ಚಳ್ಳಕೆರೆಯಲ್ಲಿ ಕಾರು-ಬೈಕ್ ಡಿಕ್ಕಿಯಾಗಿ ಅಣ್ಣ-ತಂಗಿ ದಾರುಣ ಸಾವು
Challakere News: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಳಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬೈಕ್‍ನಲ್ಲಿದ್ದ ಅಣ್ಣ-ತಂಗಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕಾರು ಚಾಲಕನಿಗೂ ಗಾಯಗಳಾಗಿವೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.