ಚಿನ್ನಸ್ವಾಮಿ ಕ್ರೀಡಾಂಗಣದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ: ಡಿಕೆಶಿ
ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ಗೆ ನಡೆದಿದ್ದ ಚುನಾವಣೆಯನ್ನು ಗೆಲುವು ಸಾಧಿಸಿ ಅಧ್ಯಕ್ಷ ಸ್ಥಾನ ಅಲಂಕರಿಸಿರುವ ವೆಂಕಟೇಶ್ ಪ್ರಸಾದ್ ಅವರು ಬುಧವಾರ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ನಡಸುವ ಸಂಬಂಧ ಸಚಿವ ಸಂಪುಟ ಸಭೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.