. ಹೊರಗಿನಿಂದ ನೀಡುವ ಆಹಾರ, ಬಟ್ಟೆ, ಹಾಸಿಗೆ ಸರಬರಾಜು ನಿಯಂತ್ರಣಕ್ಕೆ ಸಂಬಂಧಿಸಿ ಕೆಲ ನಿರ್ಬಂಧಗಳನ್ನು ವಿಧಿಸಲಾಗಿದೆ. ಈ ಬಗ್ಗೆ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಡಿಜಿಪಿ ಅಲೋಕ್‌ ಕುಮಾರ್‌ ಸುತ್ತೋಲೆ ಹೊರಡಿಸಿದ್ದಾರೆ.

Koratagere News: ಕೊರಟಗೆರೆಯಲ್ಲಿ ಸರ್ಕಾರಿ ಯೋಜನೆಗಳ ಮಾಹಿತಿ ಮಳಿಗೆ ಉದ್ಘಾಟಿಸಿದ ಡಿಸಿ ಶುಭಕಲ್ಯಾಣ್

ಕೊರಟಗೆರೆಯಲ್ಲಿ ಸರ್ಕಾರಿ ಯೋಜನೆಗಳ ಮಾಹಿತಿ ಮಳಿಗೆ ಉದ್ಘಾಟಿಸಿದ ಡಿಸಿ

ಕೊರಟಗೆರೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸರ್ಕಾರಿ ಯೋಜನೆಗಳ ಬಗ್ಗೆ ತಿಳಿಸುವ ಮಾಹಿತಿ ಮಳಿಗೆ ಸ್ಥಾಪಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್‌ ಮಾತನಾಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಸರ್ಕಾರದ ಯೋಜನೆಗಳ ಮಾಹಿತಿ ಮಳಿಗೆ ಸ್ಥಾಪಿಸಿ, ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುತ್ತಿರುವುದು ಪ್ರಶಂಸನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟಾಟಾ ಏಸ್-ಸ್ಕೂಟರ್‌ ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ಸ್ಥಳದಲ್ಲೇ ಸಾವು

ಬೆಂಗಳೂರಿನಲ್ಲಿ ಟಾಟಾ ಏಸ್-ಸ್ಕೂಟರ್‌ ಡಿಕ್ಕಿಯಾಗಿ ತಾಯಿ-ಮಗ ಸಾವು

ಡಿ ಮಾರ್ಟ್‌ನಿಂದ ದಿನಸಿ ಸಾಮಗ್ರಿ ಖರೀದಿಸಿ ತಾಯಿ-ಮಗ ಡಿಯೋ ಸ್ಕೂಟರ್‌ನಲ್ಲಿ ಮನೆಯತ್ತ ಸಾಗುತ್ತಿದ್ದಾಗ ಎದುರಿಗೆ ಬಂದ ಟಾಟಾ ಏಸ್‌ ಡಿಕ್ಕಿಯಾಗಿದೆ. ಇದರಿಂದ ಸ್ಥಳದಲ್ಲೇ ತಾಯಿ-ಮಗ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹುಬ್ಬಳ್ಳಿಯಲ್ಲಿ ಕಟೌಟ್ ಬಿದ್ದು ಗಾಯಗೊಂಡವರ ಆರೋಗ್ಯ ವಿಚಾರಿಸಿದ ಸಿಎಂ

ಹುಬ್ಬಳ್ಳಿಯಲ್ಲಿ ಕಟೌಟ್ ಬಿದ್ದು ಗಾಯಗೊಂಡವರ ಆರೋಗ್ಯ ವಿಚಾರಿಸಿದ ಸಿಎಂ

cutout collapse in Hubli: ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಮನೆ ಹಂಚಿಕೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಳವಡಿಸಿದ್ದ ಬೃಹತ್ ಕಟೌಟ್‌ಗಳು ಶನಿವಾರ ಮುರಿದುಬಿದ್ದು ನಾಲ್ವರು ಗಾಯಗೊಂಡಿದ್ದರು. ಗಾಯಾಳುಗಳನ್ನು ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಕೊಳೆಗೇರಿ ಜನರನ್ನು ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆಗಳ ವಿತರಣೆ: ಸಿಎಂ

