ರೇಷನ್ ಕಾರ್ಡ್ ಇ-ಕೆವೈಸಿ ಮಾಡಲು ವಾರದೊಳಗೆ ಮೊಬೈಲ್ ಆ್ಯಪ್ ಬಿಡುಗಡೆ
ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಹೀಗಾಗಿ ನ್ಯಾಯಬೆಲೆ ಅಂಗಡಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪಡಿತರದಾರರು ಆಗಮಿಸುತ್ತಿರುವುದರಿಂದ ತಾಂತ್ರಿಕ ಸಮಸ್ಯೆ ಉಂಟಾಗಿ ಇ-ಕೆವೈಸಿ ಪ್ರಕ್ರಿಯೆ ವಿಳಂಬವಾಗಿಗುತ್ತಿದೆ. ಈ ಹಿನ್ನೆಲೆಯಲ್ಲಿ ಆಹಾರ ಸಚಿವ ರಿಜ್ವಾನ್ ಅರ್ಷದ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.