ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಿಣಿ; ಪೋಕ್ಸೋ ಅಡಿ ಪ್ರಕರಣ ದಾಖಲು
ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೊರಾರ್ಜಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿ ಮೂರು ತಿಂಗಳ ಗರ್ಭಿಣಿ ಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬಾಲಕಿಯ ಮೇಲೆ ಕಳೆದ ಒಂದು ವರ್ಷದಿಂದ ಚಂದ್ರು ಎಂಬಾತ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.