ಕಾಲ್ ಸೆಂಟರ್ ಉದ್ಯೋಗಿಗಳ ಕಿಡ್ನ್ಯಾಪ್ ಪ್ರಕರಣ; 8 ಮಂದಿ ಅರೆಸ್ಟ್
ಕೋರಮಂಗಲದಲ್ಲಿರುವ ಕಾಲ್‌ಸೆಂಟರ್‌ವೊಂದರಿಂದ ನಾಲ್ವರು ಉದ್ಯೋಗಿಗಳನ್ನು ಕಿಡ್ನ್ಯಾಪ್ ಮಾಡಲಾಗಿತ್ತು. ಶುಕ್ರವಾರ ಮಧ್ಯರಾತ್ರಿ ಕಾಲ್‌ಸೆಂಟರ್ ಬಳಿ ಹೋಗಿದ್ದ ಆರೋಪಿಗಳು, ನಾಲ್ವರನ್ನು ಕರೆದು ನಾವು ಪೊಲೀಸರು ಎಂದು ಬೆದರಿಸಿ, ಅಪಹರಿಸಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿ 8 ಆರೋಪಿಗಳನ್ನು ಬಂಧಿಸಲಾಗಿದೆ.