ಕಾರವಾರ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್, ಆರೋಪಿಯಿಂದ ದೌರ್ಜನ್ಯ?
ಆರಂಭದಲ್ಲಿ ಇದೊಂದು ಸಾಮಾನ್ಯ ಆತ್ಮಹತ್ಯೆ ಪ್ರಕರಣ ಎನ್ನಲಾಗಿದ್ದರೂ, ಈಗ ಪೋಷಕರು ಗಂಭೀರ ಆರೋಪಗಳನ್ನು ಮಾಡುತ್ತಿದ್ದಾರೆ. ಮೃತ ರಿಶೆಲ್ ತಾಯಿ ರೀನಾ ಕ್ರಿಸ್ತೋದ್ ಡಿಸೋಜಾ ಅವರು ಪೊಲೀಸರಿಗೆ ನೀಡಿರುವ ಮನವಿ ಪತ್ರದಲ್ಲಿ, 'ಮಗಳ ಮೃತದೇಹದ ಮೇಲೆ ಹಲವು ಗಾಯದ ಗುರುತುಗಳು ಕಂಡುಬಂದಿವೆ. ಆಕೆಯ ಮೇಲೆ ದೈಹಿಕ ಹಾಗೂ ಲೈಂಗಿಕ ದೌರ್ಜನ್ಯ ನಡೆದಿರುವ ಬಲವಾದ ಸಂಶಯ ನಮಗಿದೆ' ಎಂದು ಉಲ್ಲೇಖಿಸಿದ್ದಾರೆ.