ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿ: ಶ್ರೀ ಮಧುಸೂದನ ಸಾಯಿ
Sadhguru Shri Madhusudan Sai: ʼʼಉತ್ತಮ ಶಿಕ್ಷಣವನ್ನು ಪಡೆದಾಗ ಮಕ್ಕಳು ನೈತಿಕತೆಯ ಮೂಲಕ ತಮ್ಮದೇ ಆದ ಜೀವನವನ್ನು ನಡೆಸುತ್ತಾರೆ. ಇದು ವ್ಯಕ್ತಿಯನ್ನು ಮಾತ್ರವಲ್ಲದೆ, ಸಮಾಜವನ್ನು ಬದಲಾಯಿಸುತ್ತದೆʼʼ ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ಹೇಳಿದರು. ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ನಡೆಯುತ್ತಿರುವ 'ಒಂದು ಜಗತ್ತು ಒಂದು ಕುಟುಂಬ ಜಾಗತಿಕ ಸಾಂಸ್ಕೃತಿಕ ಉತ್ಸವ'ದಲ್ಲಿ ಅವರು ಮಾತನಾಡಿದರು.