ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ನೇಮಕಾತಿ ಪ್ರಕ್ರಿಯೆಗೆ ಕೆಪಿಎಸ್‌ಸಿ, ಕೆಇಎ ಕೈಗೊಂಡ ಕ್ರಮ ಪರಿಶೀಲಿಸಲು ತಜ್ಞರ ಸಮಿತಿ ರಚನೆಗೆ ಸಿಎಂ ಸೂಚನೆ

ನೇಮಕಾತಿ ಪ್ರಕ್ರಿಯೆ ಪರಿಶೀಲನೆಗೆ ತಜ್ಞರ ಸಮಿತಿ ರಚಿಸಲು ಸಿಎಂ ಸೂಚನೆ

CM DK Shivakumar: ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆಸಲಾಗಿದ್ದು, ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ, ಕಟ್ಟುನಿಟ್ಟಿನಿಂದ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

KAS Recruitment 2026: 319 ಕೆಎಎಸ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ; ನೇಮಕಾತಿಯ ಸಂಪೂರ್ಣ ವಿವರ ಇಲ್ಲಿದೆ

319 ಕೆಎಎಸ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

KPSC Gazetted Probationers Recruitment: 319 ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು 2026ರ ನವೆಂಬರ್ 15 ರಂದು ನಡೆಸಲು ತಾತ್ಕಾಲಿಕ ದಿನಾಂಕ ನಿಗದಿಪಡಿಸಲಾಗಿದೆ. ನೇಮಕಾತಿ ಕುರಿತ ಸಂಪೂರ್ಣ ವಿವರ ಇಲ್ಲಿ ನೀಡಲಾಗಿದೆ.

Annabrahma Chaturmasya Vrata: ಅಕಾಲದಲ್ಲಿ ಸೇವಿಸಿದ ಆಹಾರ ಆರೋಗ್ಯಕ್ಕೆ ಹಾನಿಕಾರಕ: ರಾಘವೇಶ್ವರ ಶ್ರೀ

ಅಕಾಲದಲ್ಲಿ ಸೇವಿಸಿದ ಆಹಾರ ಆರೋಗ್ಯಕ್ಕೆ ಹಾನಿಕಾರಕ: ರಾಘವೇಶ್ವರ ಶ್ರೀ

Raghaveshwara Bharathi Swamiji: ಎಷ್ಟೇ ಉತ್ತಮ ಆಹಾರವಾಗಿದ್ದರೂ ಅಕಾಲದಲ್ಲಿ ಸೇವಿಸಿದರೆ ಅದು ದೇಹಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತದೆ. ಸರಿಯಾದ ಸಮಯದಲ್ಲಿ ಸೇವಿಸಿದ ಆಹಾರ ದೇಹಕ್ಕೆ ಪೋಷಣೆ ನೀಡುತ್ತದೆ. ಆದರೆ ಸಮಯ ಮೀರಿ ಅಥವಾ ಅಸಮಯದಲ್ಲಿ ಸೇವಿಸಿದರೆ ಅದೇ ಆಹಾರ ದುಷ್ಪರಿಣಾಮ ಉಂಟುಮಾಡುತ್ತದೆ ಎಂದು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಕಳ್ಳತನವಾಗಿದ್ದ ವಸ್ತುಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಎಸ್ಪಿ ಯಶೋಧಾ ವಂಟಗೋಡಿ

ಹಾವೇರಿಯಲ್ಲಿ ಕಳ್ಳತನವಾಗಿದ್ದ ವಸ್ತುಗಳು ವಾರಸುದಾರರಿಗೆ ಹಸ್ತಾಂತರ

Haveri News: ಹಾವೇರಿ ಜಿಲ್ಲೆಯಲ್ಲಿ ದಾಖಲಾದ ವಿವಿಧ ಸ್ವತ್ತಿನ ಅಪರಾಧ ಪ್ರಕರಣಗಳಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದ ನಗದು ಹಣ, ಮೊಬೈಲ್ ಫೋನ್‌ಗಳು, ಚಿನ್ನಾಭರಣ ಸೇರಿದಂತೆ ಬೆಲೆಬಾಳುವ ವಸ್ತುಗಳು ಹಾಗೂ ದ್ವಿಚಕ್ರ ವಾಹನಗಳನ್ನು ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅವುಗಳ ನಿಜವಾದ ವಾರಸುದಾರರಿಗೆ ಗುರುವಾರ ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ನಡೆದ ಪ್ರಾಪರ್ಟಿ ಪರೇಡ್ ಮೂಲಕ ಹಸ್ತಾಂತರಿಸಲಾಯಿತು.

