ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಆಪ್ತನಿಗೆ ನೋಟಿಸ್
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣದಲ್ಲಿ ಇ.ಡಿ ನೀಡಿರುವ ದೂರಿನ ಮೇರೆಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಎಫ್‌ಐಆರ್ ದಾಖಲಿಸಿತ್ತು. ಅದೇ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ಗೂ (DK Shivakumar) ನೋಟಿಸ್ ಜಾರಿಯಾಗಿತ್ತು. ಸದ್ಯ ಡಿಕೆಶಿ ಆಪ್ತ ಇನಾಯತ್ ಅಲಿಗೂ ದೆಹಲಿ ಪೊಲೀಸರು ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಒಂದು ವಾರದಲ್ಲಿ ಹಾಜರಾಗುವಂತೆ ಮಂಗಳೂರಿನ ಮನೆಗೆ ಬಂದು ದೆಹಲಿ ಪೊಲೀಸರು ನೊಟೀಸ್ ನೀಡಿ ತೆರಳಿದ್ದಾರೆ.