ಸೆಮಿ ಪಂದ್ಯದಲ್ಲಿ ಮಿಂಚಿದ ಮಂಗಳೂರು ಮೂಲದ ಜೆಮಿಮಾ ರಾಡ್ರಿಗಸ್
ಜೆಮಿಮಾ ರಾಡ್ರಿಗಸ್ ಅವರಿಗೆ ಇದು ಚೊಚ್ಚಲ ವಿಶ್ವಕಪ್ ಟೂರ್ನಿಯಾಗಿದೆ. ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಜೆಮಿಮಾ ಕ್ರೀಸ್ನಲ್ಲಿ ಬೇರೂರಿ ನಿಂತು ಆಸೀಸ್ ಬೌಲರ್ಗಳನ್ನು ಬೆಂಡೆತ್ತಿದರು. ತಂಡದ ಗೆಲುವಿಗೆ ಟೊಂಕ ಕಟ್ಟಿ ನಿಂತ ಅವರು ಶತಕ ಬಾರಿಸಿದರೂ ಸಂಭ್ರಮಿಸಲಿಲ್ಲ. ತಂಡವನ್ನು ಗೆಲುವಿನ ದಡ ಸೇರಿಸುವುದೇ ಅವರ ಪ್ರಧಾನ ಲಕ್ಷ್ಯವಾಗಿತ್ತು. ತಂಡ ಗೆಲ್ಲುತ್ತಿದ್ದಂತೆ ಭಾವುಕರಾದ ಜೆಮಿಮಾ ಮೈದಾನದಲ್ಲೇ ಸಂತಸದಿಂದ ಕಣ್ಣೀರು ಸುರಿಸಿದರು.
 
             
         
         
         
         
         
         
         
         
         
         
         
         
         
         
         
         
         
         
         
         
         
         
        