ದೇವರ ಮೊರೆ ಹೋದ ಕೆಎಸ್‌ಸಿಎ; ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಹೋಮ-ಹವನ
Chinnaswamy Stadium: ಆರ್‌ಸಿಬಿ ತಂಡ ಐಪಿಎಲ್ ಚೊಚ್ಚಲ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಜೂನ್ 4ರಂದು ನಡೆದ ವಿಜಯೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿತ್ತು. ಇದಾದ ನಂತರ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಬ್ರೇಕ್ ಬಿದ್ದಿತ್ತು. ಆದರೆ, ಕ್ರೀಡಾಂಗಣದಲ್ಲಿ ಪಂದ್ಯ ನಡೆಸಲು ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿರುವ ಹಿನ್ನೆಲೆಯಲ್ಲಿ ಕೆಎಸ್‌ಸಿಎ ನೂತನ ಪದಾಧಿಕಾರಿಗಳು ವಿಶೇಷ ಪೂಜೆ ಮಾಡಿಸಿದ್ದಾರೆ.