ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Praveen Nettaru murder case: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಬಂಧನ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಬಂಧನ

Praveen Nettaru murder case: ಪ್ರಕರಣದಲ್ಲಿ ಇತರ ಆರೋಪಿಗಳು ಸಿಕ್ಕಿಬೀಳುತ್ತಿದ್ದಂತೆ ಆರೋಪಿ ಅಬ್ದುಲ್ ರಹಿಮಾನ್ ವಿದೇಶಕ್ಕೆ ಹಾರಿದ್ದ. ಹೀಗಾಗಿ, ಎನ್​ಐಎ ಅಧಿಕಾರಿಗಳು ಅಬ್ದುಲ್ ರಹಿಮಾನ್ ಸೇರಿದಂತೆ ಆರು ಮಂದಿಯ ಸುಳಿವು ಕೊಟ್ಟರೆ ಬಹುಮಾನ ಕೊಡುವುದಾಗಿ ಘೋಷಿಸಿದ್ದರು.

Tigers Death: ಹುಲಿಗಳ ಸಾವು, 4 ಅಧಿಕಾರಿಗಳ ಅಮಾನತಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಶಿಫಾರಸು

ಹುಲಿಗಳ ಸಾವು, 4 ಅಧಿಕಾರಿಗಳ ಅಮಾನತಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಶಿಫಾರಸು

Tigers Death: ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಪಾವತಿ ಮಾಡಲು ಏಪ್ರಿಲ್ ತಿಂಗಳಾಂತ್ಯಕ್ಕೇ ಹಣ ಬಿಡುಗಡೆಯಾಗಿದ್ದರೂ, ಜೂನ್ ತಿಂಗಳವರೆಗೆ ವೇತನ ಪಾವತಿಸದಿರುವುದು ಡಿಸಿಎಫ್ ಚಕ್ರಪಾಣಿ ಅವರ ಮೂಲಭೂತ ಕರ್ತವ್ಯ ಲೋಪವಾಗಿದ್ದು, ಇದು ಗಸ್ತು ಕಾರ್ಯಕ್ಕೆ ಹಿನ್ನಡೆ ಉಂಟು ಮಾಡಿದೆ. ಈ ಸಂಬಂಧ ಡಿಸಿಎಫ್ ಚಕ್ರಪಾಣಿ ಅಮಾನತಿಗೆ ಶಿಫಾರಸು ಮಾಡಿ, ಇಲಾಖಾ ವಿಚಾರಣೆ ಮಾಡಲು ಶಿಫಾರಸು ಮಾಡಿದ್ದಾರೆ.

N Ravikumar: ಸಿಎಸ್‌ಗೆ ಅವಹೇಳನ: ಎಂಎಲ್‌ಸಿ ಎನ್ ರವಿಕುಮಾರ್‌ಗೆ ಹೈಕೋರ್ಟ್ ರಿಲೀಫ್, ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ

ಸಿಎಸ್‌ಗೆ ಅವಹೇಳನ: ಎಂಎಲ್‌ಸಿ ಎನ್ ರವಿಕುಮಾರ್‌ಗೆ ಹೈಕೋರ್ಟ್ ರಿಲೀಫ್

N Ravikumar: ಸಿಎಸ್ ಶಾಲಿನಿ ರಜನೀಶ್ ವಿರುದ್ಧದ ಅವಹೇಳನಕಾರಿ ಮಾತಿನ ಪ್ರಕರಣ ಸಂಬಂಧ ಹೈಕೋರ್ಟ್‌ಗೆ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿತು. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ಜುಲೈ 8ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದೆ.

DK Shivakumar: ಚಾಮುಂಡಿ ಬೆಟ್ಟಕ್ಕೆ ಭೇಟಿ; ನನಗೆ ಏನು ಬೇಕೋ ಅದನ್ನು ಪ್ರಾರ್ಥನೆ ಮಾಡಿದ್ದೇನೆ ಎಂದ ಡಿಕೆಶಿ

ನನಗೆ ಏನು ಬೇಕೋ ಅದನ್ನು ಪ್ರಾರ್ಥನೆ ಮಾಡಿದ್ದೇನೆ ಎಂದ ಡಿಕೆಶಿ

DK Shivakumar: ಯಾವುದೇ ಕೆಲಸ ಪ್ರಾರಂಭ ಮಾಡಬೇಕಾದರೂ ತಾಯಿಯ ಆಶೀರ್ವಾದ ಕೇಳುತ್ತೇನೆ. ಆದ ಕಾರಣ ಕುಟುಂಬ ಸಮೇತವಾಗಿ ಬಂದು ಈ ರಾಜ್ಯಕ್ಕೆ, ನಿಮಗೆ ಹಾಗೂ ನಮಗೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Laxmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ, ಪಾರದರ್ಶಕವಾಗಲು ಕ್ರಮ ಕೈಗೊಳ್ಳಿ: ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ

ನೇಮಕಾತಿ ವೇಳೆ ಸಮಸ್ಯೆಗಳು ಕಂಡುಬಂದಲ್ಲಿ, ತಕ್ಷಣವೇ ಪರಿಹರಿಸಿ: ಹೆಬ್ಬಾಳ್ಕರ್

Laxmi Hebbalkar: ಅಂಗನವಾಡಿ ನೇಮಕಾತಿಯಲ್ಲಿ ಇನ್ನಷ್ಟು ಸರಳ, ಹೆಚ್ಚಿನ ಪಾರದರ್ಶಕತೆಗೆ ಕ್ರಮ ಕೈಗೊಳ್ಳಬೇಕು. ಗರಿಷ್ಠ ಮೂರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ ನೀಡಿದ್ದಾರೆ.

Bengaluru Murder Case: ಕೆಲಸದಾಕೆ ಜತೆ ಅಕ್ರಮ ಸಂಬಂಧ; ಗಂಡನನ್ನು‌ ಕೊಂದು, ಬಾತ್‌ರೂಮ್‌ನಲ್ಲಿ ಬಿದ್ದು ಸಾವು ಎಂದು ಕತೆ ಕಟ್ಟಿದ ಪತ್ನಿ!

ಮನೆ ಕೆಲಸದಾಕೆ ಜತೆ ಅಕ್ರಮ ಸಂಬಂಧ; ಗಂಡನನ್ನು‌ ಕೊಲೆಗೈದ ಪತ್ನಿ!

Bengaluru Murder Case: ಮನೆಗೆಲಸದವಳ ಜತೆ ಗಂಡ ಹೆಚ್ಚು ಸಲುಗೆಯಿಂದ ಇದ್ದ ಹಿನ್ನೆಲೆ ಸಾಕಷ್ಟು ಬಾರಿ ಗಂಡ- ಹೆಂಡತಿ ನಡುವೆ ಕಲಹ ಉಂಟಾಗಿತ್ತು. ಎರಡು ದಿನದ ಹಿಂದೆ ರಾತ್ರಿ ಇದೇ ಕಾರಣಕ್ಕೆ ಗಲಾಟೆ ಶುರುವಾಗಿದೆ. ಈ ವೇಳೆ ಗಂಡನ ಮುಖಕ್ಕೆ ಪತ್ನಿ ಬಲವಾಗಿ ಹೊಡೆದು ಕೊಂದಿದ್ದಾಳೆ.

Karnataka Rains: ಆರೆಂಜ್‌ ಅಲರ್ಟ್; ನಾಳೆ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ!

ಆರೆಂಜ್‌ ಅಲರ್ಟ್; ನಾಳೆ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ!

Karnataka Weather: ಜುಲೈ 5ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

‌DK Shivakumar: ಡಿಕೆ ಶಿವಕುಮಾರ್ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಕೇಸ್‌ಗೆ ಹೈಕೋರ್ಟ್‌ ತಡೆ

ಡಿಕೆ ಶಿವಕುಮಾರ್ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಕೇಸ್‌ಗೆ ಹೈಕೋರ್ಟ್‌ ತಡೆ

ಕಳೆದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಅವಧಿಯಲ್ಲಿ ಭ್ರಷ್ಟಾಚಾರದ ದರ ಪಟ್ಟಿ ಹೆಸರಿನಲ್ಲಿ ಬಿಜೆಪಿ ವಿರುದ್ಧ ಜಾಹೀರಾತು ಪ್ರಕಟಿಸಿದ್ದ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಅಲ್ಲದೇ ಇದೇ ಪ್ರಕರಣದಲ್ಲಿ ರಾಹುಲ್ ಗಾಂಧಿ ವಿರುದ್ಧವೂ ಪ್ರಕರಣ ದಾಖಲಿಸಲಾಗಿತ್ತು.