ಕೊಳೆಗೇರಿ ಜನರಿಗೆ ಬೃಹತ್ ಪ್ರಮಾಣದಲ್ಲಿ ಮನೆಗಳ ವಿತರಣೆ: ಸಿಎಂ

ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ನಮ್ಮ ಕಾಂಗ್ರೆಸ್ ಸರ್ಕಾರ 14,58,000 ಮನೆಗಳನ್ನು ಕಟ್ಟಿ ಇತಿಹಾಸ ನಿರ್ಮಿಸಿ ವಸತಿ ಕ್ರಾಂತಿ ಮಾಡಿದ್ದೆವು. ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ 2024ರಲ್ಲಿ 36,789 ಮನೆಗಳನ್ನು ಮೊದಲನೇ ಹಂತದಲ್ಲಿ ವಿತರಿಸಿದ್ದ ನಮ್ಮ ಸರ್ಕಾರ ಎರಡನೇ ಹಂತದಲ್ಲಿ 45 ಸಾವಿರ ಮನೆಗಳನ್ನು ಹಂಚುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾರು ಚಲಾಯಿಸುತ್ತ ಮಹಿಳೆಯನ್ನು ಹಿಂಬಾಲಿಸಿದ ಬೆತ್ತಲೆ ವ್ಯಕ್ತಿ: ಬೆಂಗಳೂರಿನಲ್ಲಾದ ಕರಾಳ ಅನುಭವ ಬಿಚ್ಚಿಟ್ಟ ಸಂತ್ರಸ್ತೆ

ಕಾರು ಚಲಾಯಿಸುತ್ತ ಮಹಿಳೆಯನ್ನು ಹಿಂಬಾಲಿಸಿದ ಬೆತ್ತಲೆ ವ್ಯಕ್ತಿ

ಬೆಂಗಳೂರಿನ ಸಾರ್ವಜನಿಕ ರಸ್ತೆಯಲ್ಲಿ ಕಾರು ಚಲಾಯಿಸುತ್ತ ಬೆತ್ತಲೆ ವ್ಯಕ್ತಿಯೊಬ್ಬ ಹಿಂಬಾಲಿಸಿದ್ದಾನೆ ಎಂದು ಮಹಿಳೆಯೊಬ್ಬರು ಸೋಶಿಯಲ್‌ ಮೀಡಿಯಾದಲ್ಲಿ ಆರೋಪಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಅವರು ಹಂಚಿಕೊಂಡಿರುವ ಮಾಹಿತಿ ವೈರಲ್ ಆಗಿದ್ದು, ಮಹಿಳೆಯರ ಸುರಕ್ಷತೆ ಕುರಿತಾಗಿ ಮತ್ತೆ ಗಂಭೀರ ಚರ್ಚೆ ಹುಟ್ಟು ಹಾಕಿದೆ.

45 ದಿನದಿಂದ ಏಕಾಏಕಿ ಇ-ಖಾತಾ ಸ್ಥಗಿತ: ಲ್ಯಾಂಡ್‌ ಡೆವಲಪರ್ಸ್‌ ಅಸೋಸಿಯೇಷನ್‌ ಆಕ್ರೋಶ

45 ದಿನದಿಂದ ಇ-ಖಾತಾ ಸ್ಥಗಿತ: ಲ್ಯಾಂಡ್‌ ಡೆವಲಪರ್ಸ್ ಆಕ್ರೋಶ

Tumkur News: ಇ-ಖಾತಾ ಸ್ಥಗಿತದಿಂದ ಬ್ಯಾಂಕ್‌ನಿಂದ ಸಾಲ ಸೌಲಭ್ಯ ದೊರೆಯದೆ ಅಭಿವೃದ್ಧಿ ಚಟುವಟಿಕೆಗಳು ಸ್ಥಗಿತಗೊಂಡಿವೆ. ಸಿಸಿ ಹಾಗೂ ಒಸಿ ಪಡೆಯುವ ಪ್ರಕ್ರಿಯೆ ಸುಮಾರು 2 ವರ್ಷಗಳಿಂದ ವಿಳಂಬವಾಗುತ್ತಿದೆ ಎಂದು ಲ್ಯಾಂಡ್‌ ಡೆವಲಪರ್ಸ್‌ ಅಸೋಸಿಯೇಷನ್‌ನ ಅಧ್ಯಕ್ಷ ಸ್ಪೂರ್ತಿ ಚಿದಾನಂದ್ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ 88,345 ಮನೆಗಳ ವಿತರಣೆಗೆ ಸಿಎಂ ಚಾಲನೆ; ಬಡವರು, ನಿರಾಶ್ರಿತರ ಮುಖದಲ್ಲಿ ಮಂದಹಾಸ

