ಚೆನ್ನಮ್ಮ ಆರೋಗ್ಯ ಸ್ಥಿರವಾಗಿದೆ: ಮಣಿಪಾಲ್ ಆಸ್ಪತ್ರೆ ವೈದ್ಯರ ಮಾಹಿತಿ
ಉಸಿರಾಟ ಸಮಸ್ಯೆ ಹಿನ್ನೆಲೆ ಕಳೆದ ಎರಡು ದಿನಗಳ ಹಿಂದೆ ಚೆನ್ನಮ್ಮ ಅವರು ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ತಜ್ಞ ವೈದ್ಯರ ನಿಗಾದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬ ಬಗ್ಗೆ ಆಸ್ಪತ್ರೆಯು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.