Kolar News: ಮಾಜಿ ಸ್ಪೀಕರ್ ರಮೇಶ್ ಕುಮಾರ್ ತೋಟದಲ್ಲಿ ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

Kolar News: ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಬಳಿ ದುರಂತ ನಡೆದಿದೆ. ತೋಟದಲ್ಲಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಗೌನಿಪಲ್ಲಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Wildlife Sanctuary: ಬುಕ್ಕಾಪಟ್ಟಣ ಚಿಂಕಾರಾ ವನ್ಯಜೀವಿಧಾಮದಲ್ಲಿ 300 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

ಬುಕ್ಕಾಪಟ್ಟಣ ಚಿಂಕಾರಾ ವನ್ಯಜೀವಿಧಾಮದಲ್ಲಿ 300 ಎಕರೆ ಒತ್ತುವರಿ ತೆರವು

Bukkapatna Chinkara Wildlife Sanctuary: ತುಮಕೂರು ಜಿಲ್ಲೆಯ ತಿಪಟೂರು ಉಪ ವಿಭಾಗದ ಬುಕ್ಕಾಪಟ್ಟಣ ಚಿಂಕಾರಾ ವನ್ಯಜೀವಿಧಾಮ ವ್ಯಾಪ್ತಿಯ ಮುತ್ತುಗದಹಳ್ಳಿ ಮೀಸಲು ಅರಣ್ಯದಲ್ಲಿ 300 ಎಕರೆ ಅರಣ್ಯ ಭೂಮಿಯನ್ನು ಅಕ್ರಮ ಒತ್ತುವರಿಯಿಂದ ಮುಕ್ತಗೊಳಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

Laxmi Hebbalkar: ಮಹಿಳೆಯರನ್ನು ಅಪಮಾನ ಮಾಡುವುದು ಬಿಜೆಪಿಗರಿಗೆ ಚಾಳಿಯಾಗಿ ಬಿಟ್ಟಿದೆ: ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ

ಮಹಿಳೆಯರನ್ನು ಅವಮಾನಿಸುವುದು ಬಿಜೆಪಿಗರಿಗೆ ಚಾಳಿಯಾಗಿದೆ: ಹೆಬ್ಬಾಳ್ಕರ್

Laxmi Hebbalkar: ಮಹಿಳೆಯರನ್ನು ಅಪಮಾನ ಮಾಡುವುದು ಬಿಜೆಪಿಗರಿಗೆ ಚಾಳಿಯಾಗಿ ಬಿಟ್ಟಿದೆ. ಎಂಎಲ್‌ಸಿ ರವಿಕುಮಾರ್ ಹೇಳಿಕೆಯಿಂದ ಬಿಜೆಪಿಯವರ ಎಲ್ಲರ ಮನಸ್ಥಿತಿ ಒಂದೇ ರೀತಿ ಇದೆ ಎಂಬಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದ್ದಾರೆ.

Farmers Protest: ದೇವನಹಳ್ಳಿ ರೈತ ಹೋರಾಟ; ಸರ್ಕಾರದ ಅಂತಿಮ ನಿರ್ಧಾರ ಪ್ರಕಟಕ್ಕೆ 10 ದಿನ ಕಾಲಾವಕಾಶ ಕೋರಿದ ಸಿಎಂ

ಭೂಸ್ವಾಧೀನ; ಅಂತಿಮ ನಿರ್ಧಾರ ಪ್ರಕಟಕ್ಕೆ 10 ದಿನ ಕಾಲಾವಕಾಶ ಕೋರಿದ ಸಿಎಂ

Farmers Protest: ಕಾನೂನು ಕಾಯ್ದೆಗೆ ವಿರುದ್ಧವಾಗಿ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ. ನಿಯಮಾನುಸಾರ ಅಂತಿಮ ನೋಟಿಫಿಕೇಶ್ ಆಗಿರುವ ಕಾರಣ, ಅದರ ಕಾನೂನು ಅಂಶಗಳನ್ನು ಪರಿಶೀಲಿಸುವ ಅಗತ್ಯವಿದೆ. 10 ದಿನಗಳ ಬಳಿಕ ಮತ್ತೆ ಸಭೆ ನಡೆಸಿ ಸರ್ಕಾರದ ನಿಲುವು ಸ್ಪಷ್ಟಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

Laxmi Hebbalkar: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನಗಳು ದೂರವಿಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನಗಳು ದೂರವಿಲ್ಲ

Laxmi Hebbalkar: ಕೇಂದ್ರ ಸರ್ಕಾರ ಬರೀ ಪೊಳ್ಳು ಭರವಸೆಯನ್ನು ಕೊಡುತ್ತಾ, ಜನ ಸಾಮಾನ್ಯರನ್ನು ವಂಚಿಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಜನರೇ ಪಾಠ ಕಲಿಸುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ.

