ನ. 20, 21ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
BESCOM: 220/66/11ಕೆ.ವಿ ಇ.ಪಿ.ಐ.ಪಿ. ಸ್ಟೇಷನ್ನಲ್ಲಿ 31.5 ಎಂ.ವಿ.ಎ. ಶಕ್ತಿ ಪರಿವರ್ತಕ -1 ಮತ್ತು 2ರ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ನ. 20ರ ಬೆಳಗ್ಗೆ 9.30ರಿಂದ ಸಂಜೆ 6 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.