ಸಿಎಂ ಕುರ್ಚಿ ನನ್ನದಲ್ಲ, ಜನರದ್ದು: ಸಿಎಂ ಡಿ.ಕೆ. ಶಿವಕುಮಾರ್
ರಾಜ್ಯದ ಆಡಳಿತದಲ್ಲಿ ಹೊಸ ಬೆಳಕು ಮೂಡಿಸಲು ನನ್ನ 40 ವರ್ಷಗಳ ರಾಜಕೀಯ ಅನುಭವದಲ್ಲಿ ಪ್ರಯತ್ನ ಮಾಡುತ್ತೇನೆ. ಚಿಕ್ಕ ವಯಸ್ಸಿನಲ್ಲೇ ಅಧಿಕಾರ ನೋಡಿದ್ದೇನೆ. ಅನೇಕ ರಾಜಕೀಯ ತಂತ್ರಗಳ ಬಲೆಗೆ ಬಿದ್ದಿದ್ದೇನೆ. ತಿಹಾರ್ ಜೈಲಿಗೆ ಹೋಗುವ ಪರಿಸ್ಥಿತಿ ಬಂತು. ನಾನು ಎಂದಿಗೂ ಎದೆಗುಂದಲಿಲ್ಲ. ಇದೇ ವಿಶ್ವಾಸ ಮತ್ತೆ ರಾಜ್ಯದ ಜನರ ಸೇವೆ ಮಾಡಲು ಸಿಕ್ಕಿದೆ ಎಂದು ನೂತನ ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.