Heart attack: ಭೂ ಸ್ವಾಧೀನ ವಿರೋಧಿ ಪ್ರತಿಭಟನೆಗಾಗಿ ಬೆಂಗಳೂರಿಗೆ ಬಂದಿದ್ದ ರೈತ ಹೃದಯಾಘಾತದಿಂದ ಸಾವು

ಪ್ರತಿಭಟನೆಗಾಗಿ ಬೆಂಗಳೂರಿಗೆ ಬಂದಿದ್ದ ರೈತ ಹೃದಯಾಘಾತದಿಂದ ಸಾವು

Heart attack: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಕುರಬರಹುಂಡಿ ಮೂಲದ ರೈತ ಮುಖಂಡರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಭೂಸ್ವಾಧೀನ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ರೈತ ಸಂಘಟನೆಗಳು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿವೆ. ಈ ಹೋರಾಟಕ್ಕೆ ಆಗಮಿಸುತ್ತಿದ್ದಾಗ ರೈತ ಮೃತಪಟ್ಟಿದ್ದಾರೆ.

KS Eshwarappa: ಅಕ್ರಮ ಆಸ್ತಿ ಗಳಿಕೆ ಆರೋಪ; ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ ಎಫ್‌ಐಆರ್ ದಾಖಲು

ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ ಎಫ್‌ಐಆರ್ ದಾಖಲು

KS Eshwarappa: ಕೆ.ಎಸ್‌. ಈಶ್ವರಪ್ಪ ಅವರು ಜಲಸಂಪನ್ಮೂಲ ಸಚಿವರಾಗಿದ್ದ ವೇಳೆ ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಈಶ್ವರಪ್ಪ ಹಾಗೂ ಕುಟುಂಬದ ವಿರುದ್ಧ ನ್ಯಾಯಾಲಯದಲ್ಲಿ ವಿನೋದ್ ಎಂಬವರು ಖಾಸಗಿ ದೂರು ದಾಖಲಿಸಿದ್ದರು.

Customs consultative group: ಬೆಂಗಳೂರಿನಲ್ಲಿ ಕಸ್ಟಮ್ಸ್ ಸಮಾಲೋಚನಾ ಗುಂಪಿನ 19ನೇ ಸಭೆ; 181 ಕಾರ್ಯಸೂಚಿ ಅಂಶಗಳ ಬಗ್ಗೆ ಚರ್ಚೆ

ಬೆಂಗಳೂರಿನಲ್ಲಿ ಕಸ್ಟಮ್ಸ್ ಸಮಾಲೋಚನಾ ಗುಂಪಿನ 19ನೇ ಸಭೆ

Customs consultative group: ಸುರ್ಜಿತ್ ಭುಜಬಲ್ ಅವರ ಅಧ್ಯಕ್ಷತೆಯಲ್ಲಿ 19ನೇ ಸಿಸಿಜಿ ಸಭೆ ನಡೆಯಿತು. ಪಾಲುದಾರರ ನಿರಂತರ ತೊಡಗಿಸಿಕೊಳ್ಳುವಿಕೆ, ನೀತಿ ಹೊಣೆಗಾರಿಕೆ ಮತ್ತು ಭಾರತದ ಅಂತರರಾಷ್ಟ್ರೀಯ ವ್ಯಾಪಾರ ಪರಿಸರ ವ್ಯವಸ್ಥೆಯನ್ನು ಮತ್ತಷ್ಟು ಸುವ್ಯವಸ್ಥಿತಗೊಳಿಸುವ ಸಿಬಿಐಸಿಯ ಬದ್ಧತೆಯನ್ನು ಪುನರುಚ್ಚರಿಸಿತು.

English Medium classes: ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; 4134 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಕ್ಕೆ ಸರ್ಕಾರ ಆದೇಶ

4134 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಕ್ಕೆ ಸರ್ಕಾರ ಆದೇಶ

government schools: 2025-26ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ/ಪ್ರೌಢ ಶಾಲೆಗಳಲ್ಲಿ ಪ್ರಸ್ತುತ ಇರುವ ಕನ್ನಡ/ಇತರೆ ಮಾಧ್ಯಮದ ಜತೆ ಆಂಗ್ಲ ಮಾಧ್ಯಮ (ದ್ವಿಭಾಷಾ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಆಂಗ್ಲ ಮಾಧ್ಯಮ ಪ್ರಾರಂಭಿಸಲು ಸೂಚಿಸಲಾಗಿದೆ.