ಎರಡು ತಿಂಗಳಾದರೂ ವಿದ್ಯಾರ್ಥಿಗಳಿಗಿಲ್ಲ ಶೂ, ಸಾಕ್ಸ್, ನೋಟ್‌ಬುಕ್ಸ್‌; ಸರ್ಕಾರದ ನಿರ್ಲಕ್ಷ್ಯಕ್ಕೆ ಆಕ್ರೋಶ

ಎರಡು ತಿಂಗಳಾದರೂ ವಿದ್ಯಾರ್ಥಿಗಳಿಗಿಲ್ಲ ಶೂ, ಸಾಕ್ಸ್, ನೋಟ್‌ಬುಕ್ಸ್‌!

Chikkaballapur News: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ನೋಟ್‌ಬುಕ್ ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳನ್ನು ವಿತರಿಸಬೇಕು ಎಂದು ಆಗ್ರಹಿಸಿ, ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಹಾಗೂ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಓ) ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಗಾಂಜಾ ದಂಧೆಯ ಕಿಂಗ್‌ಪಿನ್!

ಪೊಲೀಸ್ ಸಿಬ್ಬಂದಿಯ ಪುತ್ರನೇ ಗಾಂಜಾ ದಂಧೆಯ ಕಿಂಗ್‌ಪಿನ್

Tumkur News: ಪೊಲೀಸ್ ಸಿಬ್ಬಂದಿಯ ಪುತ್ರ ಗ್ಯಾಂಗ್ ಕಟ್ಟಿಕೊಂಡು ದುಬಾರಿ 'ಹೈಡ್ರೋ ಗಾಂಜಾ' ಮಾರಾಟ ಮಾಡುತ್ತಿದ್ದ ಆಘಾತಕಾರಿ ಪ್ರಕರಣ ತುಮಕೂರು ನಗರದಲ್ಲಿ ಬೆಳಕಿಗೆ ಬಂದಿದೆ. ಪೊಲೀಸರ ನೂತನ 'ಕ್ಯೂಆರ್ ಕೋಡ್' ತಂತ್ರಜ್ಞಾನದ ರಹಸ್ಯ ಕಾರ್ಯಾಚರಣೆಯಿಂದ ಈ ಕರಾಳ ದಂಧೆ ಬಯಲಾಗಿದೆ.

ವಿಧಾನ ಪರಿಷತ್ ಚುನಾವಣೆ; ಮರು ಮತ ಎಣಿಕೆಯಲ್ಲಿ ಎಂ.ಕೆ. ಪ್ರಾಣೇಶ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡಗೆ ಗೆಲುವು

ಮರು ಮತ ಎಣಿಕೆಯಲ್ಲಿ ಕೈ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಗೆಲುವು

Chikkamagaluru MLC Election Recount: 2021ರ ಡಿಸೆಂಬರ್‌ನಲ್ಲಿ ನಡೆದಿದ್ದ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಎಂ.ಕೆ. ಪ್ರಾಣೇಶ್ ಅವರು 6 ಮತಗಳಿಂದ ಗೆದ್ದಿದ್ದರು. ಆದರೆ, ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸಿರುವುದನ್ನು ಆಕ್ಷೇಪಿಸಿ ಗಾಯತ್ರಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಮರು ಎಣಿಕೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಗೆಲುವು ಪಡೆದಿದ್ದಾರೆ.

Kundapur Murder: ಕುಂದಾಪುರದ ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!

ಕುಂದಾಪುರದ ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!

