ಬೆಂಗಳೂರಿನಲ್ಲಿ ಇವಿ ಸ್ಕೂಟರ್ ಹೆಸರಲ್ಲಿ 35 ಕೋಟಿ ರೂ. ವಂಚನೆ
ಇವಿ ಸ್ಕೂಟರ್ ನೀಡುವ ನೆಪದಲ್ಲಿ ಗ್ರಾಹಕರಿಂದ ಆಧಾರ್, ಪಾನ್ ಕಾರ್ಡ್ ಪಡೆದ ಶೋರೂಂ ಮಾಲೀಕರು, ಗ್ರಾಹಕರಿಗೆ ತಿಳಿಯದಂತೆ ಕೊಟಕ್ ಮಹೀಂದ್ರಾ ಬ್ಯಾಂಕ್ ಮೂಲಕ ಲೋನ್ ಮಾಡಿಸಿದ್ದಾರೆ. ಕೇವಲ 35,000 ರೂ. ಬೆಲೆಬಾಳುವ ಸಾಧಾರಣ ಇವಿ ಸ್ಕೂಟರ್ಗೆ 1.50 ಲಕ್ಷ ರೂಪಾಯಿ ಲೋನ್ ಮಾಡಿಸಿ ಬ್ಯಾಂಕ್ನಿಂದ ಹಣ ಪಡೆದುಕೊಳ್ಳಲಾಗಿದೆ. ಇದರಿಂದ ಗ್ರಾಹಕರು ಸಂಕಷ್ಟಕ್ಕೀಡಾಗಿದ್ದಾರೆ.