ಹುಬ್ಬಳ್ಳಿಯಲ್ಲಿ 88,345 ಸಾವಿರ ಮನೆಗಳ ವಿತರಣೆಗೆ ಸಿಎಂ ಚಾಲನೆ

ದುಬಾರಿ ಕಾಲದಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಸ್ವಂತ ಮನೆ ಎಂಬುದು ಗಗನಕುಸುಮವಾಗಿತ್ತು. ಆದರೆ ಸರ್ಕಾರದ ಈ ಯೋಜನೆಯು ಹಲವು ನಿರಾಶ್ರಿತ ಕುಟುಂಬಗಳ ಮುಖದಲ್ಲಿ ಮಂದಹಾಸ ಮೂಡಿಸಿದೆ. ಸ್ವಂತ ಮನೆಯ ಕನಸು ನನಸಾದ ಹಿನ್ನೆಲೆಯಲ್ಲಿ ಫಲಾನುಭವಿಗಳು ಸಂತಸ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

SSLC Preparatory Exam 2: ಜ.27ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-2; ವೇಳಾಪಟ್ಟಿ ಪ್ರಕಟ

ಜ.27ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-2; ವೇಳಾಪಟ್ಟಿ ಪ್ರಕಟ

ರಾಜ್ಯದಲ್ಲಿ ಜನವರಿ 27ರಿಂದ ಫೆಬ್ರವರಿ2ರವರೆಗೆ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-2 ನಡೆಯಲಿದೆ. ಇದಕ್ಕೆ ಸಂಬಂಧಿಸಿ ಶಾಲಾ ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ 3 ಪೂರ್ವಸಿದ್ಧತಾ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪೂರ್ವ ಸಿದ್ಧತಾ ಪರೀಕ್ಷೆ-1 ಜನವರಿ 5ರಿಂದ 10ರವರೆಗೆ ನಡೆದಿತ್ತು.

National Girl Child Day: ಹೆಣ್ಣು ಮಗು, ನಾಳೆಯ ಭರವಸೆಯ ಬೆಳಗು

ಹೆಣ್ಣು ಮಗು, ನಾಳೆಯ ಭರವಸೆಯ ಬೆಳಗು

‘ಒಂದು ಗಂಡು ಮಗುವಿಗೆ ಶಿಕ್ಷಣ ನೀಡಿದರೆ ಒಬ್ಬ ವ್ಯಕ್ತಿಗೆ ಶಿಕ್ಷಣ ನೀಡಿದಂತೆ, ಆದರೆ ಒಂದು ಹೆಣ್ಣು ಮಗುವಿಗೆ ಶಿಕ್ಷಣ ನೀಡಿದರೆ ಇಡೀ ಕುಟುಂಬಕ್ಕೇ ಶಿಕ್ಷಣ ನೀಡಿದಂತೆ.‘ ಈ ಮಾತು ಹೆಣ್ಣು ಮಗುವಿನ ಮಹತ್ವವನ್ನು ಸಾರುತ್ತದೆ. ಪ್ರತಿ ವರ್ಷ ಜ.24ರಂದು ಭಾರತದಾದ್ಯಂತ "ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ" ವನ್ನು ಆಚರಿಸಲಾಗುತ್ತದೆ.

ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ಚಿದ್ದಕ್ಕೆ ಪೊಲೀಸರಿಂದ ಕಿರುಕುಳ ಆರೋಪ; ವಿಧಾನಸೌಧದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ವಿಧಾನಸೌಧದ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಬೆಂಗಳೂರು ಹೊರವಲಯದ ಸೋಲದೇವನಹಳ್ಳಿಯಲ್ಲಿ ಅಕ್ರಮ ಬಾಂಗ್ಲಾದೇಶ ವಲಸಿಗರನ್ನು ಬಯಲಿಗೆಳೆದಿದ್ದಕ್ಕೆ ಪೊಲೀಸರಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ವಿಧಾನಸೌಧದ ಮುಂದೆ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಸೇವಿಸುವುದನ್ನು ಗಮನಿಸಿದ ವಿಧಾನಸೌಧ ಪೊಲೀಸರು ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಲ್ ಜಾಮಿಯಾ ಮೊಹಮ್ಮದೀಯ ಎಜುಕೇಷನ್ ಸೊಸೈಟಿ ಮಾನ್ಯತೆ ರದ್ಧತಿ ಆದೇಶ ಎತ್ತಿ ಹಿಡಿದ ಶಾಲಾ ಶಿಕ್ಷಣ ಇಲಾಖೆಯ ಮೇಲ್ಮನವಿ ಪ್ರಾಧಿಕಾರ