ಉಡುಪಿ ಜಿಲ್ಲೆಯ ಕುಂದಾಪುರ ನಗರದ ಹೋಲಿ ರೋಸರಿ ಚರ್ಚ್‌ ಎದುರು ವ್ಯಕ್ತಿಯೊಬ್ಬನ ಕೊಲೆ ನಡೆದಿದೆ. ಹಣಕಾಸಿನ ವ್ಯವಹಾರ ಹಾಗೂ ಇತರ ವ್ಯವಹಾರದ ವಿಚಾರದಲ್ಲಿದ್ದ ಮನಸ್ತಾಪ ಕಾರಣವೆಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Cauvery Water Dispute: ಬಂದ್‌ ಬೇಡ; ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ಹಿತ ಕಾಯಲು ನಾವು ಬದ್ಧ ಎಂದ ಸಿಎಂ ಡಿಕೆಶಿ

ಪರಿಸ್ಥಿತಿ ತಿಳಿಯಾದ ಬಳಿಕ ಸಿಎಂ ವಿಜಯ್ ಜತೆ ಸಭೆ: ಮುಖ್ಯಮಂತ್ರಿ ಡಿಕೆಶಿ

“ನಾನು ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು, ರಾಜ್ಯದ ಹಿತಕ್ಕೆ ಅವರ ಸಲಹೆ ಪಡೆಯುತ್ತೇವೆ. ಸರ್ವಪಕ್ಷ ಸಭೆಯಲ್ಲಿ ಅವರು ಬರಲಿ, ಅವರ ಸಲಹೆ ನೀಡಲಿ. ರಾಜ್ಯದ ಹಿತಕ್ಕೆ ನಾವು ಬದ್ಧರಾಗೋಣ. ಜುಲೈ ಅಂತ್ಯದವರೆಗೆ ನಾವು ತಮಿಳುನಾಡಿಗೆ 0.6 ಟಿಎಂಸಿ ನೀರನ್ನು ಮಾತ್ರ ತಮಿಳುನಾಡಿಗೆ ಹರಿಸಿದ್ದು, ಕಳೆದ 100 ವರ್ಷಗಳಲ್ಲಿ ತಮಿಳುನಾಡಿಗೆ ಹರಿಸಲಾಗಿರುವ ಅತ್ಯಂತ ಕಡಿಮೆ ಪ್ರಮಾಣದ ನೀರಾಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ರೈಲು ನಿಲ್ದಾಣದ ಸಮೀಪ ಯುವಕನ ಶವ ಪತ್ತೆ; ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಶಂಕೆ

ಚಿಕ್ಕಬಳ್ಳಾಪುರ ರೈಲು ನಿಲ್ದಾಣದ ಸಮೀಪ ಯುವಕನ ಶವ ಪತ್ತೆ

Chikkaballapur News: ಚಿಕ್ಕಬಳ್ಳಾಪುರ ನಗರದ ರೈಲು ನಿಲ್ದಾಣದ ಸಮೀಪ ಯುವಕನೊಬ್ಬನ ಶವ ಪತ್ತೆಯಾಗಿದ್ದು, ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಹತ್ಯೆಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಸಚಿವ ಸಂಪುಟ ವಿಸ್ತರಣೆಯ ದೊಂಬರಾಟ ಬಿಡಿ, ಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಿ: ಸಿಎಂಗೆ ಡಿಕೆಶಿಗೆ ಯಡಿಯೂರಪ್ಪ ಆಗ್ರಹ

ದೊಂಬರಾಟ ಬಿಡಿ, ಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಿ: ಬಿಎಸ್‌ವೈ

BS Yediyurappa: ಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಾಮಾಣಿಕರಾಗಿದ್ದರೆ ಹನಿ ನೀರನ್ನೂ ಕೆಆರ್‌ಎಸ್‍ನಿಂದ ಬಿಡಲ್ಲ; ಅಗತ್ಯ ಬಿದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎನ್ನುತ್ತಿದ್ದರು. ಆದರೆ ಅವರು ಅದನ್ನು ಹೇಳದೆ ರಾಜಕೀಯ ದೊಂಬರಾಟ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.

Friendship Bands Fashion 2026: ಸ್ನೇಹಿತರ ದಿನಕ್ಕೆ ಟ್ರೆಂಡಿಯಾದ ಫ್ರೆಂಡ್‌ಶಿಪ್‌ ಬ್ಯಾಂಡ್‌ಗಳಿವು!

ಸ್ನೇಹಿತರ ದಿನಕ್ಕೆ ಟ್ರೆಂಡಿಯಾದ ಫ್ರೆಂಡ್‌ಶಿಪ್‌ ಬ್ಯಾಂಡ್‌ಗಳಿವು!