Bengaluru News: ಸಾಲ ವಾಪಸ್‌ ಕೇಳಿದ್ದಕ್ಕೆ ಪೆಟ್ರೋಲ್‌ ಸುರಿದು ಮನೆಗೆ ಬೆಂಕಿ ಹಚ್ಚಿದ ಕಿರಾತಕ!

ಸಾಲ ವಾಪಸ್‌ ಕೇಳಿದ್ದಕ್ಕೆ ಪೆಟ್ರೋಲ್‌ ಸುರಿದು ಮನೆಗೆ ಬೆಂಕಿ ಹಚ್ಚಿದ!

Bengaluru News: ಬೆಂಗಳೂರಿನ ವಿವೇಕ್ ನಗರದಲ್ಲಿ ಘಟನೆ ನಡೆದಿದೆ. ಆರೋಪಿ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಯ ಸಹೋದರಿ ಹಲವು ವರ್ಷಗಳಾದರೂ ಸಾಲ ವಾಪಸ್‌ ನೀಡಿರಲಿಲ್ಲ. ಈ ಬಗ್ಗೆ ಪ್ರಶ್ನಿಸಿ ವ್ಯಕ್ತಿಯ ಮನೆಗೆ ಆರೋಪಿ ಬೆಂಕಿ ಇಟ್ಟಿದ್ದಾನೆ.

MLC N Ravikumar: ಶಾಲಿನಿ ರಜನೀಶ್‌ ವಿರುದ್ಧ ಅವಹೇಳನಕಾರಿ ಹೇಳಿಕೆ; ಬಿಜೆಪಿ ಎಂಎಲ್‌ಸಿ ಎನ್‌.ರವಿಕುಮಾರ್‌ ವಿರುದ್ಧ ಎಫ್‌ಐಆರ್‌

ಬಿಜೆಪಿ ಎಂಎಲ್‌ಸಿ ಎನ್‌.ರವಿಕುಮಾರ್‌ ವಿರುದ್ಧ ಎಫ್‌ಐಆರ್‌

MLC N Ravikumar: ಬಿಜೆಪಿ ಎಂಎಲ್‌ಸಿ ರವಿಕುಮಾರ್‌ ಇತ್ತೀಚೆಗೆ ಸರ್ಕಾರಿ ಅಧಿಕಾರಿಗಳ ವಿರುದ್ಧ ನಾಲಿಗೆ ಹರಿಬಿಡುತ್ತಿದ್ದಾರೆ. ಇತ್ತೀಚೆಗೆ ಕಲಬುರಗಿಯ ಜಿಲ್ಲಾಧಿಕಾರಿ ಫೌಜಿಯಾ ತರನ್ನುಂ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈಗ ಸರ್ಕಾರದ ಸಿಎಸ್ ಶಾಲಿನಿ ರಜನಿಶ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್ ತೀವ್ರ ಅಕ್ರೋಶ ವ್ಯಕ್ತಪಡಿಸಿದೆ.

Heart attack: ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ನಿಂದ ಮತ್ತೊರ್ವ ಯುವಕ ಸಾವು; ಸಾವಿನ ಸಂಖ್ಯೆ 34ಕ್ಕೆ ಏರಿಕೆ

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ನಿಂದ ಮತ್ತೊರ್ವ ಯುವಕ ಸಾವು

Hassan Heart attack cases: ಹಾಸನ ಹೊರವಲಯದ ಚಿಕ್ಕಕೊಂಡಗುಳ ಗ್ರಾಮದಲ್ಲಿ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪಿದ್ದಾನೆ. 21 ವರ್ಷದ ಮದನ್ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಹಾಸನ ತಾಲೂಕಿನ ಚಿಟ್ನಳ್ಳಿ ಗ್ರಾಮದ ನಿವಾಸಿಯಾಗಿರುವ ಮದನ್‌, ತಾಯಿ ಜೊತೆ ಚನ್ನಪಟ್ಟಣದಲ್ಲಿ ವಾಸವಾಗಿದ್ದರು.