ಸುದೀರ್ಘ 36 ಪುಟಗಳ ಆದೇಶ ಜಾರಿಗೊಳಿಸಿದ ಶಿಕ್ಷಣ ಇಲಾಖೆ ಆಯುಕ್ತರು

ಶಾಲಾ ಮಾನ್ಯತೆ ರದ್ದುಪಡಿಸಿದ್ದ ಶಾಲಾ ಶಿಕ್ಷಣ ಇಲಾಖೆಯ ಹಿಂದಿನ ಆದೇಶ ಪ್ರಶ್ನಿಸಿ ಅಲ್ ಜಾಮಿಯಾ ಮೊಹಮ್ಮದೀಯ ಎಜುಕೇಷನ್ ಸೊಸೈಟಿ ಸಲ್ಲಿಸಿದ್ದ ಮೇಲ್ಮನವಿ ಬಗ್ಗೆ ಸುದೀರ್ಘ ವಾದ ವಾದ ಪ್ರತಿವಾದ ಆಲಿಸಿದ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು 36 ಪುಟಗಳ ಸಮಗ್ರ ಹಾಗೂ ವಿಶೇಷವಾದ ಆದೇಶ ಹೊರಡಿಸಿದ್ದಾರೆ.

ಐಸಿಎಸ್ಐ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಎಸ್.ಪವನ್ ಜಿ. ಚಂದಕ್, ಉಪಾಧ್ಯಕ್ಷರಾಗಿ ಸಿ.ಎಸ್. ದ್ವಾರಕಾನಾಥ್ ಚೆನ್ನೂರ್

ಐಸಿಎಸ್ಐ ರಾಷ್ಟ್ರೀಯ ಅಧ್ಯಕ್ಷರಾಗಿ ಸಿಎಸ್. ಪವನ್ ಜಿ. ಚಂದಕ್ ಆಯ್ಕೆ

ಕೇಂದ್ರ ಸರ್ಕಾರದ ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯದಡಿ ಬರುವ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರಟರೀಸ್ ಆಫ್ ಇಂಡಿಯಾ (ಐಸಿಎಸ್ಐ) ಸಂಸ್ಥೆ ಯ 2026ನೇ ಸಾಲಿನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿಎಸ್. ಪವನ್ ಜಿ. ಚಂದಕ್, ಉಪಾಧ್ಯಕ್ಷರಾಗಿ ಸಿಎಸ್. ದ್ವಾರಕಾ ನಾಥ್ ಚೆನ್ನೂರ್ ಆಯ್ಕೆಯಾಗಿದ್ದಾರೆ.

ಹುಬ್ಬಳ್ಳಿಯಲ್ಲಿ ಮನೆ ಹಂಚಿಕೆ ಕಾರ್ಯಕ್ರಮ: ಸಿಎಂ, ಡಿಸಿಎಂ ಆಗಮನಕ್ಕೂ ಮುನ್ನವೇ  ಕುಸಿದುಬಿತ್ತು ಕಟೌಟ್‌ಗಳು

ಮನೆ ಹಂಚಿಕೆ ಕಾರ್ಯಕ್ರಮಕ್ಕೂ ಮುನ್ನವೇ ಕುಸಿದುಬಿತ್ತು ಕಟೌಟ್‌ಗಳು

ಮಂಟೂರ ರಸ್ತೆಯಲ್ಲಿ ಶನಿವಾರ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಮ್ಮಿಕೊಂಡಿರುವ ಮನೆ ಹಂಚಿಕೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಳವಡಿಸಿದ್ದ ಬೃಹತ್ ಕಟೌಟ್‌ಗಳು ಮುರಿಬಿದ್ದಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ವೇದಿಕೆಯ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ಬೃಹತ್ ಕಟೌಟ್‌ಗಳನ್ನು ಅಳವಡಿಸಲಾಗಿತ್ತು.

Loading...