Friendship Bands: ಸ್ನೇಹಿತರ ದಿನದ ಅಂಗವಾಗಿ ವೈವಿಧ್ಯಮಯ ಫ್ರೆಂಡ್‌ಶಿಪ್‌ ಬ್ಯಾಂಡ್‌ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಈ ಸೀಸನ್‌ನಲ್ಲಿ ವೆರೈಟಿ ಫಂಕಿ ಹಾಗೂ ಜಂಕ್‌ ಜ್ಯುವೆಲ್ಸ್‌ ಕೆಟಗರಿಗೆ ಸೇರುವ ಫ್ರೆಂಡ್‌ಶಿಪ್‌ ಬ್ಯಾಂಡ್‌ಗಳು ಅತಿ ಹೆಚ್ಚು ಮಾರಾಟವಾಗುತ್ತಿದ್ದು, ಅದರಲ್ಲೂ ಮಿಕ್ಸ್‌ ಮ್ಯಾಚ್‌ ಡಿಸೈನ್‌ನವು ಹೆಚ್ಚು ಬಿಕರಿಯಾಗುತ್ತಿವೆ ಎನ್ನುತ್ತಾರೆ ಮಾರಾಟಗಾರರು. ಈ ಬಗ್ಗೆ ಇಲ್ಲಿದೆ ವರದಿ.

Jawa Yezdi: ಬೈಕ್ ಪ್ರಿಯರಿಗೆ ಹಬ್ಬದ ಬಂಪರ್‌ ಉಡುಗೊರೆ: 3 ಹೊಸ ಬೈಕ್‌ ಬಿಡುಗಡೆ ಮಾಡಿದ ಜಾವಾ ಯೆಜ್ಡಿ, ಇಲ್ಲಿದೆ ಬೆಲೆ, ಫೀಚರ್ಸ್

3 ಹೊಸ ಬೈಕ್‌ ಬಿಡುಗಡೆ ಮಾಡಿದ ಜಾವಾ ಯೆಜ್ಡಿ, ಇಲ್ಲಿದೆ ಬೆಲೆ, ಫೀಚರ್ಸ್

ದ್ವಿಚಕ್ರ ವಾಹನ ತಯಾರಕ ಸಂಸ್ಥೆ ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್ ತನ್ನ 2026ರ ಆವೃತ್ತಿಯ ಹೊಸ ಬೈಕ್‌ಗಳನ್ನು ಅದ್ಧೂರಿಯಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. 'ಅನ್‌ಟೇಮ್ಡ್ ಟ್ರಿನಿಟಿ' ಹೆಸರಿನಲ್ಲಿ ಮೂರು ಆಕರ್ಷಕ ಬಣ್ಣ ಮತ್ತು ವಿನ್ಯಾಸದ ಬೈಕ್‌ಗಳನ್ನು ಬಿಡುಗಡೆ ಮಾಡಲಾಗಿದೆ.

ಡ್ರಗ್ಸ್‌ಗೆ  ನೋ, ಕನಸುಗಳಿಗೆ ಹೌದು ಹೇಳಿ; ಯುವಜನತೆಗೆ ಶಾಸಕ ಭೀಮಣ್ಣ ನಾಯ್ಕ ಕಿವಿಮಾತು

ಮಾದಕ ವ್ಯಸನ ವಿರುದ್ಧ ಜಾಗೃತಿ: ಯುವಜನತೆಗೆ ಶಾಸಕ ಭೀಮಣ್ಣ ನಾಯ್ಕ ಕಿವಿಮಾತು

Sirsi News: ಸಹನೆ ಮತ್ತು ತಾಳ್ಮೆಯನ್ನು ಜೀವನದಲ್ಲಿ ಅಳವಡಿಸಿಕೊಂಡು, ಯಾವುದೇ ವ್ಯಸನಕ್ಕೆ ದಾಸರಾಗದೆ ಸಹಬಾಳ್ವೆಯ ಬದುಕು ಸಾಗಿಸಿದಾಗ ಮಾತ್ರ ನಮ್ಮ ಪೂರ್ವಜರು ಕಂಡ ರಾಮರಾಜ್ಯದ ಕನಸು ನನಸಾಗುತ್ತದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ಆಕ್ರೋಶ; ಆಗಸ್ಟ್‌ 13ಕ್ಕೆ ಕರ್ನಾಟಕ ಬಂದ್‌

