ಉದ್ಯೋಗ ಪಡೆಯಲು ಕೌಶಲ್ಯ: ಪದವಿಯ ಹಂತದಲ್ಲೇ ಕ್ರಮ
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಳೆದ 2 ವರ್ಷಗಳಲ್ಲಿ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ. ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲಾ ಕಾಲೇಜುಗಳ ಕಟ್ಟಡ ನವೀಕರಣ, ಮೂಲಸೌಕರ್ಯ ಅಭಿವೃದ್ಧಿ, ಕಾಂಪೌಂಡ್ ನಿರ್ಮಾಣ, ಸುಣ್ಣಬಣ್ಣ ಬಳಿಯಲು 350 ಕೋಟಿ ರೂಪಾಯಿಗಳ ಅಗತ್ಯವಿದ್ದು, ಈ ಬಾರಿಯ ಬಜೆಟ್ ನಲ್ಲಿ ಅನುದಾನ ದೊರೆಯದ ಕಾರಣ ಮುಖ್ಯಮಂತ್ರಿಗಳಿಗೆ ಪ್ರತ್ಯೇಕವಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