ಐರನ್ಮ್ಯಾನ್ 70.3 ಓಟ ಪೂರ್ಣಗೊಳಿಸಿದ ಸಂಸದ ತೇಜಸ್ವಿ ಸೂರ್ಯ
IRONMAN 70.3: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಗೋವಾದಲ್ಲಿ ನಡೆದ 5ನೇ ಆವೃತ್ತಿಯ ಐರನ್ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಈ ಓಟವನ್ನು ತೇಜಸ್ವಿ ಸೂರ್ಯ ಪೂರ್ಣಗೊಳಿಸುತ್ತಿರುವುದು ಇದು ಸತತ 2ನೇ ಬಾರಿ. ಈ ಸಲ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಕೂಡ ತಮ್ಮ ಓಟವನ್ನು ಪೂರ್ಣಗೊಳಿಸಿ ಗಮನ ಸೆಳೆದರು.