ಆಗಸ್ಟ್‌ 13ಕ್ಕೆ ಕರ್ನಾಟಕ ಬಂದ್‌

Karnataka Bandh: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ಕ್ರಮದ ವಿರುದ್ಧ ಕರ್ನಾಟಕ ಬಂದ್ ಮಾಡಲು ಕನ್ನಡ ಪರ ಸಂಘಟನೆಗಳು ಕರೆ ನೀಡಿದೆ. ಹಲವು ಸಂಘಟನೆಗಳು ನಡೆಸಿದ ಸಭೆಯಲ್ಲಿ ಕರ್ನಾಟಕ ಬಂದ್​ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಂಡಿವೆ. ಆಗಸ್ಟ್​ 13 ರಂದು ಕರ್ನಾಟಕ ಬಂದ್​​ಗೆ ವಾಟಾಳ್​ ನಾಗರಾಜ್​ ಕರೆ ನೀಡಿದ್ದಾರೆ.

ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌; ಜಾಮೀನು ಮಂಜೂರು

ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌; ಜಾಮೀನು ಮಂಜೂರು

ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್‌ 15ರಂದು ನಡೆದಿದ್ದ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಧಾರವಾಡ ಕ್ಷೇತ್ರದ ಶಾಸಕ ವಿನಯ ಕುಲಕರ್ಣಿಗೆ ಬಿಗ್‌ ರಿಲೀಪ್‌ ಸಿಕ್ಕಿದೆ. 5 ಲಕ್ಷ ರೂಪಾಯಿ ಬಾಂಡ್, ಇಬ್ಬರ ಶ್ಯೂರಿಟಿ ಪಡೆದು ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

Kaiwara News: ಗುರುಪೂಜಾ ಸಂಗೀತೋತ್ಸವಕ್ಕೆ ವಿದ್ಯುಕ್ತ ತೆರೆ

ಗುರುಪೂಜಾ ಸಂಗೀತೋತ್ಸವಕ್ಕೆ ವಿದ್ಯುಕ್ತ ತೆರೆ

ಗುರುಪೂರ್ಣಿಮೆಯ ಅಂಗವಾಗಿ ಆಯೋಜಿಸಿದ್ದ ಸಂಗೀತೋತ್ಸವದಲ್ಲಿ ರಾಜ್ಯದ ವಿವಿಧ ಭಾಗ ಗಳಿಂದ ಆಗಮಿಸಿದ್ದ ಖ್ಯಾತ ಸಂಗೀತ ವಿದ್ವಾಂಸರು ಹಾಗೂ ನೂರಾರು ಭಜನಾ ತಂಡಗಳು ನಿರಂತರವಾಗಿ ಸಂಗೀತ ಸೇವೆ ಸಲ್ಲಿಸಿದವು. ಮೂರು ದಿನಗಳ ಕಾಲ ಸಾವಿರಾರು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗುರುಪೂಜೆ, ಸಂಗೀತ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು

Chikkaballapur News: ಶಿಕ್ಷಣದ ಜೊತೆಗೆ ಸ್ವಂತತನ ಬೆಳೆದಾಗಲೇ ಹಿಂಸೆ ದೂರವಾಗುತ್ತದೆ: ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್

ಶಿಕ್ಷಣದ ಜೊತೆಗೆ ಸ್ವಂತತನ ಬೆಳೆದಾಗಲೇ ಹಿಂಸೆ ದೂರವಾಗುತ್ತದೆ

ನಗರದ ಹೊರವಲಯದ ಸಿ.ವಿ.ವಿ. ಕ್ಯಾಂಪಸ್‌ನ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಶ್ರೀ ಕೆ.ವಿ. ಮತ್ತು ಪಂಚಗಿರಿ ಶಿಕ್ಷಣ ದತ್ತಿಗಳ ೩೦ನೇ ದತ್ತಿ ದಿನಾಚರಣೆ ಹಾಗೂ ಶಿಕ್ಷಣ ತಜ್ಞ, ಮಾಜಿ ನಗರಸಭೆ ಅಧ್ಯಕ್ಷ ದಿವಂಗತ ಸಿ.ವಿ. ವೆಂಕಟರಾಯಪ್ಪ ಅವರ 111ನೇ ಜನ್ಮಜಯಂತಿ ಕಾರ್ಯ ಕ್ರಮದಲ್ಲಿ ದತ್ತಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದರು.

