ನಟಿ ಸರೋಜಾದೇವಿ ಹೆಸರಲ್ಲಿ `ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಣೆ
Abhinaya Saraswathi Award: ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಅವಿಸ್ಮರಣೀಯ ಸೇವೆ ಸಲ್ಲಿಸಿರುವ ಮಹಿಳೆಯರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲು `ಅಭಿನಯ ಸರಸ್ವತಿ’ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿದೆ. ಈ ಪ್ರಶಸ್ತಿಯಡಿಯಲ್ಲಿ 1 ಲಕ್ಷ ರೂ. ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ ನೀಡಲಾಗುತ್ತದೆ.