ಕೆಪಿಎಸ್ಸಿ ನೇಮಕಾತಿ ಹಗರಣದ ತನಿಖೆಗೆ ಎಸ್ಐಟಿ ರಚಿಸಲು ಹೈಕೋರ್ಟ್ ಆದೇಶ
KPSC Veterinary Officers recruitment: ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣ ಸಂಬಂಧಿಸಿ ತನಿಖೆ ನಡೆಸಲು ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರ ನೇತೃತ್ವದಲ್ಲಿ ಎಸ್ಐಟಿ ರಚನೆಗೆ ಹೈಕೋರ್ಟ್ ಆದೇಶ ನೀಡಿದೆ. ಇದೇ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೂ ಅಗತ್ಯ ಸಹಕಾರ ಹಾಗೂ ಮಾಹಿತಿ ನೀಡುವಂತೆ ಎಸ್ಐಟಿಗೆ ನಿರ್ದೇಶನ ನೀಡಲಾಗಿದೆ.