Gauribidanur News: ರಾಜಕೀಯ ಪಕ್ಷಗಳಿಗೆ ಮತದಾರರ ಪಟ್ಟಿಗಳ ವಿತರಣೆ; ಹೆಸರು ಕೈಬಿಟ್ಟಿದ್ದರೆ ಮಾಹಿತಿ ನೀಡುವಂತೆ ಮನವಿ

ಗೌರಿಬಿದನೂರಿನಲ್ಲಿ ಶೇ.90.61ರಷ್ಟು ಎಸ್‌ಐಆರ್ ಪ್ರಕ್ರಿಯೆ ಪೂರ್ಣ

ನಗರದ ತಾಲೂಕು ಕಚೇರಿಯಲ್ಲಿ ಗುರುವಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮತಗಟ್ಟೆ ಅಧಿಕಾರಿಗಳು ಸಂಗ್ರಹಿಸಿದ ಮತದಾರರ ಪಟ್ಟಿಗಳನ್ನು ವಿತರಿಸಿ ಅವರು ಮಾತನಾಡಿದರು. 20 ವರ್ಷಗಳ ಬಳಿಕ ಎಸ್‌ಐಆರ್ ಪ್ರಕ್ರಿಯೆ ನಡೆಯುತ್ತಿದ್ದು, ಜೂನ್ 16, 2026ರ ಮತದಾರರ ಪಟ್ಟಿ ಯಂತೆ ಕ್ಷೇತ್ರದಲ್ಲಿ 2,14,210 ಮತದಾರರಿದ್ದಾರೆ. ಎಲ್ಲರಿಗೂ ಗಣತಿ ನಮೂನೆ ವಿತರಿಸ ಲಾಗಿದ್ದು, ಈ ಪೈಕಿ 2,07,660 (ಶೇ.96.94) ಮತದಾರರ ಮ್ಯಾಪಿಂಗ್ ಪೂರ್ಣಗೊಂಡಿದೆ

Gudibande News: ಮೂಲಸೌಕರ್ಯ ಪರಿಶೀಲನೆಗೆ ಪುಲಸಾನಿವೊಡ್ಡು, ನಲ್ಲಗೊಂಡಯ್ಯಗಾರಹಳ್ಳಿ ಗ್ರಾಮಗಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಭೇಟಿ

ಹೈಕೋರ್ಟ್ ನಿರ್ದೇಶನದಂತೆ ಸ್ಥಳ ಪರಿಶೀಲನೆ; ಸಮಗ್ರ ವರದಿ ಸಲ್ಲಿಕೆಗೆ ಸಿದ್ಧತೆ

ಗ್ರಾಮಗಳಲ್ಲಿ ಸ್ವಚ್ಛತೆ ಕೊರತೆಯಿರುವುದು ಗಮನಕ್ಕೆ ಬಂದಿದ್ದು, ಮನೆಗಳ ಮುಂದೆ ಕಸ ಸಂಗ್ರಹ ವಾಗಿರುವುದರಿಂದ ಚರಂಡಿಗಳು ಮುಚ್ಚಿ ಸೊಳ್ಳೆಗಳ ಉತ್ಪತ್ತಿ ಹೆಚ್ಚುವ ಸಾಧ್ಯತೆ ಇದೆ. ಇದರಿಂದ ಸಾಂಕ್ರಾಮಿಕ ರೋಗಗಳ ಹರಡುವಿಕೆ ತಡೆಯಲು ಸಾರ್ವಜನಿಕರು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ವಚ್ಛತೆಗೆ ಆದ್ಯತೆ ನೀಡಬೇಕು

ಹಾಸನದಲ್ಲಿ ಘೋರ ಘಟನೆ; ಬಟ್ಟೆ ನೆನೆಸಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಮಗು ಸಾವು

