ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಸ್ಟಾರ್ಟ್‌ಅಪ್‌ ಆರಂಭಿಸಲು 15 ವರ್ಷಗಳ ಬಳಿಕ ಅಮೆರಿಕದಿಂದ ಬೆಂಗಳೂರಿಗೆ ಮರಳಿದ ದಂಪತಿ

H-1B ಅನಿಶ್ಚಿತತೆಗೆ ಬೇಸತ್ತು ಬೆಂಗಳೂರು ವಾಪಸಾದ ದಂಪತಿ

Bengaluru News: 15 ವರ್ಷಗಳ ಕಾಲ ಅಮೆರಿಕದಲ್ಲಿ ವಾಸಿಸಿದ್ದ ಬೆಂಗಳೂರು ಮೂಲದ ಕಾರ್ತಿಕ್ ಮತ್ತು ಆಸ್ಥಾ ದಂಪತಿ ಗ್ರೀನ್ ಕಾರ್ಡ್ ವಿಳಂಬ, H-1B ವೀಸಾ ಅನಿಶ್ಚಿತತೆಯಿಂದ ಬೇಸತ್ತು ಭಾರತಕ್ಕೆ ಮರಳಿದ್ದಾರೆ. ಬೆಂಗಳೂರಿನಲ್ಲಿ ಬೆಳೆಯುತ್ತಿರುವ ಸ್ಟಾರ್ಟ್‌ಅಪ್ ಅವಕಾಶಗಳ ಹಿನ್ನೆಲೆಯಲ್ಲಿ ತಮ್ಮದೇ ಉದ್ಯಮ ಆರಂಭಿಸಲಿದ್ದಾರೆ.

"ತಾಯಿ ನನ್ನನ್ನು ಕಂಟ್ರೋಲ್‌ ಮಾಡುತ್ತಿದ್ದಳು"; ಕುಟುಂಬಸ್ಥರ ಕೊಲೆ ಬಗ್ಗೆ ಹಂತಕಿ ಶ್ವೇತಾ ಹೇಳಿದ್ದೇನು?

ಕುಟುಂಬಸ್ಥರ ಕೊಲೆ ಬಗ್ಗೆ ಹಂತಕಿ ಶ್ವೇತಾ ಹೇಳಿದ್ದೇನು?

ಕೆ.ಆರ್. ಪುರಂನ ಶೀಗೆಹಳ್ಳಿಯ ಸಾಯಿ ಗ್ರೀನ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಶ್ವೇತಾಳನ್ನು ತಮಿಳುನಾಡಿನ ಪುದುಚೆರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಸದ್ಯ ಆಕೆಯ ವಿಚಾರಣೆ ನಡೆಸಲಾಗುತ್ತಿದ್ದು, ಆಕೆ ಕೊಲೆ ಬಗ್ಗೆ ಹಲವು ಹೇಳಿಕೆಯನ್ನು ನೀಡಿದ್ದಾಳೆ. ಕೊಲೆಯ ನಂತರ ಶ್ವೇತಾ ಮತ್ತು ಆಕೆಯ ಬಾಯ್‌ಫ್ರೆಂಡ್ ಕೆನತ್ ಪ್ರತ್ಯೇಕವಾಗಿ ಹೋಗಿದ್ದರು.

ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ವಿಧಾನಸೌಧ ಮುಂಭಾಗದಲ್ಲೂ ವಿಜೃಂಭಣೆಯಿಂದ ಆಚರಿಸಬೇಕು: ಡಾ. ಎಸ್. ಸಂಗಮೇಶ್

ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ವಿಧಾನಸೌಧ ಮುಂಭಾಗದಲ್ಲೂ ಆಚರಿಸಬೇಕು

ಬೆಂಗಳೂರು ನಗರ ನಿರ್ಮಾತೃ, ದೂರದೃಷ್ಟಿಯ ಆಡಳಿತಗಾರ ಹಾಗೂ ಕನ್ನಡ ನಾಡಿನ ಹೆಮ್ಮೆಯ ಪ್ರತೀಕವಾಗಿರುವ ನಾಡಪ್ರಭು ಕೆಂಪೇಗೌಡರ ಕೊಡುಗೆಗಳನ್ನು ಮುಂದಿನ ಯುವ ಪೀಳಿಗೆಗೆ ಪರಿಚಯಿ ಸುವುದು ಸರ್ಕಾರದ ಕರ್ತವ್ಯವಾಗಿದೆ. ಅವರ ಆದರ್ಶಗಳು, ಆಡಳಿತ ದಕ್ಷತೆ ಹಾಗೂ ಅಭಿವೃದ್ಧಿ ಪರಿಕಲ್ಪನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಅವರ ಸ್ಮರಣಾರ್ಥ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ವಿಧಾನಸೌಧ ಮುಂಭಾಗದಲ್ಲಿ ಆಯೋಜಿಸಬೇಕು

Tumkur News: ಜಿಲ್ಲೆಯಲ್ಲಿ ಉಪಶಮನ ಆರೈಕೆ ಬೆಂಬಲಿಸಲು ತುಮಕೂರು ಜಿಲ್ಲಾಡಳಿತ ಮತ್ತು NIRAM ಸಹಯೋಗ

ಜಿಲ್ಲೆಯಲ್ಲಿ ಉಪಶಮನ ಆರೈಕೆ ಬೆಂಬಲಿಸಲು ಸಹಯೋಗ

ಸಾರ್ವಜನಿಕ ಆರೋಗ್ಯ ಮತ್ತು ಉಪಶಮನ ಆರೈಕೆಯಲ್ಲಿ ಜಾಗತಿಕವಾಗಿ ಗುರುತಿಸಲ್ಪಟ್ಟ ನಾಯಕ ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದೊಂದಿಗೆ ಕೇಂದ್ರವು ತಾಂತ್ರಿಕ ಪಾಲುದಾರಿಕೆಯನ್ನು ಹೊಂದಿದೆ. ಪ್ಯಾಲಿಯೇಟಿವ್ ಕೇರ್ ಎನ್ನುವುದು ಗಂಭೀರ, ದೀರ್ಘಕಾಲದ ಅಥವಾ ಮಾರಕ ಕಾಯಿಲೆಯಿಂದ ಬಳಲುತ್ತಿರುವ ಜನರಿಗೆ ರೋಗಲಕ್ಷಣದ ಪರಿಹಾರ, ಸೌಕರ್ಯ ಮತ್ತು ಬೆಂಬಲವನ್ನು ಒದಗಿಸಲು ಪ್ರಯತ್ನಿಸುವ ವಿಶೇಷ ಮತ್ತು ಸಮಗ್ರ ಆರೈಕೆಯ ರೂಪವಾಗಿದೆ.

ಸಚಿವ ಸತೀಶ್‌ ಜಾರಕಿಹೊಳಿ ಭಾವ ವೈ. ಮಂಜುನಾಥ್‌ ಮನೆ ಮೇಲೆ ಇಡಿ ದಾಳಿ

ಜಾರಕಿಹೊಳಿ ಸಹೋದರಿ ಪತಿ ವೈ. ಮಂಜುನಾಥ್‌ ಮನೆ ಮೇಲೆ ಇಡಿ ದಾಳಿ

ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿಗೆ ಇಡಿ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ ಅವರ ನಿವಾಸ ಸೇರಿದಂತೆ 6 ಕಡೆಗಳಲ್ಲಿ ಇಡಿ ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ವೈ.ಮಂಜುನಾಥ ಅವರು ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿಯಾಗಿದ್ದು, ಅಬಕಾರಿ ಇಲಾಖೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.

ದಾವಣಗೆರೆಯಲ್ಲಿ ಪಾಕ್‌ನೊಂದಿಗೆ ಸಂಪರ್ಕದಲ್ಲಿದ್ದ ಶಂಕಿತ ಉಗ್ರನ ಬಂಧನ

ದಾವಣಗೆರೆಯಲ್ಲಿ ಪಾಕ್‌ನೊಂದಿಗೆ ಸಂಪರ್ಕದಲ್ಲಿದ್ದ ಶಂಕಿತ ಉಗ್ರನ ಬಂಧನ

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕು ವ್ಯಾಪ್ತಿಯ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ. ಕೇವಲ 18 ದಿನಗಳ ಅಂತರದಲ್ಲಿ ಜಿಲ್ಲೆಯಲ್ಲಿ ಶಂಕಿತ ಉಗ್ರನನ್ನು ಪತ್ತೆ ಹಚ್ಚಿದ ಎರಡನೇ ಪ್ರಕರಣ ಇದಾಗಿದೆ. ಉತ್ತರ ಪ್ರದೇಶದ ಶಹಜಾನ್‌ಪುರ ಮೂಲದ ಹಾಗೂ ಹರಿಹರ ತಾಲೂಕು ಬನ್ನಿಕೋಡು ಗ್ರಾಮದಲ್ಲಿ ವಾಸವಿದ್ದ ಎನ್ನಲಾದ ಸುಹೇಲ್‌ (20) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.

ಕರಾವಳಿ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ

ಕರಾವಳಿ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ

ರಾಜ್ಯದ ಹಲವೆಡೆ ಮುಂಗಾರು ಚುರುಕುಗೊಂಡಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಮಳೆ ಅಬ್ಬರಿಸುತ್ತಿದೆ. ಮುಂದಿನ 4 ದಿನವೂ ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯ ಸೂಚನ ಇದ್ದು ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಜೂನ್‌ 25 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಚುರುಕು ಪಡೆಯಲಿದೆ.

ಅಡ್ಡಮತೀಯರ ಪಟ್ಟಿ ಇಂದೇ ನೀಡಿ: ಬಿಜೆಪಿ ವರಿಷ್ಠರ ಸೂಚನೆ

ಅಡ್ಡಮತೀಯರ ಪಟ್ಟಿ ಇಂದೇ ನೀಡಿ: ಬಿಜೆಪಿ ವರಿಷ್ಠರ ಸೂಚನೆ

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದ್ದು, ಅಡ್ಡಮತದಾನ ಮಾಡಿದ ಶಾಸಕರನ್ನು ಪತ್ತೆ ಮಾಡಲು ಇನ್ನಿಲ್ಲದ ಕಸರತ್ತು ನಡೆದಿದೆ. ಇನ್ನೊಂದೆಡೆ ಬಿಜೆಪಿ ವರಿದಿಷ್ಠರು ಸಹ ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಪ್ರತಿಪಕ್ಷ ನಾಯಕ ಆರ್.ಅಶೋಕ ಅವರನ್ನು ದೆಹಲಿಗೆ ಕರೆಯಿಸಿಕೊಂಡು ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಗಂಭೀರ ಮಾತುಕತೆ ಮಾಡಿದ್ದಾರೆ. ಅಲ್ಲದೇ ಸೂಕ್ತ ಕ್ರಮದ ಬಗ್ಗೆಯೂ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

2850 ಎಕರೆ ಭೂಸ್ವಾಧೀನ ವಿರೋಧಿಸಿ ಶತದಿನೋತ್ಸವ ಪ್ರತಿಭಟನೆ – “ಭೂಮಿ ಕಸಿದರೆ ಸರ್ಕಾರವನ್ನೇ ಕಸಗುಡಿಸುತ್ತೇವೆ” ಎಚ್ಚರಿಕೆ

ಭೂಮಿ ಕಸಿದರೆ ಸರ್ಕಾರವನ್ನೇ ಕಸಗುಡಿಸುತ್ತೇವೆ

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ನಡೆಯುತ್ತಿರುವ “ನಮ್ಮ ಭೂಮಿ–ನಮ್ಮ ಹಕ್ಕು”(Our land – our right) ಹೋರಾಟದ ಶತದಿನೋತ್ಸವದಲ್ಲಿ ನೂರಾರು ರೈತರು, ಮಹಿಳೆಯರು ಭಾಗವಹಿಸಿ ಸರ್ಕಾರದ ಭೂಸ್ವಾಧೀನ ನೀತಿಯನ್ನು ಖಂಡಿಸಿ ದರು. ಪ್ರತಿಭಟನೆಯ ವೇಳೆ ಮಹಿಳೆಯರು ಪೊರಕೆ ಪ್ರದರ್ಶಿಸಿ ತಮ್ಮ ಆಕ್ರೋಶ ಹೊರ ಹಾಕಿದ್ದು ಗಮನ ಸೆಳೆಯಿತು.

Bengaluru Murder Case: ಆಸ್ತಿ ವಿಚಾರಕ್ಕೆ ಜಗಳ; ಪುತ್ರನ ಜತೆ ಸೇರಿ ಹೆತ್ತ ತಾಯಿಯನ್ನೇ ಕೊಲೆಗೈದ ಮಗಳು!

ಬೆಂಗಳೂರಿನಲ್ಲಿ ಪುತ್ರನ ಜತೆ ಸೇರಿ ಹೆತ್ತ ತಾಯಿಯನ್ನೇ ಕೊಲೆಗೈದ ಮಗಳು!

ಬೆಂಗಳೂರಿನ ಕೆಂಗೇರಿಯ ಸುಭಾಷ್ ನಗರದಲ್ಲಿ ಈ ಘಟನೆ ನಡೆದಿದೆ. ಆಸ್ತಿ ವಿಚಾರಕ್ಕೆ ನಡೆದ ಜಗಳದ ವೇಳೆ ತನ್ನ ಮಗನ ಜತೆ ಸೇರಿ ಹೆತ್ತ ತಾಯಿಯನ್ನೇ ಮಹಿಳೆಯೊಬ್ಬಳು ಕೊಲೆ ಮಾಡಿದ್ದಾಳೆ. ಕೆಂಗೇರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಕೊಲೆ ವಿಚಾರ ಬಯಲಾಗಿದೆ. ಆರೋಪಿಗಳಾದ ತಾಯಿ ಮತ್ತು ಮಗನನ್ನು ಪೊಲೀಸರು ಬಂಧಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಕಳ್ಳಾಟ ತೆರೆದಿಟ್ಟ ಸಿಎಜಿ ವರದಿ: ಪ್ರಲ್ಹಾದ್‌ ಜೋಶಿ

ಕಾಂಗ್ರೆಸ್ ಸರ್ಕಾರದ ಕಳ್ಳಾಟ ತೆರೆದಿಟ್ಟ ಸಿಎಜಿ ವರದಿ: ಜೋಶಿ

Pralhad Joshi: ಗೃಹಲಕ್ಷ್ಮಿ ಯೋಜನೆಯಲ್ಲಿ 19,020 ಫಲಾನುಭವಿಗಳಿಗೆ ಕೇವಲ ಒಂದೇ ಒಂದು ಬ್ಯಾಂಕ್ ಖಾತೆ ಜೋಡಿಸಿ, ಜಂಟಿಯಾಗಿ ಕೋಟಿ ಕೋಟಿ ಹಣ ವರ್ಗಾವಣೆ ಮಾಡಿರುವುದು ಕಾಂಗ್ರೆಸ್ ಸರ್ಕಾರದ ದುರಾಡಳಿತದ ಪರಮಾವಧಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

Shidlaghatta News: ಬಿಎಲ್‌ಒಗಳ ಕಾರ್ಯವೇ ಪ್ರಜಾಪ್ರಭುತ್ವದ ಭದ್ರ ಬುನಾದಿ: ರಾಜೀವ್ ಗೌಡ

ಬಿಎಲ್‌ಒಗಳ ಕಾರ್ಯವೇ ಪ್ರಜಾಪ್ರಭುತ್ವದ ಭದ್ರ ಬುನಾದಿ: ರಾಜೀವ್ ಗೌಡ

ಬಿಎಲ್‌ಒ-1 ಮತ್ತು ಬಿಎಲ್‌ಒ-2 ಪರಸ್ಪರ ಸಹಕಾರ, ಸಮನ್ವಯ ಮತ್ತು ತಂಡದ ಮನೋಭಾವ ದೊಂದಿಗೆ ಕಾರ್ಯನಿರ್ವಹಿಸಿದಾಗ ಮಾತ್ರ ಮತದಾರರ ಪಟ್ಟಿಯಲ್ಲಿ ಪಾರದರ್ಶಕತೆ ಮತ್ತು ನಿಖರತೆ ಕಾಪಾಡಲು ಸಾಧ್ಯವಾಗುತ್ತದೆ. ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಮತದಾರರಿಗೆ ಅಗತ್ಯ ಸೇವೆಗಳನ್ನು ಸಮಯಕ್ಕೆ ತಲುಪಿಸಲು ಆದ್ಯತೆ ನೀಡಲಾಗುವುದು

ಬಿಡದಿ ಟೌನ್‌ಶಿಪ್ ವಿರೋಧದ ಹಿಂದೆ ಜೆಡಿಎಸ್ ರಾಜಕೀಯ ಹಿತಾಸಕ್ತಿಯಿದೆ: ಎಂ.ಬಿ. ಪಾಟೀಲ್‌ ಆರೋಪ

ಬಿಡದಿ ಟೌನ್‌ಶಿಪ್ ವಿರೋಧದ ಹಿಂದೆ ಜೆಡಿಎಸ್ ರಾಜಕೀಯ ಹಿತಾಸಕ್ತಿಯಿದೆ: ಎಂಬಿಪಿ

MB Patil: ವಿಜಯಪುರದಲ್ಲಿ ಬಿಡದಿ ಟೌನ್‌ಶಿಪ್ ವಿಚಾರ ಕುರಿತು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರಸ್ವಾಮಿ ಅವರಿಂದಲೇ ಬಿಡದಿ ಟೌನ್‌ಶಿಪ್ ಘೋಷಣೆಯಾಗಿತ್ತು. ಅವರು ಆಗಲೇ ನೋಟಿಫಿಕೇಷನ್ ಕೈಬಿಡಬೇಕಿತ್ತು. ಆದರೆ ಆಗ ಏನೂ ಮಾಡದೇ ಈಗ ಹೋರಾಟ ಮಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.

Gudibande News: ವಿದ್ಯುತ್ ಖಾಸಗೀಕರಣ ವಿರೋಧಿಸಿ ಗುಡಿಬಂಡೆಯಲ್ಲಿ ರೈತ ಸಂಘದ ಪ್ರತಿಭಟನೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಗುಡಿಬಂಡೆಯಲ್ಲಿ ರೈತ ಸಂಘದ ಪ್ರತಿಭಟನೆ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಕ್ರಮ ಹಾಗೂ ಟಾಟಾ ಪವರ್ ಕಂಪನಿಗೆ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ನೀಡುವ ಸರ್ಕಾರದ ನಿರ್ಧಾರ ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಕೆ.ಪಿ.ಆರ್.ಎಸ್) ನೇತೃತ್ವದಲ್ಲಿ ಗುಡಿಬಂಡೆ ಪಟ್ಟಣದ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಆರೆಸ್ಸೆಸ್ ಟೀಕಿಸುವುದು ಬಿಟ್ಟು ನೀವೇನು ಮಾಡಿದ್ದೀರಿ?: ಪ್ರಿಯಾಂಕ್‌ ಖರ್ಗೆ ವಿರುದ್ಧ ಶೋಭಾ ಕರಂದ್ಲಾಜೆ ಟೀಕೆ

ಆರೆಸ್ಸೆಸ್ ಟೀಕಿಸುವುದು ಬಿಟ್ಟು ನೀವೇನು ಮಾಡಿದ್ದೀರಿ?: ಕರಂದ್ಲಾಜೆ

Shobha Karandlaje: ಆರೆಸ್ಸೆಸ್ ಅನ್ನು ಟೀಕಿಸುವುದನ್ನು ಬಿಟ್ಟು ನೀವೇನು ಮಾಡಿದ್ದೀರೆಂದು ಸ್ಪಷ್ಟಪಡಿಸಿ ಎಂದು ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Gauribidanur News: ಐದು ಲಕ್ಷ ಸಸಿಗಳನ್ನು ನೆಡುವ ಮಹತ್ವಾಕಾಂಕ್ಷಿ ಯೋಜನೆಗೆ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ಚಾಲನೆ

ಐದು ಲಕ್ಷ ಸಸಿಗಳನ್ನು ನೆಡುವ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ

ಪರಿಸರ ಸಂರಕ್ಷಣೆಯ ಮಹತ್ವ ಸಾರುವ ಮತ್ತು ಹಸಿರು ಹೊದಿಕೆ ಹೆಚ್ಚಿಸುವ ಉದ್ದೇಶದಿಂದ, ಜಿಲ್ಲಾ ನ್ಯಾಯಾಂಗದ ನೇತೃತ್ವದಲ್ಲಿ ಕೈಗೊಂಡಿರುವ ಐದು ಲಕ್ಷ ಸಸಿಗಳನ್ನು ನೆಡುವ ಮಹತ್ವಾಕಾಂಕ್ಷಿ ಯೋಜನೆಗೆ ತಾಲ್ಲೂಕಿನ ಶ್ರೀ ಕ್ಷೇತ್ರ ಮುದುಗಾನುಕಂಟೆ ಗಂಗಾಭಾಗಿರಥಿ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ಟಿ.ಪಿ.ರಾಮಲಿಂಗೇಗೌಡ ಚಾಲನೆ ನೀಡಿದರು.

Bengaluru Power Cut: ನಾಳೆ, ನಾಡಿದ್ದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ನಾಳೆ, ನಾಡಿದ್ದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Bengaluru Power Cut: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11ಕೆ.ವಿ ಪದ್ಮನಾಭನಗರ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜೂನ್‌ 24ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

Padma Awards 2026: ಡಾ. ಪ್ರಭಾಕರ್ ಕೋರೆ ಸೇರಿ ರಾಜ್ಯದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ರಾಜ್ಯದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ (ಜೂನ್‌ 23) ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಐವರು ಸೇರಿ ಒಟ್ಟು 65 ಮಂದಿಗೆ 2ನೇ ಹಂತದ 2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಮತ್ತಿತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ಬಾರಿ ಒಟ್ಟು 131 ಮಂದಿಗೆ ಪದ್ಮ ಪ್ರಶಸ್ತಿ ಘೋಷಿಸಲಾಗಿತ್ತು. ಈ ಪೈಕಿ ಮೊದಲ ಹಂತದಲ್ಲಿ ಮೇ 25ರಂದು 66 ಸಾಧಕರಿಗೆ ಪ್ರಶಸ್ತಿ ವಿತರಿಸಲಾಗಿತ್ತು.

BESCOM Privatization: ಬೆಸ್ಕಾಂ ಖಾಸಗೀಕರಣದ ವಿರುದ್ದ ಬೃಹತ್ ಪ್ರತಿಭಟನೆ

ಬೆಸ್ಕಾಂ ಖಾಸಗೀಕರಣದ ವಿರುದ್ದ ಬೃಹತ್ ಪ್ರತಿಭಟನೆ

ರಾಜ್ಯ ಸರ್ಕಾರವು ವಿದ್ಯುತ್ ಸರಬರಾಜು ಕಂಪನಿಗಳನ್ನು ಖಾಸಗೀಕರಣ ಗೊಳಿಸಲು ಮುಂದಾಗಿರುವ ನಿರ್ಧಾರವನ್ನು ವಿರೋಧಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾಗೂ ಇನ್ನಿತರೆ ಸಂಘಟನೆಗಳ ನೇತೃತ್ವದಲ್ಲಿ ನೂರಾರು ಮಂದಿ ರೈತರು, ಬೆಸ್ಕಾಂ ಇಲಾಖೆ ನೌಕರರು ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು

Bengaluru Metro: ಕಬ್ಬನ್‌ ಪಾರ್ಕ್ ಮೆಟ್ರೋ ಸ್ಟೇಷನ್‌ನಲ್ಲಿ ಕೆಟ್ಟು ನಿಂತ ಮೆಟ್ರೋ ರೈಲು; ಪ್ರಯಾಣಿಕರ ಪರದಾಟ

ಮೆಟ್ರೋ ರೈಲಿನಲ್ಲಿ ತಾಂತ್ರಿಕ ಸಮಸ್ಯೆ; ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರಿನ ನೇರಳೆ ಮಾರ್ಗದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಸಂಚರಿಸುತ್ತಿದ್ದ ಒಂದು ರೈಲಿನಲ್ಲಿ ತಾಂತ್ರಿಕ ದೋಷ ಕಂಡುಬಂದಿರುವುದರಿಂದ ರೈಲುಗಳ ಸಂಚಾರದಲ್ಲಿ ವಿಳಂಬ ಉಂಟಾಗಿದೆ. ತಾಂತ್ರಿಕ ದೋಷವನ್ನು ಸರಿಪಡಿಸಲು ಕಾರ್ಯಾಚರಣೆ ಹಾಗೂ ನಿರ್ವಹಣಾ ತಂಡಗಳು ಕಾರ್ಯನಿರ್ವಹಿಸುತ್ತಿವೆ.

World Motorcycle Day: ಒಟ್ಟಾಗಿ ಸವಾರಿ ಮಾಡಿ ಸಂಭ್ರಮಿಸಿದ 2 ಸಾವಿರಕ್ಕೂ ಹೆಚ್ಚು ಜಾವಾ, ಯೆಜ್ಡಿ, ಬಿಎಸ್‌ಎ ರೈಡರ್‌ಗಳು

ಒಟ್ಟಾಗಿ ಸವಾರಿ ಮಾಡಿ ಸಂಭ್ರಮಿಸಿದ 2 ಸಾವಿರಕ್ಕೂ ಹೆಚ್ಚು ರೈಡರ್‌ಗಳು

ಈ ಬೃಹತ್ ಸಂಭ್ರಮದಲ್ಲಿ ಭಾರತದ 19 ರಾಜ್ಯಗಳ 59 ನಗರಗಳಿಂದ ಬರೋಬ್ಬರಿ 2,000ಕ್ಕೂ ಹೆಚ್ಚು ಬೈಕ್ ರೈಡರ್‌ ಉತ್ಸಾಹಿಗಳು ಪಾಲ್ಗೊಂಡಿದ್ದರು. ಯುವಕರಿಂದ ಹಿಡಿದು ಹಿರಿಯರವರೆಗೆ, ತಾವು ಬಳಸುವ ಬ್ರ್ಯಾಂಡ್ ಮತ್ತು ಹಿನ್ನೆಲೆಯ ಭೇದವನ್ನು ಮರೆತು, ಮೋಟಾರ್‌ಸೈಕ್ಲಿಂಗ್ ಮೇಲಿನ ತಮ್ಮ ಪ್ರೀತಿ ಮತ್ತು ಒಗ್ಗಟ್ಟನ್ನು ಇವರು ಈ ಸಂದರ್ಭದಲ್ಲಿ ಪ್ರದರ್ಶಿಸಿದರು.

Chinthamani News: ಜುಲೈ 27ರಿಂದ 29ರ ತನಕ ಕೈವಾರದಲ್ಲಿ ಗುರುಪೂಜಾ-ಸಂಗೀತೋತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ

ಜುಲೈ 27ರಿಂದ 29ರ ತನಕ ಕೈವಾರದಲ್ಲಿ ಗುರುಪೂಜಾ-ಸಂಗೀತೋತ್ಸವ

ಈ ಬಾರಿ ಕೈವಾರ ತಾತಯ್ಯನವರ 300ನೇ ಜಯಂತೋತ್ಸವದ ಸಂದರ್ಭದಲ್ಲಿ ಗುರುಪೂಜಾ ಮಹೋ ತ್ಸವವನ್ನು ಶ್ರದ್ಧಾಭಕ್ತಿಗಳಿಂದ ಆಚರಿಸಲಾಗುವುದು. ಕೈವಾರದ ಸಂಗೀತೋತ್ಸವವು ಸಂಗೀತ ಕ್ಷೇತ್ರದಲ್ಲಿ ಮಹತ್ವವನ್ನು ಪಡೆದುಕೊಂಡಿದೆ. ಗುರುಪೂಜಾ - ಸಂಗೀತ ಮಹೋತ್ಸವಗಳು ಸುಮಾರು ವರ್ಷ ಗಳಿಂದಲೂ ಕೈವಾರದಲ್ಲಿ ವಿಜೃಂಭಣೆಯಿಂದ ನಡೆದುಕೊಂಡು ಬರುತ್ತಿದೆ.

BC Patil: ನಾಲಿಗೆ ಬಿಗಿ ಹಿಡಿದು ಮಾತನಾಡಿ, ನಿಮ್ಮಂತವರಿಂದಲೇ ಬಿಜೆಪಿ ಹಾಳಾಗಿದೆ: ಈಶ್ವರಪ್ಪ ವಿರುದ್ಧ ಬಿ.ಸಿ.ಪಾಟೀಲ್‌ ಕಿಡಿ

ನಾಲಿಗೆ ಬಿಗಿ ಹಿಡಿದು ಮಾತನಾಡಿ: ಈಶ್ವರಪ್ಪ ವಿರುದ್ಧ ಬಿ.ಸಿ.ಪಾಟೀಲ್‌ ಕಿಡಿ

ಇತ್ತೀಚಿಗೆ ಎಂಎಲ್‌ಸಿ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ಪ್ರತಿಕ್ರಿಯಿಸಿದ್ದ ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ ಅವರು, ಈ ಹಿಂದೆ 17 ಜನ ಕಾಂಗ್ರೆಸ್‌ ಶಾಸಕರನ್ನು ದುಡ್ಡು ಕೊಟ್ಟು ನಮ್ಮ ಪಕ್ಷಕ್ಕೆ ಕರೆದುಕೊಂಡಿದ್ದೆವು. ಅದರಿಂದ ಬಿಜೆಪಿ ಅಧಿಕಾರಕ್ಕೆ ಬಂತು. ನಂತರ ಪಕ್ಷ ಅವರಿಂದ ಹಾಳಾಗಿ ಹೋಯ್ತು ಎಂದು ಹೇಳಿದ್ದರು. ಇದಕ್ಕೆ ಮಾಜಿ ಸಚಿವ ಬಿ.ಸಿ.ಪಾಟೀಲ್‌ ಪ್ರತಿಕ್ರಿಯಿಸಿದ್ದಾರೆ.

Dr.M.C.Sudhakar: ಡಾ.ಎಂ.ಸಿ.ಸುಧಾಕರ್ ಅವರಿಗೆ ಸಚಿವ ಸ್ಥಾನಕ್ಕೆ ಒತ್ತಾಯ: ಕನಂಪಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಡಾ.ಎಂ.ಸಿ.ಸುಧಾಕರ್ ಅವರಿಗೆ ಸಚಿವ ಸ್ಥಾನಕ್ಕೆ ಒತ್ತಾಯ

ಮಾಧ್ಯಮಗಳೊಂದಿಗೆ ಮಾತನಾಡಿದ ಚಿಮುಲ್ ನಿರ್ದೇಶಕ ಊಲವಾಡಿ ಅಶ್ವಥ್‌ ನಾರಾಯಣ ಬಾಬು ಅವರು, ಡಾ.ಎಂ.ಸಿ.ಸುಧಾಕರ್ ಅವರು ಈ ಹಿಂದೆ ಉನ್ನತ ಶಿಕ್ಷಣ ಸಚಿವರಾಗಿ ಇಡೀ ರಾಜ್ಯದಲ್ಲೇ ಹಲವು ಮಹತ್ವದ ಬದಲಾವಣೆಗಳನ್ನು ತಂದಿದ್ದಾರೆ. ಅವರ ಅವಧಿಯಲ್ಲಿ ಅತ್ಯಂತ ಜವಾಬ್ದಾರಿಯುತವಾಗಿ ಮತ್ತು ಯಶಸ್ವಿಯಾಗಿ ಇಲಾಖೆಯನ್ನು ಮುನ್ನಡೆಸಿದ್ದಾರೆ.

Loading...