Actor Darshan: ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ದೇವಿಯ ಆಶೀರ್ವಾದ ಪಡೆದ ನಟ ದರ್ಶನ್‌

ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ದೇವಿಯ ಆಶೀರ್ವಾದ ಪಡೆದ ನಟ ದರ್ಶನ್‌

ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿ ಸ್ನೇಹಿತರ ಜೊತೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ದರ್ಶನ್ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇತ್ತೀಚೆಗೆಷ್ಟೇ ಕೇರಳದ ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ನೀಡಿದ್ದ ದರ್ಶನ್‌ ಇದೀಗ ಹುಟ್ಟುರಾದ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ. ಆಷಾಡ ಮಾಸ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ತಮ್ಮ ಪತ್ನಿ ಜೊತೆಗೆ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ.

Karnataka Weather: ಕರಾವಳಿ ಜತೆಗೆ ಈ ಜಿಲ್ಲೆಗಳಲ್ಲಿಯೂ ಇಂದು ಭಾರಿ ಮಳೆ; ಹವಾಮಾನ ಇಲಾಖೆ ನೀಡಿದ ಎಚ್ಚರಿಕೆ ಏನು?

ಕರಾವಳಿ ಜತೆಗೆ ಈ ಜಿಲ್ಲೆಗಳಲ್ಲಿಯೂ ಇಂದು ಭಾರಿ ಮಳೆ

Weather Report: ರಾಜ್ಯದಲ್ಲಿ ಇಂದೂ ಮಳೆ ಮುಂದುವರಿಯಲಿದೆ. ಜು. 6ರವರೆಗೆ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಈಗಾಗಲೇ ಯೆಲ್ಲೋ ಅಲರ್ಟ್‌ ನೀಡಿದೆ. ಅದರಲ್ಲಿಯೂ ಕರಾವಳಿ ಭಾಗಗಳಲ್ಲಿ ಭಾರಿ ಗಾಳಿಯೊಂದಿಗೆ ಉತ್ತಮ ಮಳೆ ಸುರಿಯಲಿದೆ.

Heart Attack Deaths: ಹೃದಯಾಘಾತದಿಂದ ಹೆಚ್ಚಾದ ಸಾವು; ನಮ್ಮ ಲಸಿಕೆ ಸೇಫ್ ಎಂದ ಕೋವಿಶೀಲ್ಡ್ ತಯಾರಕರು

ಹೃದಯಾಘಾತ ಹೆಚ್ಚಳಕ್ಕೆ ಕೊರೊನಾ ಲಸಿಕೆ ಕಾರಣವೇ? ಇಲ್ಲಿದೆ ಉತ್ತರ

ಇತ್ತೀಚೆಗೆ ಹೃದಯಾಘಾತದಿಂದ ಸಾವುಗಳು ಹೆಚ್ಚಾಗುತ್ತಿದ್ದು, ಕೋವಿಡ್ ಲಸಿಕೆ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಭಾರತದಲ್ಲಿ ಕೋವಿಡ್-19 ವೇಳೆ ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸಿ ವಿತರಿಸಿದ ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಹೃದಯಾಘಾತದಿಂದ ಉಂಟಾಗುವ ಮರಣಗಳಿಗೂ, ನಮ್ಮ ಲಸಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ.

Self Harming: ಪ್ರೀತಿಸುತ್ತಿದ್ದಾಕೆಯೊಂದಿಗೆ ಮದುವೆಯಾದ ದಿನವೇ ಆತ್ಮಹತ್ಯೆಗೆ ಶರಣಾದ ನವವಿವಾಹಿತ; ಈ ದುರಂತ ಸಾವಿಗೆ ಕಾರಣವಾಗಿದ್ದೇನು?

ಪ್ರೀತಿಸುತ್ತಿದ್ದಾಕೆಯೊಂದಿಗೆ ಮದುವೆಯಾದ ದಿನವೇ ಆತ್ಮಹತ್ಯೆಗೆ ಶರಣಾದ ಯುವಕ

Kolar News: ತಾನು ಪ್ರೀತಿಸುತ್ತಿದ್ದ ಯುವತಿಯನ್ನು ಮದುವೆಯಾದ ಯುವಕ ಅದೇ ದಿನ ರಾತ್ರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರದಲ್ಲಿ ನಡೆದಿದೆ. ಮದುವೆಯಾಗಲು ಸ್ವಲ್ಪ ದಿನಗಳ ಕಾಲಾವಕಾಶ ಕೋರಿದ್ದ ಆತನ್ನು ಬಲವಂತವಾಗಿ ಮದುವೆ ಮಾಡಿಸಿದ್ದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.