ಹಾಸನದಲ್ಲಿ ಘೋರ ಘಟನೆ; ಬಕೆಟ್‌ಗೆ ಬಿದ್ದು 8 ತಿಂಗಳ ಮಗು ಸಾವು

ಹಾಸನ ನಗರದ ವಲ್ಲಭಭಾಯಿ ರಸ್ತೆಯಲ್ಲಿ ಘಟನೆ ನಡೆದಿದೆ. ತಾಯಿ ಬಕೆಟ್‌ನಲ್ಲಿ ಬಟ್ಟೆ ನೆನೆಯಲು ಹಾಕಿ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ತೆವಳುತ್ತಾ ಹೋದ ಕಂದಮ್ಮ ಬಕೆಟ್‌ನಲ್ಲಿ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Gauribidanur News: ಅನ್ನಸಂತರ್ಪಣೆ; ದೇವೇಗೌಡರ ರಾಜಕೀಯ ಪಯಣದಲ್ಲಿ ಚನ್ನಮ್ಮ ಅವರ ಪಾತ್ರ ಅಪಾರ: ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ

ಚನ್ನಮ್ಮ ದೇವೇಗೌಡರಿಗೆ ಜೆಡಿಎಸ್‌ನಿಂದ ಭಾವಪೂರ್ಣ ಶ್ರದ್ಧಾಂಜಲಿ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಪತ್ನಿ ಚನ್ನಮ್ಮ ದೇವೇಗೌಡ ಅವರ ನಿಧನದ ಅಂಗವಾಗಿ ನಗರದ ಗಾಂಧಿ ವೃತ್ತದಲ್ಲಿ ಜೆಡಿಎಸ್ ತಾಲ್ಲೂಕು ಘಟಕದ ವತಿಯಿಂದ ಶ್ರದ್ಧಾಂಜಲಿ ಸಭೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಚನ್ನಮ್ಮ ದೇವೇಗೌಡ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ನಮನ ಅರ್ಪಿಸಿದರು

Gudibande News: ಸಮಾಜದ ಧ್ವನಿಯಾಗಿ ಪತ್ರಿಕಾ ರಂಗ ಕಾರ್ಯನಿರ್ವಹಿಸಬೇಕು: ಬಿಇಒ ಕಾಳೇಗೌಡ

ಗುಡಿಬಂಡೆಯಲ್ಲಿ ಅರ್ಥಪೂರ್ಣವಾಗಿ ಪತ್ರಿಕಾ ದಿನಾಚರಣೆ

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗವು ಸಮಾಜದ ಅಂಕು ಡೊಂಕುಗಳನ್ನು ತಿದ್ದುವುದರ ಜೊತೆಗೆ ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಮಹತ್ತರ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎ. ಕಾಳೇಗೌಡ ಹೇಳಿದರು. ಪಟ್ಟಣದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ವತಿಯಿಂದ ಗುರುವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Chinthamani News: 34 ವರ್ಷಗಳ ಕಳಂಕರಹಿತ ಸೇವೆ ಸಲ್ಲಿಸಿದ ಪೋಸ್ಟ್ ಮಾಸ್ಟರ್ ಇಸ್ಮಾಯಿಲ್‌ಗೆ ಆತ್ಮೀಯ ಬೀಳ್ಕೊಡುಗೆ

ಸಹೋದ್ಯೋಗಿಗಳಿಂದ ಸನ್ಮಾನ; ಕರ್ತವ್ಯನಿಷ್ಠ ಸೇವೆಗೆ ಪ್ರಶಂಸೆ

ಇಸ್ಮಾಯಿಲ್ ಅವರು 1992ರಲ್ಲಿ ಅಂಚೆ ಇಲಾಖೆಗೆ ಸೇರ್ಪಡೆಯಾಗಿ ಕೋಲಾರ ವಿಭಾಗದಲ್ಲಿ ಬಿಎ ಪದವಿ ಪಡೆದ ಬಳಿಕ ಸೇವೆಗೆ ಬಂದ ಮೊದಲ ಸಿಬ್ಬಂದಿಯಾಗಿದ್ದರು. ತಮ್ಮ ಸುದೀರ್ಘ ಸೇವಾವಧಿಯಲ್ಲಿ ಯಾವುದೇ ಕಪ್ಪುಚುಕ್ಕೆ ಯಿಲ್ಲದೆ ಕರ್ತವ್ಯ ನಿರ್ವಹಿಸಿದ್ದು, ಮೃದು ಸ್ವಭಾವ, ಶಿಸ್ತು ಮತ್ತು ಸೇವಾ ಬದ್ಧತೆಯಿಂದ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದಾರೆ.

Loading...