ಪಾವಗಡದ ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್
Pavagada News: ಪಾವಗಡ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪವಿರುವ ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಕಚೇರಿಯಲ್ಲಿದ್ದ ಕೆಲವು ದಾಖಲೆಗಳು ಹಾಗೂ ಕಡತಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ.