ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
DK Shivakumar: ರಾಜ್ಯದ ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಕಡ್ಡಾಯ: ಡಿಸಿಎಂ ಡಿಕೆಶಿ

ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಕಡ್ಡಾಯ: ಡಿಕೆಶಿ

DK Shivakumar: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು ಕಡ್ಡಾಯವಾಗಿ ರಚನೆ ಮಾಡಲು ಆದೇಶ ಹೊರಡಿಸಿ. ಈ ಸಂಘಗಳಿಂದ ಸರ್ಕಾರಿ ಶಾಲೆಗಳಿಗೆ ಶಕ್ತಿ ತುಂಬುವ ಕೆಲಸ ಆಗುತ್ತದೆ. ಇದಕ್ಕೆ ಅಗತ್ಯ ಮಾರ್ಗದರ್ಶನ ನೀಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸಲಹೆ ನೀಡಿದ್ದಾರೆ.

Sri Vajreshwari Combines: ಶ್ರೀ ವಜ್ರೇಶ್ವರಿ ಕಂಬೈನ್ಸ್‌ಗೆ 50 ವರ್ಷ; ವಿಶೇಷ ವಿಡಿಯೋ ಹಂಚಿಕೊಂಡ ಅಶ್ವಿನಿ ಪುನೀತ್‌ ರಾಜ್‌ಕುಮಾರ್

ಶ್ರೀ ವಜ್ರೇಶ್ವರಿ ಕಂಬೈನ್ಸ್ ಸಂಸ್ಥೆಯ ಭವ್ಯ ಪರಂಪರೆಗೆ 50 ವರ್ಷ

Sri Vajreshwari Combines: ಪಾರ್ವತಮ್ಮ ರಾಜ್‌ಕುಮಾರ್ ಅವರ ಕನಸಿನ ಕೂಸು ಶ್ರೀ ವಜ್ರೇಶ್ವರಿ ಕಂಬೈನ್ಸ್ ಸಂಸ್ಥೆ 50 ವರ್ಷ ಪೂರೈಸಿರುವ ಸಂದರ್ಭದಲ್ಲಿ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ವಿಶೇಷ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Electric Shock: ಯಾದಗಿರಿಯಲ್ಲಿ ದಾರುಣ ಘಟನೆ; ವಿದ್ಯುತ್‌ ತಗುಲಿ ಮೂವರು ರೈತರ ದುರ್ಮರಣ

ಯಾದಗಿರಿಯಲ್ಲಿ ದಾರುಣ ಘಟನೆ; ವಿದ್ಯುತ್‌ ತಗುಲಿ ಮೂವರು ರೈತರ ದುರ್ಮರಣ

Yadgir news: ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ತಮ್ಮ ಮನೆಗೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಜೆಸ್ಕಾಂ ಹಾಗು ಪೊಲೀಸ್ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.

Karnataka Rains: ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್; ಭರ್ಜರಿ ಮಳೆ ನಿರೀಕ್ಷೆ!

ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

CM Siddaramaiah: ಫೇಸ್‌ಬುಕ್‌ ಆಟೋ ಟ್ರಾನ್ಸ್‌ಲೇಷನ್‌ ಎಡವಟ್ಟು; ಮೆಟಾದವರು ತಮ್ಮ ತಪ್ಪಿಗೆ ಕ್ಷಮೆ ಕೇಳಿದ್ದಾರೆ ಎಂದ ಸಿಎಂ

ಮೆಟಾದವರು ತಮ್ಮ ತಪ್ಪಿಗೆ ಕ್ಷಮೆ ಕೇಳಿದ್ದಾರೆ ಎಂದ ಸಿಎಂ

Facebook’s auto-translation: ನಮ್ಮ ಕಚೇರಿ ಕನ್ನಡದಲ್ಲಿ ಮಾಡಿದ್ದ ಮೂಲ ಪೋಸ್ಟ್‌ ಕೆಲವರ ನ್ಯೂಸ್ ಫೀಡ್‌ನಲ್ಲಿ ಇಂಗ್ಲಿಷ್‌ಗೆ ಭಾಷಾಂತರಗೊಂಡು ಕಾಣಿಸಿಕೊಂಡಿದೆ. ಈ ಭಾಷಾಂತರವೇ ದೋಷಪೂರ್ಣವಾಗಿದೆ. ಮೆಟಾದವರು ತಮ್ಮ ತಪ್ಪಿಗೆ ಕ್ಷಮೆ ಕೇಳಿ, ದೋಷವನ್ನು ಸರಿಪಡಿಸುವುದಾಗಿ ಇ-ಮೇಲ್‌ ಮೂಲಕ ತಿಳಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Heart attack: ಕೊಪ್ಪಳದಲ್ಲಿ ಹೃದಯಾಘಾತಕ್ಕೆ ಯೋಗ ಶಿಕ್ಷಕ ಬಲಿ

ಕೊಪ್ಪಳದಲ್ಲಿ ಹೃದಯಾಘಾತಕ್ಕೆ ಯೋಗ ಶಿಕ್ಷಕ ಬಲಿ

Koppal News: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಬೆನಕಲ್‌ನಲ್ಲಿ ಹೃದಯಾಘಾತದಿಂದ ಯೋಗ ಶಿಕ್ಷಕ ಮೃಪ್ಟಟಿದ್ದಾರೆ. ಶುಕ್ರವಾರ ಬೆಳಗಿನ ಜಾವ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

Russian woman rescued: ರಷ್ಯಾ ಮಹಿಳೆ ಮತ್ತು ಮಕ್ಕಳನ್ನು ನೋಡಲು ತುಮಕೂರಿಗೆ ಬಂದ ಪತಿಗೆ ನಿರಾಸೆ

ರಷ್ಯಾ ಮಹಿಳೆ ಮತ್ತು ಮಕ್ಕಳನ್ನು ನೋಡಲು ತುಮಕೂರಿಗೆ ಬಂದ ಪತಿಗೆ ನಿರಾಸೆ

Russian woman rescued: ರಷ್ಯಾ ಮಹಿಳೆ ಹಾಗೂ ಇಬ್ಬರು ಮಕ್ಕಳು ಸದ್ಯ ತುಮಕೂರಿನ ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿದ್ದಾರೆ. ಪತ್ನಿ ನೀನಾ ಕುಟೀನಾ ಹಾಗೂ ಮಕ್ಕಳನ್ನು ಭೇಟಿಯಾಗಲು ಪತಿ ಡ್ರೋರ್ ಗೋಲ್ಡ್‌ಸ್ಟೆನ್‌ಗೆ ಅಧಿಕಾರಿಗಳು ಅವಕಾಶ ನೀಡಿಲ್ಲ. ಮೇಲಧಿಕಾರಿಗಳ ಅನುಮತಿ ಪಡೆದು ಬರುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

Child Death: ಜೋಕಾಲಿಯಲ್ಲಿ ಆಡುವಾಗ ಶಾಲು ಕುತ್ತಿಗೆಗೆ ಸುತ್ತಿಕೊಂಡು ಮಗು ಸಾವು

ಜೋಕಾಲಿಯಲ್ಲಿ ಆಡುವಾಗ ಶಾಲು ಕುತ್ತಿಗೆಗೆ ಸುತ್ತಿಕೊಂಡು ಮಗು ಸಾವು

Child Death: ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಮನೆಯಲ್ಲಿ ಜೋಕಾಲಿ ಆಟ ಆಡುತ್ತಿದ್ದಳು. ಆಡುವಾಗ ಪ್ರಣಿತಾ ಕುತ್ತಿಗೆಯಲ್ಲಿದ್ದ ವೇಲ್‌ ಜೋಕಾಲಿಗೆ ಸಿಲುಕಿ ತೀವ್ರವಾಗಿ ಅಸ್ವಸ್ಥಗೊಂಡಿದ್ದಳು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ತೆಗೆದುಕೊಂಡು ಹೋಗುವಾಗಲೇ ಮಾರ್ಗ ಮಧ್ಯೆ ಮೃತಪಟ್ಟಿದ್ದಾಳೆ.

Anchor Anushree: ಆ್ಯಂಕರ್ ಅನುಶ್ರೀ ಕೈ ಹಿಡಿಯುವ ಹುಡುಗನ ಫೋಟೋ ವೈರಲ್

ಆ್ಯಂಕರ್ ಅನುಶ್ರೀ ಕೈ ಹಿಡಿಯುವ ಹುಡುಗನ ಫೋಟೋ ವೈರಲ್

Anchor Anushree: ಕೊಡಗು ಮೂಲದ ರೋಶನ್‌ ಜತೆ ಅನುಶ್ರೀ ಸಪ್ತಪದಿ ತುಳಿಯಲಿದ್ದಾರೆ. ಈಗಾಗಲೇ ಎರಡು ಕುಟುಂಬಸ್ಥರು ಮದುವೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ. ಅನುಶ್ರೀ ಅವರ ಮನೆಯ ಗೃಹ ಪ್ರವೇಶದಲ್ಲಿ ರೋಶನ್‌ ಭಾಗಿಯಾಗಿದ್ದರು ಎನ್ನಲಾಗಿದೆ.‌ ಸದ್ಯ ಅವರ ಪೋಟೋ ವೈರಲ್‌ ಆಗುತ್ತಿದೆ.

Road Accident: ರಸ್ತೆ ಬದಿ ನಿಂತಿದ್ದವರಿಗೆ ಅಪ್ಪಳಿಸಿದ ಬಿಎಂಟಿಸಿ, ಒಬ್ಬ ಸಾವು, ನಾಲ್ವರಿಗೆ ಗಾಯ

ರಸ್ತೆ ಬದಿ ನಿಂತವರಿಗೆ ಅಪ್ಪಳಿಸಿದ ಬಿಎಂಟಿಸಿ, ಒಬ್ಬ ಸಾವು, ನಾಲ್ವರಿಗೆ ಗಾಯ

Road Accident: ಪೀಣ್ಯ 2ನೇ ಹಂತದಲ್ಲಿ ಎಲೆಕ್ಟ್ರಿಕ್ ಬಿಎಂಟಿಸಿ ಬಸ್ ಹರಿದು ಮಗು ಸೇರಿದಂತೆ ಒಟ್ಟು ಐವರಿಗೆ ಗಾಯಗಳಾಗಿದೆ. ಪೀಣ್ಯ 2ನೇ ಹಂತದಲ್ಲಿ 8:45ಕ್ಕೆ ಈ ಘಟನೆ ನಡೆದಿದ್ದು ಬೀದಿಬದಿಯ ಕ್ಯಾಂಟೀನ್‌ಗೆ ರಭಸದಿಂದ ಬಂದ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಫ್ಲಿಪ್ ಕಾರ್ಟ್ ನಿಂದ `ಈಗ ಜಾಹೀರಾತು ನೀಡಿ, ನಂತರ ಪಾವತಿಸಿ’ ಯೋಜನೆ

ಫ್ಲಿಪ್ ಕಾರ್ಟ್ ನಿಂದ `ಈಗ ಜಾಹೀರಾತು ನೀಡಿ, ನಂತರ ಪಾವತಿಸಿ’ ಯೋಜನೆ

ಪ್ ಕಾರ್ಟ್ ಜಾಹೀರಾತು ಪೋರ್ಟಲ್ ಮೂಲಕ ಪ್ರಚಾರದ ಕಾರ್ಯಕ್ಷಮತೆ ಮತ್ತು ಬಿಲ್ಲಿಂಗ್ ಗೆ ನೈಜ-ಸಮಯದ ಗೋಚರತೆಯಿಂದ ಮಾರಾಟಗಾರರು ಉತ್ತಮ ಪ್ರಯೋಜನವನ್ನು ಪಡೆಯುತ್ತಾರೆ. ಇದು ಪ್ರಾಡಕ್ಟ್ ಲೀಸ್ಟಿಂಗ್ ಆ್ಯಡ್ಸ್ (PLA), ಪ್ರಾಡಕ್ಟ್ ಕಂಟೆಕ್ಚುವಲ್ ಆ್ಯಡ್ಸ್(PCA) ಮತ್ತು ಶಿಫಾರಸು ಮಾಡ ಲಾದ ಪ್ರಚಾರ ಪ್ರಕಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ಸ್ವರೂಪಗಳನ್ನು ಬೆಂಬಲಿಸುತ್ತದೆ.

Actor Darshan: ಥೈಲ್ಯಾಂಡ್‌ನಲ್ಲಿ ದರ್ಶನ್‌ ಜಾಲಿ ಪಾರ್ಟಿ, ಯಾಚ್‌ ರೈಡ್‌, ವಿಡಿಯೋ ಇಲ್ಲಿದೆ

ಥೈಲ್ಯಾಂಡ್‌ನಲ್ಲಿ ದರ್ಶನ್‌ ಜಾಲಿ ಪಾರ್ಟಿ, ಯಾಚ್‌ ರೈಡ್‌, ವಿಡಿಯೋ ಇಲ್ಲಿದೆ

Actor Darshan: ಬೆನ್ನು ನೋವಿಗೆ ಸರ್ಜರಿ ಮಾಡಿಸಬೇಕು ಎಂಬ ಕಾರಣ ನೀಡಿ ಕರ್ನಾಟಕ ಹೈಕೋರ್ಟ್‌ನಿಂದ ದರ್ಶನ್‌ ಜಾಮೀನು ಪಡೆದಿದ್ದರು. ನಂತರ ಡೆವಿಲ್‌ ಚಿತ್ರೀಕರಣಕ್ಕಾಗಿ, ವಿದೇಶಕ್ಕೆ ಹೋಗಲು ಕೋರ್ಟ್‌ನಿಂದ ವಿನಾಯಿತಿ ಪಡೆದುಕೊಂಡಿದ್ದರು. ಸ್ವಿಡ್ಜರ್‌ಲ್ಯಾಂಡ್‌ಗೆ ಚಿತ್ರೀಕರಣಕ್ಕಾಗಿ ಹೋಗಬೇಕಿತ್ತು. ಆದರೆ ಸ್ವಿಸ್‌ ಸರಕಾರ ಕ್ರಿಮಿನಲ್‌ ಹಿನ್ನೆಲೆಯ ಕಾರಣ ದರ್ಶನ್‌ಗೆ ವೀಸಾ ನಿರಾಕರಿಸಿತ್ತು.

ಪ್ರವಾಹದಿಂದ ಹಾನಿಗೊಳಗಾದ ವಾಹನ ಮಾಲೀಕರಿಗೆ ನೆರವು ಒದಗಿಸುವ ಹೊಸ ಯೋಜನೆ ಘೋಷಿಸಿದ ನಿಸ್ಸಾನ್ ಮೋಟಾರ್ ಇಂಡಿಯಾ

ಹೊಸ ಯೋಜನೆ ಘೋಷಿಸಿದ ನಿಸ್ಸಾನ್ ಮೋಟಾರ್ ಇಂಡಿಯಾ

ಪ್ರವಾಹದಿಂದ ವಾಹನ ಹಾನಿಗೊಳಗಾದ ಗ್ರಾಹಕರಿಗೆ ನೆರವಾಗಲು ಸಹಾಯವಾಣಿ ಸ್ಥಾಪಿಸಲಾಗಿದೆ. ಅಗತ್ಯವಿರುವ ಗ್ರಾಹಕರಿಗೆ ಉಚಿತ ಟೋಯಿಂಗ್ ಸೇವೆ ಒದಗಿಸ ಲಾಗುತ್ತಿದ್ದು, ವರ್ಕ್ ಶಾಪ್ ಸಮಯ ವಿಸ್ತರಿಸಲಾಗಿದೆ. ದುರಸ್ತಿ ಮೇಲೆ ರಿಯಾಯಿತಿ ನೀಡಲಾಗುತ್ತಿದೆ ಮತ್ತು ಇನ್ಶೂರೆನ್ಸ್ ಕ್ಲೈಮ್‌ ಮಾಡಲು ನೆರವು ಒದಗಿಸಲಾಗುತ್ತಿದೆ.

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 18th July 2025: ಚಿನ್ನದ ದರದಲ್ಲಿ ಇಂದು (ಜು. 18) ಮತ್ತೆ ಏರಿಕೆ ಕಂಡು ಬಂದಿದ್ದು, ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 5 ರೂ. ಇಳಿಕೆಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,110ರೂ. ಕ್ಕೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನ 5 ರೂ. ಏರಿಕೆ ಕಂಡು, 9,938 ರೂ.ಗೆ ಬಂದು ಮುಟ್ಟಿದೆ.

Bomb Threat: ಬೆಂಗಳೂರಿನ 40 ಶಾಲೆಗಳಿಗೆ ಬಾಂಬ್‌ ಬೆದರಿಕೆ

ಬೆಂಗಳೂರಿನ 40 ಶಾಲೆಗಳಿಗೆ ಬಾಂಬ್‌ ಬೆದರಿಕೆ

Bomb Threat: ಬೆಂಗಳೂರು ನಗರದ ಆರ್ ಆರ್ ನಗರ, ಕೆಂಗೇರಿ ಸೇರಿದಂತೆ ಒಟ್ಟು 40 ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ವಿಷಯ ತಿಳಿದ ತಕ್ಷಣ ಎಲ್ಲ ಶಾಲೆಗಳಿಗೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

CM Siddaramaiah: ತಪ್ಪು ಕನ್ನಡ ಅನುವಾದ, ಸಿಎಂ ಸಿದ್ದರಾಮಯ್ಯ ಕ್ಷಮೆ ಯಾಚಿಸಿದ ಮೆಟಾ

ತಪ್ಪು ಕನ್ನಡ ಅನುವಾದ, ಸಿಎಂ ಕ್ಷಮೆ ಯಾಚಿಸಿದ ಮೆಟಾ

CM Siddaramaiah: ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಂತಹ ಮೆಟಾ ಪ್ಲಾಟ್‌ಫಾರ್ಮ್‌ಗಳಲ್ಲಿ ಕನ್ನಡ ವಿಷಯದ ದೋಷಪೂರಿತ ಸ್ವಯಂ ಅನುವಾದದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ, ಇದು ಸತ್ಯಗಳನ್ನು ವಿರೂಪಗೊಳಿಸಲು ಮತ್ತು ಬಳಕೆದಾರರನ್ನು ದಾರಿತಪ್ಪಿಸಲು ಕಾರಣವಾಗುತ್ತಿದೆ ಎಂದು ಹೇಳಿದ್ದರು.

Anganwadi: ಅಕ್ಟೋಬರ್‌ನಿಂದ ರಾಜ್ಯದ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭ

ಅಕ್ಟೋಬರ್‌ನಿಂದ ರಾಜ್ಯದ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭ

Anganwadi: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಗುರುವಾರ ಬೆಂಗಳೂರಿನಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ತೆರೆಯಲು ಅಗತ್ಯವಿರುವ ಕ್ರಮಗಳ ಬಗ್ಗೆ ಚರ್ಚಿಸಿದರು.

A Khata: ಬೆಂಗಳೂರಿಗರಿಗೆ ಸಿಹಿ ಸುದ್ದಿ: ಬಿ-ಖಾತಾಗಳಿಗೆ ಎ-ಖಾತಾ ಕಾನೂನು ಮಾನ್ಯತೆ ಭಾಗ್ಯ

ಬೆಂಗಳೂರಿಗೆ ಸಿಹಿ ಸುದ್ದಿ: ಬಿ ಖಾತಾಗಳಿಗೆ ಎ ಖಾತಾ ಕಾನೂನು ಮಾನ್ಯತೆ ಭಾಗ್ಯ

A Khata: ಕ್ರಮಬದ್ಧವಲ್ಲದ ನಿವೇಶನ ಅಥವಾ ಆಸ್ತಿಗಳಿಗೆ ಬಿಬಿಎಂಪಿಯು 2009 ರಿಂದ ಈಚೆಗೆ ಬಿ-ಖಾತಾ ನೀಡುತ್ತಿತ್ತು. ಬಿ-ಖಾತಾ ನೀಡುವ ಪ್ರಕ್ರಿಯೆಯನ್ನು 2024ರ ಸೆ.30 ರಂದು ಸ್ಥಗಿತಗೊಳಿಸಲಾಗಿತ್ತು. ಹೀಗಾಗಿ 2009 ರಿಂದ 2024ರ ಸೆ.30ರ ನಡುವೆ ನೀಡಿರುವ ಬಿ-ಖಾತಾ ಆಸ್ತಿ ಸಮಸ್ಯೆ ಪರಿಹರಿಸಲು ಸುದೀರ್ಘ ಚರ್ಚೆ ನಡೆಸಲಾಯಿತು.

Prabhu Chauhan: ಮದುವೆಯಾಗುವುದಾಗಿ ನಂಬಿಸಿ ವಂಚನೆ, ಯುವತಿಯಿಂದ ಬಿಜೆಪಿ ಶಾಸಕನ ಪುತ್ರನ ಮೇಲೆ ದೂರು

ಮದುವೆಯಾಗುವುದಾಗಿ ನಂಬಿಸಿ ವಂಚನೆ, ಬಿಜೆಪಿ ಶಾಸಕನ ಪುತ್ರನ ಮೇಲೆ ಯುವತಿ ದೂರು

Prabhu Chauhan: ಮದುವೆಯಾಗುವುದಾಗಿ ನಂಬಿಸಿ ನಿಶ್ಚಿತಾರ್ಥ ಮಾಡಿಕೊಂಡು ಬಳಿಕ ಲೈಂಗಿಕವಾಗಿಯೂ ಬಳಸಿಕೊಂಡು ಮೋಸ ಮಾಡಿದ್ದಾನೆಂದು ಯುವತಿ, ಶಾಸಕ ಪಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್ ವಿರುದ್ಧ ಆರೋಪಿಸಿದ್ದು, ಈ ಸಂಬಂಧ ನ್ಯಾಯ ಒದಗಿಸುವಂತೆ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

Byrathi Basavaraj: ರೌಡಿಶೀಟರ್‌ ಹತ್ಯೆ, ಶಾಸಕ ಬೈರತಿ ಬಸವರಾಜ್‌ಗೆ ಪೊಲೀಸ್‌ ನೋಟಿಸ್‌, ಐವರ ಬಂಧನ

ರೌಡಿಶೀಟರ್‌ ಹತ್ಯೆ, ಶಾಸಕ ಬೈರತಿ ಬಸವರಾಜ್‌ಗೆ ಪೊಲೀಸ್‌ ನೋಟಿಸ್‌, ಐವರ ಬಂಧನ

Byrathi Basavaraj: ಹೆಣ್ಣೂರು ಸಮೀಪದ ಬೈರತಿಯಲ್ಲಿರುವ ಬೈರತಿ ಬಸವರಾಜ್ ನಿವಾಸಕ್ಕೆ ಪೊಲೀಸರು ತೆರಳಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೊಟ್ಟಿದ್ದಾರೆ. ಎರಡು ದಿನಗಳ ಒಳಗೆ ವಿಚಾರಣೆಗೆ ಆಗಮಿಸುವಂತೆ ಬೈರತಿ ಬಸವರಾಜ್ ಪುತ್ರ ನೀರಜ್ ಅವರ ಕೈಗೆ ನೋಟಿಸ್ ನೀಡಿ ತೆರಳಿದ್ದಾರೆ.

Karnataka Weather: ರಾಜ್ಯದಲ್ಲಿ ಇಂದೂ ಮುಂದುವರಿಯಲಿದೆ ಮಳೆ ಅಬ್ಬರ; ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ರಾಜ್ಯದಲ್ಲಿ ಇಂದೂ ಮುಂದುವರಿಯಲಿದೆ ಮಳೆ ಅಬ್ಬರ

Karnataka Rains: ಇಂದು (ಶುಕ್ರವಾರ) ಕರಾವಳಿ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Tumkur (Gubbi) News: ಬಿದರೆ ಗ್ರಾಪಂ ಅಧ್ಯಕ್ಷರಾಗಿ ರೇಣುಕಮ್ಮ ರಾಮಕೃಷ್ಣಯ್ಯ ಅವಿರೋಧ ಆಯ್ಕೆ

ಬಿದರೆ ಗ್ರಾಪಂ ಅಧ್ಯಕ್ಷರಾಗಿ ರೇಣುಕಮ್ಮ ರಾಮಕೃಷ್ಣಯ್ಯ ಅವಿರೋಧ ಆಯ್ಕೆ

ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿಯಾಗಿ ತಾಪಂ ಇಓ ಶಿವಪ್ರಕಾಶ್ ನಡೆಸಿಕೊಟ್ಟರು. ಸಾಮಾನ್ಯ ಮಹಿಳೆ ಮೀಸಲಿನ ಅಧ್ಯಕ್ಷ ಸ್ಥಾನಕ್ಕೆ ಈ ಹಿಂದೆ ಎಂ.ಎಸ್. ವರಲಕ್ಷ್ಮೀ ರಮೇಶ್ ಸಲ್ಲಿಸಿದ್ದ ರಾಜೀನಾಮೆ ಹಿನ್ನಲೆ ತೆರವಾದ ಸ್ಥಾನಕ್ಕೆ ಚುನಾ ವಣೆ ನಡೆಸಲಾಗಿ ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ರೇಣುಕಮ್ಮ ಅವರನ್ನು ಅಧ್ಯಕ್ಷ ರಾಗಿ ಸರ್ವ ಸದಸ್ಯರ ಸಮ್ಮುಖದಲ್ಲಿ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.

Vijayapura (Indi) news: ಅಂಗನವಾಡಿ ಕಾರ್ಯಕರ್ತರಿಗೆ ಚುನಾವಣೆ ಕಾರ್ಯ: ಆದೇಶಕ್ಕೆ ಖಂಡನೆ

ಅಂಗನವಾಡಿ ಕಾರ್ಯಕರ್ತರಿಗೆ ಚುನಾವಣೆ ಕಾರ್ಯ: ಆದೇಶಕ್ಕೆ ಖಂಡನೆ

ಬಿ.ಎಲ್. ಓ ಕೆಲಸ ಮಾಡುವುದು ಅಂಗವಾಡಿ ಕಾರ್ಯಕರ್ತರಿಗೆ ಸಾಧ್ಯವಿಲ್ಲ. ಇದರಿಂದ ಮುಕ್ತಿ ನೀಡಬೇಕು ಅಂಗನವಾಡಿ ಕಾರ್ಯಕರ್ತರು ಈಗಾಗಲೇ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಚಿಕ್ಕಮಕ್ಕಳ ಆರೋಗ್ಯದ ಜೊತೆ ಎಲ್ಲಾ ರೀತಿಯಿಂದ ನೋಡಿಕೊಳ್ಳಬೇಕು. ಅಂಗನವಾಡಿ ಕಾರ್ಯ ಕರ್ತೆಯರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ ಅಂಗನವಾಡಿ ಬಾಡಿಗೆ ಕೂಡಾ ನೀಡುತ್ತಿಲ್ಲ ಒಟ್ಟಾರೆ ಅಂಗವಾಡಿ ಕಾರ್ಯಕರ್ತೆಯರಿಗೆ ಬಿ.ಎಲ್ ಓ ಆದೇಶ ರದ್ದುಪಡಿಸಬೇಕು

ಅಭಿವೃದ್ಧಿ ಕಾಮಗಾರಿಗಳ ಜೊತೆ ಶಾಲೆಗಳ ಭೇಟಿ ನಮ್ಮ ಜವಾಬ್ದಾರಿ: ಶಾಸಕ ಸಿ.ಬಿ. ಸುರೇಶ್‌ಬಾಬು

ಅಭಿವೃದ್ಧಿ ಕಾಮಗಾರಿಗಳ ಜೊತೆ ಶಾಲೆಗಳ ಭೇಟಿ ನಮ್ಮ ಜವಾಬ್ದಾರಿ

ಕಳೆದ ಎರಡು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ನಮ್ಮ ತಾಲ್ಲೂಕು ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿದೆ. ಇದಕ್ಕೆ ಇಲ್ಲಿನ ಶಿಕ್ಷಕರು ಹಾಗೂ ಮಕ್ಕಳೇ ಕಾರಣ. ಈ ವರ್ಷವೂ ರಾಜ್ಯ ಮಟ್ಟದಲ್ಲಿ ನಮ್ಮ ತಾಲ್ಲೂಕಿನ ಹೆಸರು ಫಲಿತಾಂಶದಲ್ಲಿ ಬರಬೇಕು ಎಂಬ ಉದ್ದೇಶದಿಂದ ಪ್ರತಿ ಭಾನುವಾರ ಎಸ್‌ಎಸ್‌ ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರಗಳನ್ನು ಆಯೋಜಿಸಲಾಗಿದೆ.

Loading...